ಮೊದಲ ಟೆಸ್ಟ್ ಪಂದ್ಯ: 4ನೇ ದಿನದಾಟದಂತ್ಯಕ್ಕೆ ಭಾರತ 52/1; ಪಂದ್ಯ ಗೆಲ್ಲಲು ಟೀಂ ಇಂಡಿಯಾಗೆ 157 ರನ್ ಬಾಕಿ! ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಕೊನೆ ದಿನ ಭಾರತಕ್ಕೆ ಗೆಲ್ಲಲು 157 ರನ್ ಹೊಡೆಯಬೇಕಿದೆ. ನಾಟಿಂಗ್‌ಹ್ಯಾಮ್: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಕೊನೆ ದಿನ ಭಾರತಕ್ಕೆ ಗೆಲ್ಲಲು 157 ರನ್ ಹೊಡೆಯಬೇಕಿದೆ.ನಾಟಿಂಗ್‌ಹ್ಯಾಮ್ ನಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್ ತಂಡ 183 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ್ದ ಟೀಂ ಇಂಡಿಯಾ 278 ರನ್ ಗಳಿಗೆ ಆಲೌಟ್ ಆಗಿತ್ತು. 95 ರನ್ ಗಳ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ಇಂಗ್ಲೆಂಡ್ ನಾಲ್ಕನೇ ದಿನದಾಟದಲ್ಲಿ 303 ರನ್ ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಭಾರತಕ್ಕೆ ಗೆಲ್ಲಲು 209 ರನ್ ಗಳ ಗುರಿ ನೀಡಿತ್ತು. ನಂತರ ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ ನಾಲ್ಕನೇ ದಿನದಾಟದಂತ್ಯಕ್ಕೆ 1 ವಿಕೆಟ್ ನಷ್ಟಕ್ಕೆ 52 ರನ್ ಬಾರಿಸಿದ್ದು ಐದನೇ ದಿನ ಪಂದ್ಯ ಗೆಲ್ಲಲು ಟೀಂ ಇಂಡಿಯಾಗೆ 157 ರನ್ ಸಿಡಿಸಬೇಕಿದೆ.