ಇಂಗ್ಲೆಂಡ್ ವಿರುದ್ಧದ ಸರಣಿ ಜಯ: ಐಸಿಸಿ ರ್ಯಾಂಕಿಂಗ್ ನಲ್ಲಿ 3ನೇ ಸ್ಥಾನ ಭದ್ರಪಡಿಸಿಕೊಂಡ ಟೀಂ ಇಂಡಿಯಾ! ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಕೈವಶ ಮಾಡಿಕೊಳ್ಳುವ ಮೂಲಕ ಭಾರತ ಕ್ರಿಕೆಟ್ ತಂಡ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ತನ್ನ ಮೂರನೇ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ. ದುಬೈ: ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಕೈವಶ ಮಾಡಿಕೊಳ್ಳುವ ಮೂಲಕ ಭಾರತ ಕ್ರಿಕೆಟ್ ತಂಡ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ತನ್ನ ಮೂರನೇ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ.ಪುರುಷರ ಏಕದಿನ ತಂಡ ರ್ಯಾಂಕಿಂಗ್‌ನಲ್ಲಿ ಈ ಹಿಂದೆ ಪಾಕಿಸ್ತಾನವನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಿದ್ದ ಭಾರತ ತಂಡ ಇದೀಗ ತನ್ನ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ.ಇದನ್ನೂ ಓದಿ: 3ನೇ ಏಕದಿನ: ಇಂಗ್ಲೆಂಡ್ ವಿರುದ್ಧ ಭರ್ಜರಿ ಶತಕ; ಅಪರೂಪದ ದಾಖಲೆ ಬರೆದ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ರಿಷಬ್ ಪಂತ್ ಅವರ ಶತಕದ ನೆರವಿನಿಂದ ಭಾರತವು ಭಾನುವಾರ ನಡೆದ ಇಂಗ್ಲೆಂಡ್ ವಿರುದ್ಧ ಮೂರನೇ ಪಂದ್ಯದಲ್ಲಿ ಜಯ ಗಳಿಸಿ, ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಲ್ಲಿ ಕೈವಶ ಮಾಡಿಕೊಂಡಿತು. ಈ ಸರಣಿ ಬಳಿಕ ಐಸಿಸಿ ತನ್ನ ಏಕದಿನ ಶ್ರೇಯಾಂಕ ಪಟ್ಟಿಯನ್ನು ಪುನರ್ ಪರಿಷ್ಕರಣೆ ಮಾಡಿದ್ದು, ಪಟ್ಟಿಯಲ್ಲಿ ತನ್ನ ಅಂಕಗಳಿಕೆಯನ್ನು 109ಕ್ಕೆ ಏರಿಸಿಕೊಂಡಿರುವ ಭಾರತ ತನ್ನ ಮೂರನೇ ಸ್ಥಾನವನ್ನು ಭದ್ರಪಡಿಸಿಕೊಂಡಿದೆ.ಇದನ್ನೂ ಓದಿ: ರಿಷಬ್ ಪಂತ್ ಭರ್ಜರಿ ಶತಕ: ಇಂಗ್ಲೆಂಡ್ ನೆಲದಲ್ಲಿ ಏಕದಿನ ಸರಣಿ ಗೆದ್ದ ಟೀಂ ಇಂಡಿಯಾ! ಉಳಿದಂತೆ ನ್ಯೂಜಿಲೆಂಡ್ 128 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದು, ಇಂಗ್ಲೆಂಡ್ 121 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಪಾಕಿಸ್ತಾನ 106 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿದ್ದು, ಆಸ್ಟ್ರೇಲಿಯಾ ತಂಡ 101 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿದೆ.ಇದನ್ನೂ ಓದಿ: ಆರ್ಥಿಕ ಬಿಕ್ಕಟ್ಟು: ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಏಷ್ಯಾಕಪ್ 2022 ಯುಎಇಗೆ ಸ್ಥಳಾಂತರ ಸಾಧ್ಯತೆಇನ್ನು ಭಾರತ ಈ ತಿಂಗಳು ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಸರಣಿಯನ್ನಾಡಲಿದ್ದು, ಆ ಮೂಲಕ ಭಾರತವು ತನ್ನ ಮುನ್ನಡೆಯನ್ನು ಮತ್ತಷ್ಟು ವಿಸ್ತರಿಸುವ ಅವಕಾಶವನ್ನು ಹೊಂದಿದೆ. ಪಾಕಿಸ್ತಾನದ ಮುಂದಿನ ನಿಯೋಜನೆ ಮುಂದಿನ ತಿಂಗಳು ನೆದರ್ಲೆಂಡ್ಸ್ ವಿರುದ್ಧ ಮೂರು ಪಂದ್ಯಗಳ ಸರಣಿಯಾಗಿದೆ.