ಬುಮ್ರಾ, ಅಶ್ವಿನ್ ಮ್ಯಾಜಿಕ್: ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ನಲ್ಲಿ ಭಾರತಕ್ಕೆ ಭರ್ಜರಿ ಜಯ, ಸರಣಿ ಸಮಬಲ ಇಂಗ್ಲೆಂಡ್‌ ವಿರುದ್ಧ ಎರಡನೇ ಟೆಸ್ಟ್‌ ಪಂದ್ಯದಲ್ಲಿ ರೋಹಿತ್‌ ಶರ್ಮಾ ಬಳಗವು ಗೆಲುವು ಸಾಧಿಸುವ ಮೂಲಕ ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ 1-1ರ ಸಮಬಲ ಸಾಧಿಸಿದೆ. ವಿಶಾಖಪಟ್ಟಣಂ: ಇಂಗ್ಲೆಂಡ್‌ ವಿರುದ್ಧ ಎರಡನೇ ಟೆಸ್ಟ್‌ ಪಂದ್ಯದಲ್ಲಿ ರೋಹಿತ್‌ ಶರ್ಮಾ ಬಳಗವು ಗೆಲುವು ಸಾಧಿಸುವ ಮೂಲಕ ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ 1-1ರ ಸಮಬಲ ಸಾಧಿಸಿದೆ. ವಿಶಾಖಪಟ್ಟಣಂನಲ್ಲಿ ನಡೆದ 2ನೇ ಟೆಸ್ಟ್ ನ 2ನೇ ಇನ್ನಿಂಗ್ಸ್ ನಲ್ಲಿ ಭಾರತ ನೀಡಿದ 399 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಇಂಗ್ಲೆಂಡ್ ತಂಡ 292 ರನ್ ಗಳಿಗೆ ಆಲೌಟ್ ಆಗುವ ಮೂಲಕ 106 ರನ್ ಗಳ ಅಂತರದಲ್ಲಿ ಸೋಲು ಕಂಡಿತು. ಆ ಮೂಲಕ ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ 1-1ರ ( ) ಸಮಬಲ ಸಾಧಿಸಿದೆ.ಇದನ್ನೂ ಓದಿ: ಕೂಚ್ ಬೆಹಾರ್ ಟ್ರೋಫಿ ಫೈನಲ್: ಬರೋಬ್ಬರಿ 404* ರನ್‌ಗಳಿಸಿ ಯುವರಾಜ್ ಸಿಂಗ್ ದಾಖಲೆ ಮುರಿದ ಕನ್ನಡಿದ ಪ್ರಖರ್‌ ಚತುರ್ವೇದಿ!ಮೊದಲ ಇನ್ನಿಂಗ್ಸ್‌ನ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತ ತಂಡ ನೀಡಿದ 399 ರನ್‌ಗಳ ಬೃಹತ್‌ ಗುರಿ ಬೆನ್ನತ್ತಿದ ಇಂಗ್ಲೆಂಡ್‌ ತಂಡವು 292 ರನ್‌ಗಳಿಗೆ ಸರ್ವಪತನ ಕಂಡಿತು. ಇಂಗ್ಲೆಂಡ್‌ ಪರ ಜಾಕ್‌ ಕ್ರಾವ್ಲೆ (73) ಹೊರತುಪಡಿಸಿ ಯಾವೊಬ್ಬ ಆಟಗಾರನೂ ಉತ್ತಮ ಪ್ರದರ್ಶನ ತೋರದ ಕಾರಣ ಇಂಗ್ಲೆಂಡ್‌ 292 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ ಸೋಲೊಪ್ಪಿಕೊಂಡಿತು. ಭಾರತದ ಪರ ಜಸ್‌ಪ್ರೀತ್‌ ಬೂಮ್ರಾ ಹಾಗೂ ಕುಲದೀಪ್‌ ಯಾದವ್‌ ತಲಾ 3 ವಿಕೆಟ್‌ ಪಡೆದು ಮಿಂಚಿದರು. ಉಭಯ ಇನ್ನಿಂಗ್ಸ್ ನಲ್ಲಿ 9 ವಿಕೆಟ್ ಪಡೆದು ಭಾರತದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ ಬುಮ್ರಾ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.ಇದನ್ನೂ ಓದಿ: 2ನೇ ಮಗುವಿನ ನಿರೀಕ್ಷೆಯಲ್ಲಿ ವಿರುಕ್ಷಾ ದಂಪತಿ: ಎಬಿ ಡಿವಿಲಿಯರ್ಸ್ಉಭಯ ತಂಡಗಳ ನಡುವಿನ ಮೂರನೇ ಟೆಸ್ಟ್‌ ಪಂದ್ಯವು ಫೆಬ್ರವರಿ 15ರಿಂದ ಆರಂಭವಾಗಲಿದೆ.