T20 2024: ಭಾರತ ಕೆನಡಾ ಪಂದ್ಯ ರದ್ದು, ಭಾರತ ಅಗ್ರಸ್ಥಾನ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಇಂದು ಭಾರತ ಹಾಗೂ ಕೆನಡಾ ನಡುವೆ ನಡೆಯಬೇಕಿದ್ದ ಪಂದ್ಯ ರದ್ದುಗೊಂಡಿದೆ. ಫ್ಲಾರಿಡಾ: ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಇಂದು ಭಾರತ ಹಾಗೂ ಕೆನಡಾ ನಡುವೆ ನಡೆಯಬೇಕಿದ್ದ ಪಂದ್ಯ ರದ್ದುಗೊಂಡಿದೆ.ಕಳೆದ ಕೆಲವು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ಮೈದಾನ ತೇವಗೊಂಡಿತ್ತು. ಅನೇಕ ಬಾರಿ ಮೈದಾನವನ್ನು ಪರಿಶೀಲಿಸಿದ ಅಧಿಕೃತರು ಅಂತಿಮವಾಗಿ ಪಂದ್ಯವನ್ನು ರದ್ದುಗೊಳಿಸಲು ನಿರ್ಧಾರ ಕೈಗೊಂಡರು. ಇದಕ್ಕೆ ಉಭಯ ತಂಡಗಳ ನಾಯಕರು ಒಪ್ಪಿಗೆ ಸೂಚಿಸಿದರು. ಹೀಗಾಗಿ ಉಭಯ ತಂಡಗಳು ಸಮಾನವಾಗಿ ಒಂದು ಅಂಕವನ್ನು ಪಡೆದುಕೊಂಡಿವೆ. ಇದರೊಂದಿಗೆ ಭಾರತ ಸತತ ಮೂರು ಗೆಲುವಿನೊಂದಿಗೆ ಎ' ಗುಂಪಿನಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡಿದ್ದು, ಸೂಪರ್ ಎಂಟರ ಹಂತಕ್ಕೆ ಪ್ರವೇಶಿಸಿದೆ.ಇದೇ ಗುಂಪಿನಲ್ಲಿ ನಾಲ್ಕು ಪಂದ್ಯಗಳಲ್ಲಿ ಎರಡು ಗೆಲುವು ಸಾಧಿಸಿರುವ ಯುಎಸ್ ಎ ಒಟ್ಟು ಐದು ಅಂಕಗಳೊಂದಿಗೆ ಎರಡನೇ ತಂಡವಾಗಿ ಸೂಪರ್ ಎಂಟರ ಹಂತಕ್ಕೆ ಪ್ರವೇಶಿಸಿದೆ. ಪಾಕಿಸ್ತಾನ ಮತ್ತು ಐರ್ಲೆಂಡ್ ತಂಡಗಳು ಟೂರ್ನಿಯಿಂದ ನಿರ್ಗಮಿಸಿವೆ.#T20WorldCup2024 | .# 7 4 .# ../edsnXBvDL7