ಟಿ20 ವಿಶ್ವಕಪ್: ಭರ್ಜರಿ ಬ್ಯಾಟಿಂಗ್ ಮೂಲಕ ದಾಖಲೆ ಬರೆದ ರೋಹಿತ್- ರಾಹುಲ್ ಜೋಡಿ ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್ 2 ಹಂತದ ಪಂದ್ಯದಲ್ಲಿ ಅಫ್ಘಾನಿಸ್ತಾನದ ವಿರುದ್ಧ ಭರ್ಜರಿ ಬ್ಯಾಟಿಂಗ್ ಮಾಡಿದ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಜೋಡಿ ವಿಶ್ವ ದಾಖಲೆ ನಿರ್ಮಿಸಿದೆ. ಅಬುದಾಬಿ: ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್ 2 ಹಂತದ ಪಂದ್ಯದಲ್ಲಿ ಅಫ್ಘಾನಿಸ್ತಾನದ ವಿರುದ್ಧ ಭರ್ಜರಿ ಬ್ಯಾಟಿಂಗ್ ಮಾಡಿದ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಜೋಡಿ ವಿಶ್ವ ದಾಖಲೆ ನಿರ್ಮಿಸಿದೆ.ಇದನ್ನೂ ಓದಿ: T20 : ಸೆಮಿಫೈನಲ್ ಗೆ ಹೋಗಲು ಕೊಹ್ಲಿ ಮುಂದೆ 2 ಸವಾಲು; ಪವಾಡ ನಡೆಯಬೇಕು!.@ImRo45 74 66- # & . # #T20WorldCup ://./42045c5J05 ../fdBPkkEnKQಹೌದು.. ಇಂದು ಅಬುದಾಬಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆಫ್ಗನ್ ಬೌಲರ್ ಗಳನ್ನು ಇನ್ನಿಲ್ಲದಂತೆ ಕಾಡಿದ ಭಾರತದ ಆರಂಭಿಕ ಜೋಡಿ ವಿಶ್ವ ದಾಖಲೆ ನಿರ್ಮಿಸಿದೆ. ಮೊದಲ ವಿಕೆಟ್ ಬರೊಬ್ಬರಿ 140ರನ್ ಪೇರಿಸಿದ ಈ ಜೋಡಿ ಆ ಮೂಲಕ ಭಾರತದ ಪರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ಜೊತೆಯಾಟವಾಡಿದ ಜೋಡಿ ಎಂಬ ಕೀರ್ತಿಗೆ ಭಾಜನವಾಗಿದೆ. ! #! 74 @ImRo45 69 @klrahul11 35* @hardikpandya7 27* @RishabhPant17 . # #T20WorldCup ://./42045c5J05 ../u8NugkurFhಈ ಹಿಂದೆ 2007ರಲ್ಲಿ ಡರ್ಬನ್ ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತದ ವಿರೇಂದ್ರ ಸೆಹ್ವಾಗ್ ಮತ್ತು ಗೌತಮ್ ಗಂಭೀರ್ ಜೋಡಿ 136ರನ್ ಕಲೆ ಹಾಕಿತ್ತು. ಇದು ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪರ ದಾಖಲಾದ ಗರಿಷ್ಠ ಜೊತೆಯಾಟ ಎಂಬ ಕೀರ್ತಿಗೆ ಭಾಜನವಾಗಿತ್ತು. ಆದರೆ ಇದೀಗ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಜೋಡಿ 140ರನ್ ಕಲೆ ಹಾಕಿ ಈ ದಾಖಲೆಯನ್ನು ಹಿಂದಿಕ್ಕಿದೆ. ಆ ಮೂಲಕ ಅಗ್ರ ಸ್ಥಾನಕ್ಕೇರಿದೆ.ಇದನ್ನೂ ಓದಿ: ಟಿ20 ವಿಶ್ವಕಪ್: ಆಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 66 ರನ್ ಗಳ ಭರ್ಜರಿ ಜಯ3ನೇ ಸ್ಥಾನದಲ್ಲಿ 2014ರಲ್ಲಿ ಮೀರ್ ಪುರ್ ನಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಜೋಡಿ ಕಲೆಹಾಕಿದ್ದ 106ರನ್ ಜೊತೆಯಾಟವಿದ್ದು, ನಾಲ್ಕನೇ ಸ್ಥಾನದಲ್ಲಿ ಇದೇ ಜೋಡಿ ಇದೇ ಮೀರ್ ಪುರ್ ನಲ್ಲಿ ಬಾಂಗ್ಲಾದೇಶದ ವಿರುದ್ಧ ಕಲೆ ಹಾಕಿದ್ದ 100ರನ್ ಗಳ ಜೊತೆಯಾಟವಿದೆ.ಇದನ್ನೂ ಓದಿ: ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ 'ಕನ್ನಡಿಗ' ರಾಹುಲ್ ದ್ರಾವಿಡ್ ನೇಮಕT20 : ಸೆಮಿಫೈನಲ್ ಗೆ ಹೋಗಲು ಕೊಹ್ಲಿ ಮುಂದೆ 2 ಸವಾಲು; ಪವಾಡ ನಡೆಯಬೇಕು!T20 : ಅಫ್ಘಾನ್ ವಿರುದ್ಧ ಸಿಡಿದೆದ್ದ ಟೀಂ ಇಂಡಿಯಾ!ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ 'ಕನ್ನಡಿಗ' ರಾಹುಲ್ ದ್ರಾವಿಡ್ ನೇಮಕಟಿ20 ವಿಶ್ವಕಪ್: ಆಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 66 ರನ್ ಗಳ ಭರ್ಜರಿ ಜಯ