ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಗೆ 4 ವಿಕೆಟ್ ಜಯ, ವಿರುದ್ಧ ಗೆ 4 ರನ್ ಗೆಲುವು! ಕೋಲ್ಕತ್ತಾದಲ್ಲಿ ನಡೆದ ಐಪಿಎಲ್ 2024 ರ 3 ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ 4 ರನ್ ಗಳ ಗೆಲುವು ದಕ್ಕಿದೆ. ಕೋಲ್ಕತ್ತಾ: ಕೋಲ್ಕತ್ತಾದಲ್ಲಿ ನಡೆದ ಐಪಿಎಲ್ 2024 ರ 3 ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ 4 ರನ್ ಗಳ ಗೆಲುವು ದಕ್ಕಿದೆ. ಟಾಸ್ ಗೆದ್ದ ಸನ್ ರೈಸರ್ಸ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ಕೋಲ್ಕತ್ತ ತಂಡ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 208 ರನ್ ಗಳಿಸಿತು.ಕೋಲ್ಕತ್ತಾ ಪರ ಫಿಲಿಪ್ ಸಾಲ್ಟ್ 40 ಎಸೆತಗಳಲ್ಲಿ 54 ರನ್ ಗಳಿಸಿದರೆ, ಆಂಡ್ರೆ ರಸೆಲ್ 25 ಎಸೆತಗಳಲ್ಲಿ 64 ರನ್ ಗಳಿಸಿ ತಂಡ ಉತ್ತಮ ಮೊತ್ತ ಗಳಿಸುವುದಕ್ಕೆ ನೆರವಾದರು. ಸನ್ ರೈಸರ್ಸ್ ತಂಡದ ಪರ ಆರಂಭಿಕ ಆಟಗಾರರಾದ ಮಯಾಂಕ್ ಅಗರ್ವಾಲ್ (21 ಎಸೆತಗಳಲ್ಲಿ 32 ರನ್) ಅಭಿಷೇಕ್ ಶರ್ಮಾ (19 ಎಸೆತಗಳಲ್ಲಿ 32 ರನ್ ಗಳಿಸಿದರು) ಹೆನ್ರಿಕ್ ಕ್ಲಾಸೆನ್ 29 ಎಸೆತಗಳಲ್ಲಿ 63 ರನ್ ಗಳಿಸಿ ತಂಡ ಕೆಕೆಆರ್ ವಿರುದ್ಧ ಗೆಲುವು ಸಾಧಿಸಲು ನೆರವಾದರಾದರೂ ಕೆಕೆಆರ್ ಬೌಲರ್ ಗಳ ಎದುರು ಎಸ್ ಆರ್ ಹೆಚ್ ಬ್ಯಾಟ್ಸ್ ಮನ್ ಗಳು ಮಂಕಾದರು. ಎಸ್ ಆರ್ ಹೆಚ್ ತಂಡ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 204 ರನ್ ಗಳಿಸಿ 4 ರನ್ ಗಳ ಅಂತರದಲ್ಲಿ ಸೋಲೊಪ್ಪಿಕೊಂಡಿತ್ತು.ಇನ್ನು ಮತ್ತೊಂದು ಪಂದ್ಯದಲ್ಲಿ ಪಂಜಾಬ್ ಹಾಗೂ ದೆಹಲಿ ಕ್ಯಾಪಿಟಲ್ಸ್ ತಂಡದ ನಡುವಿನ ಪಂದ್ಯದಲ್ಲಿ ಪಂಜಾಬ್ ತಂಡ 4 ವಿಕೆಟ್ ಗಳ ಗೆಲುವು ದಾಖಲಿಸಿದೆ. 20 ಓವರ್ ಗಳಲ್ಲಿ ದೆಹಲಿ ಕ್ಯಾಪಿಟಲ್ಸ್ ತಂಡ 9 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿದರೆ, ಪಂಜಾಬ್ ತಂಡ 19.2 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 177 ರನ್ ಗಳಿಸಿತು.