ಅಮಿತ್ ಶಾ ಭೇಟಿ ಮಾಡಿದ ಟೀಂ ಇಂಡಿಯಾ ಟಿ20 ನೂತನ ನಾಯಕ ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾದ ಪೂರ್ಣ ಪ್ರಮಾಣದ ಟಿ 20 ನಾಯಕನಾಗಿ ಆಯ್ಕೆಯಾಗಿರುವ ಹಾರ್ದಿಕ್ ಪಾಂಡ್ಯ ಅವರು ಶನಿವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಶನಿವಾರ ಭೇಟಿ ಮಾಡಿದರು. ನವದೆಹಲಿ: ಟೀಂ ಇಂಡಿಯಾದ ಪೂರ್ಣ ಪ್ರಮಾಣದ ಟಿ 20 ನಾಯಕನಾಗಿ ಆಯ್ಕೆಯಾಗಿರುವ ಹಾರ್ದಿಕ್ ಪಾಂಡ್ಯ ಅವರು ಶನಿವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಶನಿವಾರ ಭೇಟಿ ಮಾಡಿದರು.ಜನವರಿ 3 ರಿಂದ ಪ್ರಾರಂಭವಾಗುವ ಮೂರು ಪಂದ್ಯಗಳ T20I ಶ್ರೀಲಂಕಾ ಸರಣಿಗೆ ನಾಯಕನಾಗಿ ನೇಮಕಗೊಂಡಿರುವ 27 ವರ್ಷದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಇಂದು ತಮ್ಮ ಕ್ರಿಕೆಟಿಗ ಸಹೋದರ ಕೃನಾಲ್ ಜೊತೆ ಅಮಿತ್ ಶಾ ಅವರನ್ನು ಭೇಟಿ ಮಾಡಿದರು.ಇದನ್ನು ಓದಿ: ಪಾಂಡ್ಯಾ ಸಹೋದರರನ್ನು ಭೇಟಿ ಮಾಡಿದ ನಟ ಯಶ್: 'ಕೆಜಿಎಫ್-3' ಕುತೂಹಲ ಮೂಡಿಸಿದ ಹಾರ್ದಿಕ್ ಕ್ಯಾಪ್ಷನ್!"ಗೌರವಾನ್ವಿತ ಗೃಹ ಸಚಿವ ಅಮಿತ್ ಶಾ ಜೀ ಅವರೊಂದಿಗೆ ಅಮೂಲ್ಯ ಸಮಯ ಕಳೆಯಲು ನಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಧನ್ಯವಾದಗಳು. ನಿಮ್ಮನ್ನು ಭೇಟಿಯಾಗಿದ್ದು ಒಂದು ಗೌರವ ಮತ್ತು ಅವಕಾಶ" ಎಂದು ಹಾರ್ದಿಕ್ ಮತ್ತು ಅವರ ಸಹೋದರ ಅಮಿತ್ ಶಾ ಅವರೊಂದಿಗೆ ಮಾತನಾಡುತ್ತಿರುವ ಫೋಟೋ ಟ್ವೀಟ್ ಮಾಡಿದ್ದಾರೆ.