2024: ಯುಪಿ ವಿರುದ್ಧ ಮುಂಬೈ ಇಂಡಿಯನ್ಸ್ ಗೆ 42 ರನ್ ಜಯ, 3ನೇ ಸ್ಥಾನಕ್ಕೆ ಕುಸಿದ ಮಹಿಳಾ ಪ್ರೀಮಿಯರ್ ಲೀಗ್ ನ ಇಂದಿನ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಮಹಿಳಾ ತಂಡ 42 ರನ್ ಗಳ ಜಯ ದಾಖಲಿಸಿದೆ. ನವದೆಹಲಿ: ಮಹಿಳಾ ಪ್ರೀಮಿಯರ್ ಲೀಗ್ ನ ಇಂದಿನ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಮಹಿಳಾ ತಂಡ 42 ರನ್ ಗಳ ಜಯ ದಾಖಲಿಸಿದೆ.ದೆಹಲಿಯಲ್ಲಿರುವ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಯುಪಿ ವಾರಿಯರ್ಸ್‌ ( ) ವಿರುದ್ಧ ಮುಂಬೈ ಇಂಡಿಯನ್ಸ್‌ ತಂಡವು 42 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ಗೆ ಇಳಿದ ಮುಂಬೈ ಇಂಡಿಯನ್ಸ್‌ ತಂಡವು 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 160 ರನ್‌ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿತು. ಹರ್ಮನ್‌ ಪ್ರೀತ್‌ ಕೌರ್‌ ಬಳಗ ನೀಡಿದ 161 ರನ್‌ಗಳ ಗುರಿ ಬೆನ್ನತ್ತಿದ ಯುಪಿ ವಾರಿಯರ್ಸ್‌ ತಂಡವು ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 118 ರನ್‌ ಗಳಿಸಲಷ್ಟೇ ಶಕ್ತವಾಯಿತು. ! 😎 42- # 👏👏 💻📱://./qcJK240qsL# | # | @ ../okS2mdzh7v3ನೇ ಸ್ಥಾನಕ್ಕೆ ಕುಸಿದ RCBಉತ್ತರ ಪ್ರದೇಶ ವಾರಿಯರ್ಸ್‌ ತಂಡವು ಈ ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿಯೇ ಮುಂದುವರಿದಿದೆ. 6 ಪಂದ್ಯ ಆಡಿರುವ ಯುಪಿ 4 ಪಂದ್ಯಗಳಲ್ಲಿ ಸೋತು, 2ರಲ್ಲಿ ಮಾತ್ರ ಗೆಲುವು ಸಾಧಿಸಿದೆ. ಆದರೆ ಈ ಗೆಲುವಿನೊಂದಿಗೆ ಮುಂಬೈ ಅಂಕ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದು, 2ನೇ ಸ್ಥಾನದಲ್ಲಿದ್ದ ಆರ್ ಸಿಬಿ 3ನೇ ಸ್ಥಾನಕ್ಕೆ ಕುಸಿದಿದೆ. ರನ್‌ರೇಟ್‌ ಆಧಾರದ ಮೇಲೆ ಮುಂಬೈ ಇಂಡಿಯನ್ಸ್‌ ತಂಡವು ಎರಡನೇ ಸ್ಥಾನಕ್ಕೆ ಜಿಗಿದರೆ, ಆರ್‌ಸಿಬಿ ವುಮೆನ್‌ ತಂಡವು ಮೂರನೇ ಸ್ಥಾನಕ್ಕೆ ಕುಸಿತ ಕಂಡಿದೆ.