ದಕ್ಷಿಣ ಆಫ್ರಿಕಾ ಸರಣಿಗೂ ಮೊದಲೇ ಟೀಂ ಇಂಡಿಯಾಗೆ ಆಘಾತ: ರೋಹಿತ್ ಶರ್ಮಾ ಟೂರ್ನಿಯಿಂದಲೇ ಔಟ್ ಮುಂಬರುವ ದಕ್ಷಿಣ ಆಫ್ರಿಕಾ ಸರಣಿಗೂ ಮೊದಲೇ ಟೀಂ ಇಂಡಿಯಾಗೆ ಆಘಾತ ಎದುರಾಗಿದ್ದು, ತಂಡದ ಸ್ಫೋಟಕ ಬ್ಯಾಟ್ಸಮನ್ ರೋಹಿತ್ ಶರ್ಮಾ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ನವದೆಹಲಿ: ಮುಂಬರುವ ದಕ್ಷಿಣ ಆಫ್ರಿಕಾ ಸರಣಿಗೂ ಮೊದಲೇ ಟೀಂ ಇಂಡಿಯಾಗೆ ಆಘಾತ ಎದುರಾಗಿದ್ದು, ತಂಡದ ಸ್ಫೋಟಕ ಬ್ಯಾಟ್ಸಮನ್ ರೋಹಿತ್ ಶರ್ಮಾ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.ಇದೇ ತಿಂಗಳು 26 ರಿಂದ ದಕ್ಷಿಣ ಆಫ್ರಿಕಾ ವಿರುದ್ಧ ಆರಂಭವಾಗಲಿರುವ 3 ಪಂದ್ಯಗಳ ಟೆಸ್ಟ್ ಸರಣಿಯಿಂದ ರೋಹಿತ್ ಶರ್ಮಾ ( ) ಹೊರಗುಳಿದಿದ್ದಾರೆ. ಅಭ್ಯಾಸದ ವೇಳೆ ರೋಹಿತ್ ಶರ್ಮಾ ಗಾಯಗೊಂಡಿದ್ದು, ಹೀಗಾಗಿ ಟೆಸ್ಟ್ ಸರಣಿಯಿಂದ ಹೊರಗುಳಿಯುವ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಟೆಸ್ಟ್ ತಂಡದ ನೂತನ ಉಪನಾಯಕರಾಗಿ ನೇಮಕಗೊಂಡಿರುವ ರೋಹಿತ್ ಅವರು ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ ಅಭ್ಯಾಸ ನಡೆಸುತ್ತಿರುವಾಗ ಮಂಡಿ ರಜ್ಜು ಗಾಯಕ್ಕೆ ಒಳಗಾಗಿದ್ದರು. ಹೀಗಾಗಿ ಅವರು ಸರಣಿ ಆಡುವುದು ಅನುಮಾನ ಎನ್ನಲಾಗಿತ್ತು. ಆದರೀಗ ಟೆಸ್ಟ್ ಸರಣಿಯಿಂದ ಹೊರಗುಳಿಯುವ ನಿರ್ಧಾರ ಮಾಡಿದ್ದು, ಜನವರಿಯಲ್ಲಿ ನಡೆಯಲಿರುವ ಏಕದಿನ ಸರಣಿಗೆ ತಂಡವನ್ನು ಸೇರಿಕೊಳ್ಳುವ ವಿಶ್ವಾಸದಲ್ಲಿದ್ದಾರೆ.ದಕ್ಷಿಣ ಆಫ್ರಿಕಾ ವಿರುದ್ದದ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 26 ರಿಂದ ಶುರುವಾಗಲಿದ್ದು, ಎರಡನೇ ಟೆಸ್ಟ್ ಜನವರಿ 3 ರಿಂದ ಆರಂಭವಾಗಲಿದೆ. ಹಾಗೆಯೇ ಮೂರನೇ ಟೆಸ್ಟ್ ಜನವರಿ 11 ರಿಂದ 15 ವರೆಗೆ ನಡೆಯಲಿದೆ.ರೋಹಿತ್ ಶರ್ಮಾ ಬದಲಿಗೆ ತಂಡದಲ್ಲಿ 31 ವರ್ಷದ ಪ್ರಿಯಾಂಕ್ ಪಾಂಚಾಲ್ ( ) ಅವರನ್ನು ಆಯ್ಕೆ ಮಾಡಲಾಗಿದೆ.ಇತ್ತೀಚೆಗೆ ನ್ಯೂಜಿಲೆಂಡ್ ವಿರುದ್ಧ ಮುಕ್ತಾಯಗೊಂಡ ಎರಡು-ಟೆಸ್ಟ್ ಸರಣಿ ವೇಳೆ ರೋಹಿತ್ ಶರ್ಮಾ ವಿಶ್ರಾಂತಿ ಪಡೆದಿದ್ದರು. ಇದೀಗ ಗಾಯಗೊಂಡ ಪರಿಣಾಮ ದಕ್ಷಿಣ ಆಫ್ರಿಕಾ ಸರಣಿಯಿಂದ ಹೊರಗುಳಿದಿದ್ದಾರೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಬಿಸಿಸಿಐ ಹೊಸ ಉಪನಾಯಕನನ್ನು ಆಯ್ಕೆ ಮಾಡಲಿದೆ. ಇತ್ತೀಚೆಗಷ್ಟೇ ಟೀಮ್ ಇಂಡಿಯಾ ಟೆಸ್ಟ್ ತಂಡದ ಉಪನಾಯಕನಾಗಿ ಹಾಗೂ ಏಕದಿನ ತಂಡದ ನಾಯಕನಾಗಿ ರೋಹಿತ್ ಶರ್ಮಾ ಅವರನ್ನು ಬಿಸಿಸಿಐ ಆಯ್ಕೆ ಮಾಡಿಕೊಂಡಿತ್ತು. ಇದೀಗ ದಕ್ಷಿಣ ಆಫ್ರಿಕಾ ವಿರುದ್ದದ ಟೆಸ್ಟ್ ಸರಣಿಯಿಂದ ಹೊರಗುಳಿದಿರುವ ಕಾರಣ ಕೆಎಲ್ ರಾಹುಲ್ಗೆ ಅಥವಾ ಅಜಿಂಕ್ಯ ರಹಾನೆಗೆ ಉಪನಾಯಕನ ಸ್ಥಾನ ಒಲಿಯುವ ಸಾಧ್ಯತೆಯಿದೆ.