4ನೇ ಟೆಸ್ಟ್: ಆಸ್ಟ್ರೇಲಿಯಾ ಮೇಲುಗೈ, ಖವಾಜಾ ಶತಕ; ಮೊದಲ ದಿನದಾಟ ಅಂತ್ಯಕ್ಕೆ ಆಸೀಸ್ 255/4 ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಬಾರ್ಡರ್- ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಅಂತಿಮ 4ನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದಂತ್ಯಕ್ಕೆ ಆಸ್ಟ್ರೇಲಿಯಾ 4 ವಿಕೆಟ್ ನಷ್ಟಕ್ಕೆ 255 ರನ್ ಪೇರಿಸಿದ್ದಾರೆ. ಅಹಮದಾಬಾದ್: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಬಾರ್ಡರ್- ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಅಂತಿಮ 4ನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದಂತ್ಯಕ್ಕೆ ಆಸ್ಟ್ರೇಲಿಯಾ 4 ವಿಕೆಟ್ ನಷ್ಟಕ್ಕೆ 255 ರನ್ ಪೇರಿಸಿದ್ದಾರೆ.ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ 90 ಓವರ್ ಗಳ ಮುಕ್ತಾಯಕ್ಕೆ 4 ವಿಕೆಟ್ ಕಳೆದುಕೊಂಡು 255 ರನ್ ಪೇರಿಸಿದೆ. ಉಸ್ಮಾನ್ ಖವಾಜ ಭರ್ಜರಿ ಶತಕ ಬಾರಿಸಿದ್ದು ತಂಡಕ್ಕೆ ಉತ್ತಮ ಅಡಿಪಾಯ ಹಾಕಿದರು. ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ 32, ಮಾರ್ನಸ್ ಲ್ಯಾಬುಸ್ಚಾಗ್ನೆ3, ಸ್ಟೀವ್ ಸ್ಮಿತ್ 38, ಪೀಟರ್ ಹ್ಯಾಂಡ್ಸ್ಕಾಂಬ್ 17 ಮತ್ತು ಕ್ಯಾಮರೂನ್ ಗ್ರೀನ್ ಅಜೇಯ 49 ರನ್ ಪೇರಿಸಿದ್ದಾರೆ.ಇದನ್ನೂ ಓದಿ: ಬಾರ್ಡರ್ ಗವಾಸ್ಕರ್ ಟ್ರೋಫಿ: ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ, ಲಕ್ಷಕ್ಕೂ ಹೆಚ್ಚು ಜನರ ಜೊತೆ ಪ್ರಧಾನಿ ಮೋದಿ ಪಂದ್ಯ ವೀಕ್ಷಣೆಭಾರತದ ಪರ ಮೊಹಮ್ಮದ್ ಶಮಿ 2 ವಿಕೆಟ್ ಆರ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ತಲಾ 1 ವಿಕೆಟ್ ಪಡೆದಿದ್ದಾರೆ. ಬಾರ್ಡರ್- ಗವಾಸ್ಕರ್ ಟ್ರೋಫಿಯ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 2-1 ಅಂತರಗಳ ಮುನ್ನಡೆ ಸಾಧಿಸಿದೆ.