ಟಿ20 ವಿಶ್ವಕಪ್: ಭಾರತ-ಪಾಕ್ ಪಂದ್ಯದ ಮೇಲೆ ಮಳೆ ಕಾರ್ಮೋಡ; ನಡೆಯೋದೇ ಡೌಟ್! ತೀವ್ರ ಕುತೂಹಲ ಕೆರಳಿಸಿರುವ ಐಸಿಸಿ ಟಿ20 ವಿಶ್ವಕಪ್ ಗೆ ಮಳೆ ಭೀತಿ ಎದುರಾಗಿದ್ದು, ಹೈವೋಲ್ಟೇಜ್ ಭಾರತ-ಪಾಕಿಸ್ತಾನ ಪಂದ್ಯ ಸೇರಿದಂತೆ ಹಲವು ಪಂದ್ಯಗಳಿಗೆ ಮಳೆ ಅಡ್ಡಿ ಮಾಡುವ ಆತಂಕ ಎದುರಾಗಿದೆ. ಸಿಡ್ನಿ: ತೀವ್ರ ಕುತೂಹಲ ಕೆರಳಿಸಿರುವ ಐಸಿಸಿ ಟಿ20 ವಿಶ್ವಕಪ್ ಗೆ ಮಳೆ ಭೀತಿ ಎದುರಾಗಿದ್ದು, ಹೈವೋಲ್ಟೇಜ್ ಭಾರತ-ಪಾಕಿಸ್ತಾನ ಪಂದ್ಯ ಸೇರಿದಂತೆ ಹಲವು ಪಂದ್ಯಗಳಿಗೆ ಮಳೆ ಅಡ್ಡಿ ಮಾಡುವ ಆತಂಕ ಎದುರಾಗಿದೆ.ಟೂರ್ನಿಯ ಈ ವಾರದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದ್ದು, ಹೀಗಾಗಿ ಶುಕ್ರವಾರ, ಶನಿವಾರ ಮತ್ತು ಭಾನುವಾರದ ಪಂದ್ಯಗಳು ಮಳೆಯಿಂದಾಗಿ ತೊಂದರೆಗೀಡಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಜ್ಞರು ಹೇಳಿದ್ದಾರೆ.ಪ್ರಮುಖವಾಗಿ ಮೆಲ್ಬೋರ್ನ್ ಕ್ರೀಡಾಂಗಣದಲ್ಲಿ ನಡೆಯಲಿರುವ ಮೂರು ಪಂದ್ಯಗಳಿಗೆ ಮಳೆ ಅಡ್ಡಿಯಾಗಲಿದೆ ಎಂದು ಹೇಳಲಾಗಿದೆ.ಇದನ್ನೂ ಓದಿ: 2023ರ ಏಷ್ಯಾ ಕಪ್‌ಗಾಗಿ ಭಾರತ ಪಾಕಿಸ್ತಾನ ಪ್ರವಾಸ ಕೈಗೊಳ್ಳುವುದಿಲ್ಲ: ಜಯ್ ಶಾ ಸ್ಪಷ್ಟನೆಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಭಾನುವಾರದ ಭಾರತ-ಪಾಕಿಸ್ತಾನ T20 ವಿಶ್ವಕಪ್ ಪಂದ್ಯದ ಹವಾಮಾನ ಮುನ್ಸೂಚನೆಯು ಉತ್ತೇಜಕವಾಗಿಲ್ಲ, ಅಂದು ಮೆಲ್ಬೋರ್ನ್‌ನಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ ಎನ್ನಲಾಗಿದೆ. ಆಸ್ಟ್ರೇಲಿಯಾ ಸರ್ಕಾರದ ಹವಾಮಾನ ಇಲಾಖೆ ಮೆಲ್ಬೋರ್ನ್‌ನಲ್ಲಿ ಶುಕ್ರವಾರದಿಂದ ಭಾನುವಾರದವರೆಗೂ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ, ಭಾನುವಾರದಂದು ಶೇ.80% ರಷ್ಟು ಮಳೆಯಾಗುವ ಸಾಧ್ಯತೆಯಿದ್ದು, ಇದು ಭಾರತ-ಪಾಕ್ ತಂಡದ ನಡುವಿನ ಪಂದ್ಯದ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗಿದೆ.ಇದನ್ನೂ ಓದಿ: ಭಾರತ ಏಷ್ಯಾ ಕಪ್‌ಗೆ ತೆರಳದಿದ್ದರೆ ಏಕದಿನ ವಿಶ್ವ ಕಪ್‌ ಟೂರ್ನಿಯಿಂದ ಹಿಂದೆ ಸರಿಯುವುದಾಗಿ ಪಾಕ್ ಬೆದರಿಕೆಶನಿವಾರ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಆತಿಥೇಯ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವಕಪ್‌ನ ಆರಂಭಿಕ ಪಂದ್ಯಕ್ಕೂ ಮಳೆ ಅಡ್ಡಿಪಡಿಸಬಹುದು ಎಂದು ಹೇಳಲಾಗಿದೆ.