ಆರ್ಥಿಕ ಬಿಕ್ಕಟ್ಟು: ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಏಷ್ಯಾಕಪ್ 2022 ಯುಎಇಗೆ ಸ್ಥಳಾಂತರ ಸಾಧ್ಯತೆ ಆರ್ಥಿಕ ಬಿಕ್ಕಟ್ಟು ನಾಗರೀಕ ಸಂಘರ್ಷದಿಂದಾಗಿ ಅಸ್ಥಿರದಲ್ಲಿರುವ ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಏಷ್ಯಾಕಪ್ 2022 ಕ್ರಿಕೆಟ್ ಟೂರ್ನಿ ಯುಎಇಗೆ ಸ್ಥಳಾಂತರವಾಗುವ ಸಾಧ್ಯತೆ ಇದೆ. ಕೊಲಂಬೊ: ಆರ್ಥಿಕ ಬಿಕ್ಕಟ್ಟು ನಾಗರೀಕ ಸಂಘರ್ಷದಿಂದಾಗಿ ಅಸ್ಥಿರದಲ್ಲಿರುವ ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಏಷ್ಯಾಕಪ್ 2022 ಕ್ರಿಕೆಟ್ ಟೂರ್ನಿ ಯುಎಇಗೆ ಸ್ಥಳಾಂತರವಾಗುವ ಸಾಧ್ಯತೆ ಇದೆ.ರಾಜಕೀಯ ಅಸ್ಥಿರತೆ, ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಏಷ್ಯಾ ಕಪ್ ಟೂರ್ನಿಯನ್ನು ಶ್ರೀಲಂಕಾದಿಂದ ಸ್ಥಳಾಂತರಿಸುವ ಸಾಧ್ಯತೆಯಿದೆ ಎಂದು ಶ್ರೀಲಂಕಾ ಕ್ರಿಕೆಟ್‌ ಸಂಸ್ಥೆಯ (ಎಸ್‌ಎಲ್‌ಸಿ) ಕಾರ್ಯದರ್ಶಿ ಮೋಹನ್ ಡಿ ಸಿಲ್ವಾ ಭಾನುವಾರ ಹೇಳಿದ್ದಾರೆ. ಟೂರ್ನಿಯನ್ನು ಯುಎಇಯಲ್ಲಿ ಆಯೋಜಿಸುವ ಸಾಧ್ಯತೆಗಳಿವೆ ಎಂದು ಅವರು ತಿಳಿಸಿದರು.ಇದನ್ನೂ ಓದಿ: ಕ್ರೆಡಿಟ್‌ ಲೈನ್‌ ಆಧಾರದಲ್ಲಿ ಇಂಧನ ನೀಡಿದ ಏಕೈಕ ರಾಷ್ಟ್ರ ಭಾರತ; ರಷ್ಯಾದೊಂದಿಗೂ ಚರ್ಚೆ: ಶ್ರೀಲಂಕಾ ಸಚಿವಈ ಬಾರಿ ಟಿ 20 ಮಾದರಿಯಲ್ಲಿ ನಡೆಯುತ್ತಿರುವ ಏಷ್ಯಾ ಕಪ್‌ ಪಂದ್ಯಾವಳಿಯ ಸ್ಥಳದಲ್ಲಿನ ಸಂಭವನೀಯ ಬದಲಾವಣೆಯ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಿದ ಎಸ್‌ಎಲ್‌ಸಿ ಕಾರ್ಯದರ್ಶಿ ಡಿ ಸಿಲ್ವಾ, ‘ಏಷ್ಯಾ ಕಪ್ ಯುಎಇಯಲ್ಲಿ ನಡೆಯುವ ಸಾಧ್ಯತೆಯಿದೆ’ ಎಂದು ತಿಳಿಸಿದರು.ತೀವ್ರ ಆರ್ಥಿಕ ಬಿಕ್ಕಟ್ಟಿನ ವಿರುದ್ಧ ಸೆಣಸುತ್ತಿರುವ ಶ್ರೀಲಂಕಾದಲ್ಲಿ ವಾರದಿಂದ ಸರ್ಕಾರದ ವಿರುದ್ಧ ವ್ಯಾಪಕ ಪ್ರತಿಭಟನೆಗಳು ನಡೆದಿವೆ. ಈ ಮಧ್ಯೆ, ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ಮಿಲಿಟರಿ ಜೆಟ್‌ನಲ್ಲಿ ದೇಶದಿಂದ ಪಲಾಯನ ಮಾಡಿದ್ದು, ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡುವಂತೆ ಮಾಡಿದೆ.ಇದನ್ನೂ ಓದಿ: ಗೋಟಬಯ ರಾಜಪಕ್ಸೆ ಸಹೋದರರಾದ ಮಹಿಂದಾ ಮತ್ತು ಬಸಿಲ್ ಲಂಕಾ ತೊರೆಯದಂತೆ ಸುಪ್ರೀಂ ಕೋರ್ಟ್ ನಿರ್ಬಂಧಟೂರ್ನಿಯ ವೇಳಾಪಟ್ಟಿ ನಿಗದಿಯಂತೆ ನಡೆಯಲಿದ್ದು, ಇದರಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ. ಆಗಸ್ಟ್ 26 ರಿಂದ ಸೆಪ್ಟೆಂಬರ್ 11 ರವರೆಗೆ ಇರಲಿದೆ ಎಂದು ಅವರು ಹೇಳಿದರು.ಭಾರತ, ಪಾಕಿಸ್ತಾನ, ಶ್ರೀಲಂಕಾ, ಅಫ್ಗಾನಿಸ್ತಾನ, ಮತ್ತು ಬಾಂಗ್ಲಾದೇಶ ತಂಡಗಳು ಈ ಟೂರ್ನಿಯಲ್ಲಿ ಭಾಗವಹಿಸಲಿವೆ.