ಐಸಿಸಿ ವಿಶ್ವಕಪ್: ಟೀಂ ಇಂಡಿಯಾ ಗೆಲುವಿಗೆ 257 ರನ್ ಟಾರ್ಗೆಟ್ ನೀಡಿದ ಬಾಂಗ್ಲಾ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ 17ನೇ ಪಂದ್ಯದಲ್ಲಿ ಭಾರತದ ವಿರುದ್ಧ ಬಾಂಗ್ಲಾದೇಶ ನಿಗದಿತ 50 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 256 ರನ್ ಸೇರಿಸಿದೆ. ಪುಣೆ: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ 17ನೇ ಪಂದ್ಯದಲ್ಲಿ ಭಾರತದ ವಿರುದ್ಧ ಬಾಂಗ್ಲಾದೇಶ ನಿಗದಿತ 50 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 256 ರನ್ ಸೇರಿಸಿದೆ.ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ, ತಂಜಿದ್ ಹಸನ್ ಹಾಗೂ ಲಿಟನ್ ದಾಸ್ ಅವರ ಆಕರ್ಷಕ ಅರ್ಧಶತಕಗಳ ನೆರವಿನಿಂದ ಗದಿತ 50 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 256 ರನ್ ಸೇರಿಸಿದೆ. ಈ ಮೂಲಕ ಟೂರ್ನಿಯಲ್ಲಿ ಸತತ ನಾಲ್ಕನೇ ಗೆಲುವಿನ ತವಕದಲ್ಲಿರುವ ಟೀಂ ಇಂಡಿಯಾ ಗೆಲುವಿಗೆ 257 ರನ್ ಗಳ ಟಾರ್ಗೆಟ್ ನೀಡಿದೆ.ಇದನ್ನು ಓದಿ: ವಿಶ್ವಕಪ್: ಬಾಂಗ್ಲಾ ವಿರುದ್ಧದ ಹಣಾಹಣಿಯಲ್ಲಿ ಹಾರ್ದಿಕ್ ಪಾಂಡ್ಯಗೆ ಗಾಯಬಾಂಗ್ಲಾದೇಶ ಪರ ಆರಂಭಿಕ ಆಟಗಾರ ಲಿಟನ್ ದಾಸ್ 66 ರನ್ ಗಳಿಸಿದರೆ, ಭಾರತದ ಪರ ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ ಹಾಗೂ ಮೊಹಮ್ಮದ್ ಸಿರಾಜ್ ಅವರು ತಲಾ ಎರಡು ವಿಕೆಟ್ ಪಡೆದು ಮಿಂಚಿದರು.