2023: ಮಾಡು ಇಲ್ಲವೆ ಮಡಿ ಪಂದ್ಯ; ಯುಪಿಡಬ್ಲ್ಯೂ ತಂಡವನ್ನು 135 ರನ್ ಗಳಿಗೆ ಕಟ್ಟಿಹಾಕಿದ ಆರ್ ಸಿಬಿ ಮಹಿಳೆಯರ ಪ್ರೀಮಿಯರ್ ಲೀಗ್ T20 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು () ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ್ದ ಯುಪಿ ವಾರಿಯರ್ಸ್ ತಂಡ 135 ರನ್‌ಗಳಿಗೆ ಸರ್ವಪತನ ಕಂಡಿದೆ. ಮುಂಬೈ: ಮಹಿಳೆಯರ ಪ್ರೀಮಿಯರ್ ಲೀಗ್ T20 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು () ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ್ದ ಯುಪಿ ವಾರಿಯರ್ಸ್ ತಂಡ 135 ರನ್‌ಗಳಿಗೆ ಸರ್ವಪತನ ಕಂಡಿದೆ.ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಯುಪಿ ವಾರಿಯರ್ಸ್ 135 ರನ್ ಗಳಿಗೆ ಆಲೌಟ್ ಆಗಿದ್ದು ಆರ್ ಸಿಬಿಗೆ ಗೆಲ್ಲಲು 136 ರನ್ ಗುರಿ ನೀಡಿದೆ.ವಾರಿಯರ್ಸ್ ಪರ ಗ್ರೇಸ್ ಹ್ಯಾರಿಸ್ ಗರಿಷ್ಠ 46 ರನ್ ಗಳಿಸಿದರು. ಆರ್‌ಸಿಬಿ ಪರ ಎಲ್ಲಿಸ್ ಪೆರ್ರಿ ಮೂರು ವಿಕೆಟ್ ಪಡೆದಿದ್ದಾರೆ. ಅಂಕಪಟ್ಟಿಯಲ್ಲಿ ಯುಪಿ ತಂಡವು ತನ್ನ ನಾಲ್ಕು ಪಂದ್ಯಗಳಲ್ಲಿ (2) ಗೆಲುವು ಮತ್ತು (2) ಸೋಲುಗಳೊಂದಿಗೆ ಮೂರನೇ ಸ್ಥಾನದಲ್ಲಿದೆ, ಆದರೆ ತಂಡವು ತನ್ನ ಎಲ್ಲಾ 5 ಪಂದ್ಯಗಳನ್ನು ಕಳೆದುಕೊಂಡು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.