2023: ಕೋಲ್ಕತ್ತಾ ವಿರುದ್ಧ ಆರ್ ಸಿಬಿ ಗೆ 81 ರನ್‌ ಸೋಲು! ಐಪಿಎಲ್ 2023 ರ ಒಂಬತ್ತನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 81 ರನ್‌ಗಳಿಂದ ಸೋಲಿಸಿದೆ. ಕೋಲ್ಕತ್ತಾ: ಐಪಿಎಲ್ 2023 ರ ಒಂಬತ್ತನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 81 ರನ್‌ಗಳಿಂದ ಸೋಲಿಸಿದೆ. ಟಾಸ್ ಗೆದ್ದ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ 204 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಆರ್ ಸಿಬಿ 123 ರನ್‌ಗಳಿಗೆ ಸೋಲು ಕಂಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ 81 ರನ್‌ಗಳಿಂದ ಜಯ ಸಾಧಿಸಿದೆ. ಇದರೊಂದಿಗೆ ಕೋಲ್ಕತ್ತಾ ತಂಡ ಟೂರ್ನಿಯಲ್ಲಿ ಚೊಚ್ಚಲ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೋಲ್ಕತ್ತಾ ಶಾರ್ದೂಲ್ ಠಾಕೂರ್ ಅವರ 68, ರಹಮಾನುಲ್ಲಾ ಗುರ್ಬಾಜ್ ಅವರ 57 ಮತ್ತು ರಿಂಕು ಸಿಂಗ್ ಅವರ 46 ರನ್‌ಗಳಿಂದ ಏಳು ವಿಕೆಟ್‌ಗೆ 204 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಬೆಂಗಳೂರು ತಂಡ 17.4 ಓವರ್‌ಗಳಲ್ಲಿ 123 ರನ್‌ಗಳಿಗೆ ಆಲೌಟಾಯಿತು. ಬೆಂಗಳೂರು ಪರ ನಾಯಕ ಫಾಫ್ ಡುಪ್ಲೆಸಿಸ್ ಗರಿಷ್ಠ 23 ರನ್ ಗಳಿಸಿದರು.ಇದನ್ನೂ ಓದಿ: ಬೆಂಗಳೂರು: ಆರ್‌ಸಿಬಿ ಗೆಲುವಿಗಾಗಿ ಅಭಿಮಾನಿಗಳಿಂದ ವಿಶೇಷ ಪೂಜೆ, ತಪ್ಪಿದ ದೊಡ್ಡ ದುರಂತ!ಕೋಲ್ಕತ್ತಾ ಪರ ವರುಣ್ ಚಕ್ರವರ್ತಿ 4, ಸುಯಶ್ ಶರ್ಮಾ 3 ಹಾಗೂ ಸುನಿಲ್ ನರೈನ್ 2 ವಿಕೆಟ್ ಪಡೆದರು. ಶಾರ್ದೂಲ್ ಠಾಕೂರ್ ಒಂದು ವಿಕೆಟ್ ಪಡೆದರು.