ಐಪಿಎಲ್ 2020: ಪ್ಲೇ ಆಫ್ ನಿರ್ಧಾರದ ಪಂದ್ಯದಲ್ಲಿ ಟಾಸ್ ಸೋತು ಆರ್ ಸಿಬಿ ಬ್ಯಾಟಿಂಗ್, ಇಲ್ಲಿದೆ! ಐಪಿಎಲ್ 13ನೇ ಆವೃತ್ತಿಯ ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡ ಬ್ಯಾಟಿಂಗ್ ಆರಂಭಿಸಿದೆ. ದುಬೈ: ಐಪಿಎಲ್ 13ನೇ ಆವೃತ್ತಿಯ ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡ ಬ್ಯಾಟಿಂಗ್ ಆರಂಭಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಗೆದ್ದರೆ ಪಾಯಿಂಟ್ಸ್‌ ಟೇಬಲ್‌ನಲ್ಲಿ ಎರಡನೇ ಸ್ಥಾನ ಪಡೆಯಲಿದೆ ಹಾಗೂ ಸುಲಭವಾಗಿ ಪ್ಲೇಆಫ್ಸ್‌ಗೆ ಅರ್ಹತೆ ಪಡೆಯಲಿದೆ. ಒಂದು ವೇಳೆ ಸೋತರೆ ಏನಾಗಬಹುದು ಎಂಬಂತೆ ವಿಶ್ಲೇಷಣೆಯನ್ನು ಈ ಕೆಳಕಂಡಂತೆ ನೀಡಲಾಗಿದೆ. ಸತತ ಮೂರು ಪಂದ್ಯಗಳಿಂದ ಸೋಲು ಅನುಭವಿಸಿರುವ ವಿರಾಟ್‌ ಕೊಹ್ಲಿ ನಾಯಕತ್ವದ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ನಿರ್ಣಾಯಕ ಹಂತದಲ್ಲಿದೆ. ಇಂದು ರಾತ್ರಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಣಸಲು ಸಜ್ಜಾಗಿದೆ. ಡೆಲ್ಲಿ ವಿರುದ್ಧ ಗೆಲುವು ಪಡೆದರೆ, ಬೆಂಗಳೂರು ಪಾಯಿಂಟ್ಸ್‌ ಟೇಬಲ್‌ನಲ್ಲಿ ಎರಡನೇ ಸ್ಥಾನವನ್ನು ಪಡೆಯಲಿದೆ. ಒಂದು ವೇಳೆ ಸೋತರೆ, ಅತ್ಯುತ್ತಮ ರನ್‌ರೇಟ್‌ ಹೊಂದಿರುವ ಸನ್‌ರಯಸರ್ಸ್ ಹೈದರಾಬಾದ್‌ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋಲುವ ಅಗತ್ಯವಿದೆ. ಒಂದು ವೇಳೆ ಎಸ್‌ಆರ್‌ಎಚ್‌ ಗೆದ್ದರೆ, ಆರ್‌ಸಿಬಿ 14 ಅಂಕಗಳೊಂದಿಗೆ ನಾಲ್ಕನೇ ಸ್ಥಾನ ಪಡೆಯಲಿದೆ.