2024: ಪ್ಲೇ ಆಫ್ ಹಾದಿ ಮತ್ತಷ್ಟು ಕಠಿಣ, ರಾಜಸ್ತಾನ ವಿರುದ್ಧ ಚೆನ್ನೈಗೆ ಭರ್ಜರಿ ಜಯ ಹಾಲಿ ಐಪಿಎಲ್ ಟೂರ್ನಿಯಲ್ಲಿ ಇಂದು ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ 5 ವಿಕೆಟ್ ಗಳ ಗೆಲುವು ಸಾಧಿಸುವ ಮೂಲಕ ಟೂರ್ನಿಯಲ್ಲಿ ಪ್ಲೇ ಆಫ್ ಕನಸು ಕಾಣುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹಾದಿಯನ್ನು ಮತ್ತಷ್ಟು ಕಠಿಣವಾಗಿಸಿದೆ. ಚೆನ್ನೈ: ಹಾಲಿ ಐಪಿಎಲ್ ಟೂರ್ನಿಯಲ್ಲಿ ಇಂದು ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ 5 ವಿಕೆಟ್ ಗಳ ಗೆಲುವು ಸಾಧಿಸುವ ಮೂಲಕ ಟೂರ್ನಿಯಲ್ಲಿ ಪ್ಲೇ ಆಫ್ ಕನಸು ಕಾಣುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹಾದಿಯನ್ನು ಮತ್ತಷ್ಟು ಕಠಿಣವಾಗಿಸಿದೆ.ಇಂದಿನ ಮಹತ್ವದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್‌ ( ) ವಿರುದ್ಧ ಚೆನ್ನೈ ಸೂಪರ್‌ ಕಿಂಗ್ಸ್‌ 5 ವಿಕೆಟ್‌ಗಳ ಅಂತರಿಂದ ಭರ್ಜರಿಯಾಗಿ ಗೆಲುವು ಸಾಧಿಸುವ ಮೂಲಕ ಪ್ಲೇಆಫ್‌ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಇಂದು ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ತಾನ ರಾಯಲ್ಸ್ ತಂಡ ನಿಗಧಿತ 20 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ ಕೇವಲ 141 ರನ್‌ ಗಳಿಸಲಷ್ಟೇ ಶಕ್ತವಾಯಿತು.ರಿಯಾನ್‌ ಪರಾಗ್‌ 47 ಹಾಗೂ ಧ್ರುವ್‌ ಜುರೆಲ್‌ 28 ಹೊರತುಪಡಿಸಿ ಯಾವೊಬ್ಬ ಆಟಗಾರನೂ ಸ್ಫೋಟಕ ಬ್ಯಾಟಿಂಗ್‌ ನಡೆಸದ ಕಾರಣ ಸಾಧಾರಣ ಮೊತ್ತ ದಾಖಲಿಸಿತು. ಸಿಎಸ್ ಕೆ ಪರ ಸಮರ್ಜಿತ್ ಸಿಂಗ್ 3 ವಿಕೆಟ್ ಪಡೆದರೆ, ತುಷಾರ್ ದೇಶಪಾಂಡೆ 2 ವಿಕೆಟ್ ಪಡೆದರು.ರಾಜಸ್ತಾನ ನೀಡಿದ 141ರನ್ ಗಳ ಸಾಧಾರಣ ಗುರಿಯನ್ನು ಬೆನ್ನತ್ತಿದ ಸಿಎಸ್‌ಕೆ 16 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು ಗುರಿ ಮುಟ್ಟಿತು. 💛 @ 3️⃣ 🙌 ▶️ ://./1JsX9W2grC# | # ../LkpwyKjEl9ಆರ್ ಸಿಬಿ ಪ್ಲೇಆಫ್ ಹಾದಿ ಮತ್ತಷ್ಟು ಕಠಿಣಸಿಎಸ್‌ಕೆ ಗೆಲುವಿನೊಂದಿಗೆ ಆರ್‌ಸಿಬಿ () ಮತ್ತಷ್ಟು ಒತ್ತಡಕ್ಕೆ ಸಿಲುಕಿದ್ದು, ಭಾನುವಾರವೇ (ಮೇ 12) ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಗೆಲ್ಲುವ ಜತೆಗೆ ಕೊನೆಯ ಪಂದ್ಯವನ್ನು ಸಿಎಸ್‌ಕೆ ವಿರುದ್ಧ ಗೆಲ್ಲಲೇಬೇಕಿದೆ. ಇದರೊಂದಿಗೆ ಬೇರೆ ತಂಡಗಳ ಸೋಲು-ಗೆಲುವು, ರನ್‌ರೇಟ್‌ ಲೆಕ್ಕಾಚಾರವೂ ನಿರ್ಣಾಯಕವಾಗಲಿದೆ.