ಕೆಎಲ್ ರಾಹುಲ್ ಗೆ ಯಶಸ್ವಿ ಶಸ್ತ್ರ ಚಿಕಿತ್ಸೆ: ಶೀಘ್ರ ತಂಡಕ್ಕೆ ವಾಪಸ್ ಆಗುತ್ತೇನೆ ಎಂದ ಕ್ರಿಕೆಟಿಗ ಭಾರತದ ಹಿರಿಯ ಬ್ಯಾಟರ್ ಕೆಎಲ್ ರಾಹುಲ್ ಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಸಾಧ್ಯವಾದಷ್ಟು ಬೇಗ ರಾಷ್ಟ್ರೀಯ ತಂಡಕ್ಕೆ ಮರಳಲು ಎದುರು ನೋಡುತ್ತಿದ್ದೇನೆ ಎಂದು ಕ್ರಿಕೆಟಿಗ ಪೋಸ್ಟ್ ಮಾಡಿದ್ದಾರೆ. ಮುಂಬೈ: ಭಾರತದ ಹಿರಿಯ ಬ್ಯಾಟರ್ ಕೆಎಲ್ ರಾಹುಲ್ ಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಸಾಧ್ಯವಾದಷ್ಟು ಬೇಗ ರಾಷ್ಟ್ರೀಯ ತಂಡಕ್ಕೆ ಮರಳಲು ಎದುರು ನೋಡುತ್ತಿದ್ದೇನೆ ಎಂದು ಕ್ರಿಕೆಟಿಗ ಪೋಸ್ಟ್ ಮಾಡಿದ್ದಾರೆ.31ರ ವರ್ಷದ ಅವರು ಕೆಎಲ್ ರಾಹುಲ್ ಈ ತಿಂಗಳ ಆರಂಭದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಇಂಡಿಯನ್ ಪ್ರೀಮಿಯರ್ ಲೀಗ್‌ ಪಂದ್ಯದಲ್ಲಿ ತಮ್ಮ ಲಕ್ನೋ ಸೂಪರ್ ಜೈಂಟ್ಸ್‌ ತಂಡದ ಪರ ಫೀಲ್ಡಿಂಗ್ ಮಾಡುವಾಗ ತೊಡೆಯ ಗಾಯಕ್ಕೆ ಒಳಗಾಗಿದ್ದರು. ಬಳಿಕ ಇಡೀ ಐಪಿಎಲ್ ಟೂರ್ನಿಯಿಂದಲೇ ಹೊರ ಬಿದ್ದಿದ್ದರು. ಮಾತ್ರವಲ್ಲದೇ ಮುಂದಿನ ತಿಂಗಳು ಇಂಗ್ಲೆಂಡ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ () ಫೈನಲ್‌ನಿಂದಲೂ ಕೆಎಲ್ ರಾಹುಲ್ ಹೊರಗುಳಿದಿದ್ದರು.ಇದನ್ನೂ ಓದಿ: ಡಬ್ಲ್ಯುಟಿಸಿ ಫೈನಲ್‌: ಗಾಯಾಳು ಕೆಎಲ್ ರಾಹುಲ್ ಬದಲಿಗೆ ಟೀಂ ಇಂಡಿಯಾ ಟೆಸ್ಟ್ ತಂಡದಲ್ಲಿ ಇಶಾನ್ ಕಿಶನ್‌ಗೆ ಸ್ಥಾನ!ಇದೀಗ ತೊಡೆಯ ಭಾಗದ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ರಾಹುಲ್ ಶೀಘ್ರ ತಂಡಕ್ಕೆ ಮರಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. (@)ಈ ಬಗ್ಗೆ ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿರುವ ರಾಹುಲ್, "ಎಲ್ಲರಿಗೂ ನಮಸ್ಕಾರ, ನಾನು ನನ್ನ ಶಸ್ತ್ರಚಿಕಿತ್ಸೆಯನ್ನು ಮುಗಿಸಿದ್ದೇನೆ. ಅದು ಯಶಸ್ವಿಯಾಗಿದೆ. ನಾನು ಆರಾಮದಾಯಕವಾಗಿದ್ದೇನೆ ಮತ್ತು ಎಲ್ಲವೂ ಸುಗಮವಾಗಿ ನಡೆದಿದೆ ಎಂದು ಖಚಿತಪಡಿಸಿಕೊಂಡಿದ್ದಕ್ಕಾಗಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೆ ದೊಡ್ಡ ಧನ್ಯವಾದಗಳು.. ನಾನೀಗ ಅಧಿಕೃತವಾಗಿ ಚೇತರಿಕೆಯ ಹಾದಿಯಲ್ಲಿದ್ದೇನೆ. ನನ್ನ ಅತ್ಯುತ್ತಮ ಸ್ಥಿತಿಗೆ ಮರಳಲು ಮತ್ತು ಮತ್ತೆ ಮೈದಾನಕ್ಕೆ ಮರಳಲು ನಾನು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.ಇದನ್ನೂ ಓದಿ: ಟೀಂ ಇಂಡಿಯಾಗೆ ಭಾರಿ ಆಘಾತ: ಐಪಿಎಲ್ ಮಾತ್ರವಲ್ಲ, ಫೈನಲ್ ನಿಂದಲೂ ಕೆಎಲ್ ರಾಹುಲ್ ಔಟ್!ರಾಹುಲ್ ಬದಲಿಗೆ ಇಶಾನ್ ಕಿಶನ್ ಗೆ ಸ್ಥಾನ ಇನ್ನು ಜೂನ್ 7-12 ರವರೆಗೆ ಓವಲ್‌ನಲ್ಲಿ ನಡೆಯಲಿರುವ ಫೈನಲ್‌ಗಾಗಿ ಭಾರತ ತಂಡದಲ್ಲಿ ಕೆಎಲ್ ರಾಹುಲ್ ಬದಲಿಗೆ ಇಶಾನ್ ಕಿಶನ್ ಸ್ಥಾನ ಗಿಟ್ಟಿಸಿದ್ದಾರೆ. ಈ ವರ್ಷದ ಕೊನೆಯಲ್ಲಿ ಭಾರತದಲ್ಲಿ ನಡೆಯಲಿರುವ ಏಷ್ಯಾ ಕಪ್ ಮತ್ತು ವಿಶ್ವಕಪ್ ಸಮಯದಲ್ಲಿ ರಾಷ್ಟ್ರೀಯ ತಂಡಕ್ಕೆ ಮರಳುವ ಗುರಿಯನ್ನು ರಾಹುಲ್ ಹೊಂದಿದ್ದಾರೆ.