2024: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿರಾಟ್ ಕೊಹ್ಲಿ ದಾಖಲೆ, ಈ ಬರೆದ ಮೊದಲ ಭಾರತೀಯ! ಐಪಿಎಲ್ ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು () ತಂಡದ ರನ್ ಮಷಿನ್ ವಿರಾಟ್ ಕೊಹ್ಲಿ ಅತ್ಯಪರೂಪದ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಬೆಂಗಳೂರು: ಐಪಿಎಲ್ ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು () ತಂಡದ ರನ್ ಮಷಿನ್ ವಿರಾಟ್ ಕೊಹ್ಲಿ ಅತ್ಯಪರೂಪದ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಐಪಿಎಲ್ 2024 ರ ( 2024) ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ವಿರಾಟ್ ಕೊಹ್ಲಿ ( ) ತಮ್ಮ 100ನೇ ಟಿ20 ಪಂದ್ಯವನ್ನು ಆಡಿದರು. ಆ ಮೂಲಕ ಒಂದೇ ಸ್ಥಳದಲ್ಲಿ 100 ಟಿ 20 ಪಂದ್ಯಗಳನ್ನು ಆಡಿದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾದರು.ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣವು 2008 ರಿಂದ ಕೊಹ್ಲಿ ಅವರ ಐಪಿಎಲ್ ತವರು ಮೈದಾನವಾಗಿದೆ. ಐಪಿಎಲ್ ಇತಿಹಾಸದಲ್ಲಿ 2008 ರಿಂದ ಒಂದೇ ಫ್ರಾಂಚೈಸಿಗಾಗಿ ಆಡುತ್ತಿರುವ ಏಕೈಕ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ.ಕೊಹ್ಲಿ ದಾಖಲೆಒಂದೇ ಸ್ಥಳದಲ್ಲಿ ಅತಿ ಹೆಚ್ಚು ಟಿ 20 ರನ್ ಗಳಿಸಿದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಿ20 ಕ್ರಿಕೆಟ್ನಲ್ಲಿ 3276 ರನ್ ಗಳಿಸಿದ್ದಾರೆ. ವಿರಾಟ್ ಕೊಹ್ಲಿ ನಂತರ ರೋಹಿತ್ ಶರ್ಮಾ ಒಂದೇ ಸ್ಥಳದಲ್ಲಿ ಅತಿ ಹೆಚ್ಚು ಟಿ 20 ಪಂದ್ಯಗಳನ್ನು ಆಡಿದ ಭಾರತೀಯರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ರೋಹಿತ್ ವಾಂಖೆಡೆ ಸ್ಟೇಡಿಯಂನಲ್ಲಿ 80 ಪಂದ್ಯಗಳನ್ನು ಆಡಿದ್ದಾರೆ. ❤‍🔥 100 T20 . 🔥# #ನಮ್ಮRCB #IPL2024 # ../YeHnLFLi022ನೇ ಸ್ಥಾನದಲ್ಲಿ ರೋಹಿತ್ ಶರ್ಮಾ, 3ನೇ ಸ್ಥಾನ ಧೋನಿಗೆಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 80 ಪಂದ್ಯಗಳನ್ನು ಆಡಿರುವ ರೋಹಿತ್ ಶರ್ಮಾ ಎರಡನೇ ಸ್ಥಾನದಲ್ಲಿದ್ದಾರೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ 69 ಪಂದ್ಯಗಳನ್ನು ಆಡಿರುವ ಎಂಎಸ್ ಧೋನಿ ಮೂರನೇ ಸ್ಥಾನದಲ್ಲಿದ್ದಾರೆ. ಎಂಎಸ್ ಧೋನಿ ಮೊದಲ ಐಪಿಎಲ್ ಋತುವಿನಿಂದಲೂ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುತ್ತಿದ್ದರೆ. ಚೆನ್ನೈ ಮೂಲದ ತಂಡವನ್ನು ಎರಡು ವರ್ಷ ಅಮಾನತುಗೊಳಿಸಿದಾಗ ಅವರು ರೈಸಿಂಗ್ ಪುಣೆ ಸೂಪರ್ಜೈಂಟ್ಸ್ ಪರ ಎರಡು ಋತುಗಳಲ್ಲಿ ಆಡಬೇಕಾಯಿತು.100 ಪಂದ್ಯ – ವಿರಾಟ್ ಕೊಹ್ಲಿ, ಎಂ ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು80 ಪಂದ್ಯ- ರೋಹಿತ್ ಶರ್ಮಾ, ವಾಂಖೆಡೆ ಸ್ಟೇಡಿಯಂ, ಮುಂಬೈ69 ಪಂದ್ಯ- ಎಂಎಸ್ ಧೋನಿ, ಎಂಎ ಚಿದಂಬರಂ ಕ್ರೀಡಾಂಗಣ, ಚೆನ್ನೈ