ಬೆಂಗಳೂರಲ್ಲಿ ದಕ್ಷಿಣ ಆಫ್ರಿಕಾ ಕ್ರಿಕೆಟ್ ಪಂದ್ಯ: ಸಂಚಾರದಲ್ಲಿ ಬದಲಾವಣೆ ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಐದನೇ ಟಿ-20 ಕ್ರಿಕೆಟ್ ಪಂದ್ಯ ನಡೆಯಲಿದೆ. ಬೆಂಗಳೂರು: ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಐದನೇ ಟಿ-20 ಕ್ರಿಕೆಟ್ ಪಂದ್ಯ ನಡೆಯಲಿದೆ.ಪಂದ್ಯದ ಸಂದರ್ಭದಲ್ಲಿ ಕ್ರೀಡಾಂಗಣದ ಸುತ್ತಮುತ್ತ ಭಾರಿ ಟ್ರಾಫಿಕ್ ಉಂಟಾಗುವ ಹಿನ್ನೆಲೆಯಲ್ಲಿ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.ಕ್ರಿಕೆಟ್ ಪಂದ್ಯ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ವಾಹನಗಳಲ್ಲಿ ಬರುವುದರಿಂದ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತಲಿನ ರಸ್ತೆಗಳಲ್ಲಿ ಸುಗಮ ವಾಹನ ಸಂಚಾರ ದೃಷ್ಟಿಯಿಂದ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 12-30ರವರೆಗೆ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.