ಐಪಿಎಲ್ 2023: ಗುಜರಾತ್ ವಿರುದ್ಧ ರಾಜಸ್ಥಾನ ರಾಯಲ್ಸ್‌ಗೆ 3 ವಿಕೆಟ್ ಗೆಲುವು ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಐಪಿಎಲ್ನ 23ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್‌ ಮೂರು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಅಹಮ್ಮದಾಬಾದ್: ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಐಪಿಎಲ್ನ 23ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್‌ ಮೂರು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.ಟಾಸ್ ಸೋತು ಮೊದಲ ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ತಂಡ, ರಾಜಸ್ಥಾನ ರಾಯಲ್ಸ್ ವಿರುದ್ಧ ನಿಗದಿತ 20 ಓವರ್ನಲ್ಲಿ 7 ವಿಕೆಟ್ ನಷ್ಟಕ್ಕೆ 177 ರನ್ ಗಳಿಸಿತು.ಗೆಲುವಿಗೆ 178 ರನ್ ಗಳ ಗುರಿ ಬೆನ್ನಟ್ಟಿದ ರಾಜಸ್ಥಾನ ರಾಯಲ್ಸ್‌ ಶಿಮ್ರಾನ್ ಹೆಟ್ಮೆಯರ್ ಮತ್ತು ಸಂಜು ಸ್ಯಾಮ್ಸನ್ ಅವರ ಸ್ಫೋಟಕ ಅರ್ಧಶತಕಗಳ ನೆರವಿನಿಂದ ಹ್ಯಾಟ್ರಿಕ್ ಗೆಲುವು ದಾಖಲಿಸಿದ್ದು, ಟೂರ್ನಿಯಲ್ಲಿ 4ನೇ ಗೆಲುವಿನ ಮೂಲಕ 8 ಅಂಕ ಪಡೆದು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.ಇದನ್ನು ಓದಿ: ಐಪಿಎಲ್ 2023: ಸತತ ಎರಡನೇ ಗೆಲುವು ಸಾಧಿಸಿದ ಮುಂಬೈ ಇಂಡಿಯನ್ಸ್: ಕೆಕೆಆರ್ ವಿರುದ್ಧ 5 ವಿಕೆಟ್ ಗಳ ಭರ್ಜರಿ ಜಯಗುಜರಾತ್ ಪರ ಆರಂಭಿಕ ಆಟಗಾರ ವೃದ್ಧಿಮಾನ್ ಸಾಹ(4) ಮತ್ತು 3ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಸಾಯಿ ಸುದರ್ಶನ್(20) ಬೇಗನೇ ವಿಕೆಟ್ ಒಪ್ಪಿಸಿದರು.ಗುಜರಾತ್ ತಂಡ 32 ರನ್ಗಳಿಗೆ 2 ವಿಕೆಟ್ ಕಳೆದುಕೊಂಡಿದ್ದ ಸಂದರ್ಭದಲ್ಲಿ ಆರಂಭಿಕ ಆಟಗಾರ ಶುಭ್ಮನ್ ಗಿಲ್(45) ಹಾಗೂ ಡೇವಿಡ್ ಮಿಲ್ಲರ್(46) ಅವರ ಸಂಘಟಿಕ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 177 ರನ್ ಗಳಿಸಿತು.