ಟಿ20 ವಿಶ್ವಕಪ್: ದಕ್ಷಿಣ ಆಫ್ರಿಕಾ ವಿರುದ್ಧ ಪಾಕಿಸ್ತಾನಕ್ಕೆ ಜಯ; ಸೆಮೀಸ್ ಆಸೆ ಜೀವಂತ, ಭಾರತದ ವಿರುದ್ಧ ಜಿಂಬಾಬ್ವೆ ಗೆಲುವಿಗೆ ಪ್ರಾರ್ಥನೆ! ಟಿ20 ವಿಶ್ವಕಪ್ ಬಹುತೇಕ ಹೊರಬಿದ್ದಿರುವ ಪಾಕಿಸ್ತಾನ ತಂಡ ದ.ಆಫ್ರಿಕಾ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ತನ್ನ ಸೆಮಿ ಫೈನಲ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಸಿಡ್ನಿ: ಟಿ20 ವಿಶ್ವಕಪ್ ಬಹುತೇಕ ಹೊರಬಿದ್ದಿರುವ ಪಾಕಿಸ್ತಾನ ತಂಡ ದ.ಆಫ್ರಿಕಾ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ತನ್ನ ಸೆಮಿ ಫೈನಲ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.ಹೌದು.. ಇಂದು ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನ ತಂಡ 33 ರನ್ (ಡಕ್ವರ್ತ್ ಲೂಯಿಸ್ ನಿಯಮದನ್ವಯ) ಅಂತರದ ಭರ್ಜರಿ ಜಯ ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ಪಾಕಿಸ್ತಾನ ತಂಡ ನಿಗದಿತ 20 ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 185 ರನ್ ಗಳ ಸವಾಲಿನ ಮೊತ್ತ ಪೇರಿಸಿತ್ತು. ಪಾಕ್ ಪರ ಇಫ್ತಿಕಾರ್ ಅಹ್ಮದ್ (51) ಮತ್ತು ಶದಾಬ್ ಖಾನ್ (52) ಅಮೋಘ ಬ್ಯಾಟಿಂಗ್ ಪ್ರದರ್ಶಿಸಿ ಸವಾಲಿನ ಮೊತ್ತಕ್ಕೆ ಕಾರಣರಾದರು. ಪಾಕಿಸ್ತಾನ ನೀಡಿದ 186 ರನ್ ಗಳನ್ನು ಬೆನ್ನು ಹತ್ತಿದ ದಕ್ಷಿಣ ಆಫ್ರಿಕಾಗೆ ಮಳೆ ಅಡ್ಡಿಯಾಯಿತು. # | #T20WorldCup | # ../6PCBGBXVWRಈ ವೇಳೆ ಫೀಲ್ಡ್ ಅಂಪೈರ್ ಗಳು ದಕ್ಷಿಣ ಆಫ್ರಿಕಾಗೆ ಗೆಲ್ಲಲು 14 ಓವರ್ ನಲ್ಲಿ 142 ರನ್ ಗಳ ಗುರಿ ನೀಡಿದರು. ಈ ಮೊತ್ತವನ್ನು ಬೆನ್ನು ಹತ್ತಿದ ದಕ್ಷಿಣ ಆಫ್ರಿಕಾ ತಂಡ 14 ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 108ರನ್ ಗಳನ್ನಷ್ಟೇ ಗಳಿಸಲು ಶಕ್ತವಾಗಿ 33ರನ್ ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿತು. ಈ ಸೋಲಿನ ಮೂಲಕ ದಕ್ಷಿಣ ಆಫ್ರಿಕಾ ಸೆಮೀಸ್ ಕನಸೂ ಅತಂತ್ರವಾಗಿದ್ದು, ಪಾಕಿಸ್ತಾನ ತಂಡದ ಸೆಮೀಸ್ ಆಸೆ ಜೀವಂತವಾದಂತಾಗಿದೆ.ಇದನ್ನೂ ಓದಿ: ಟಿ20 ವಿಶ್ವಕಪ್: ಭಾರತ ಮಣಿಸಿದರೆ ಜಿಂಬಾಬ್ವೆ ಹುಡುಗನ ಮದುವೆಯಾಗುತ್ತೇನೆ: ಪಾಕ್ ನಟಿಯ ಓಪನ್ ಆಫರ್!ಈ ಗೆಲುವಿನೊಂದಿಗೆ ಪಾಕಿಸ್ತಾನ ನಾಲ್ಕು ಅಂಕಗಳನ್ನು ಗಳಿಸಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಏರಿದೆ. ಐದು ಅಂಕಗಳೊಂದಿಗೆ ದಕ್ಷಿಣ ಆಫ್ರಿಕಾ ಎರಡನೇ ಸ್ಥಾನದಲ್ಲಿದೆ. ಈ ಗೆಲುವಿನೊಂದಿಗೆ ಪಾಕಿಸ್ತಾನ ಸೆಮಿಸ್ ಭರವಸೆಯನ್ನು ಜೀವಂತವಾಗಿರಿಸಿಕೊಂಡಿದೆ.