ಭಾರತ ದ.ಆಫ್ರಿಕಾ: ಮೂರನೇ ಟಿ20 ಪಂದ್ಯಕ್ಕೆ ವಿರಾಟ್ ಕೊಹ್ಲಿಗೆ ವಿಶ್ರಾಂತಿ ಇಂದೋರ್‌ನಲ್ಲಿ ಮಂಗಳವಾರ ನಡೆಯಲಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟಿ 20 ಪಂದ್ಯಕ್ಕೆ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ನವದೆಹಲಿ: ಇಂದೋರ್‌ನಲ್ಲಿ ಮಂಗಳವಾರ ನಡೆಯಲಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟಿ 20 ಪಂದ್ಯಕ್ಕೆ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.ಅಕ್ಟೋಬರ್ 23 ರಂದು ಐಕಾನಿಕ್ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ತಮ್ಮ ವಿಶ್ವಕಪ್ ಅಭಿಯಾನವನ್ನು ಪ್ರಾರಂಭಿಸಿದಾಗ ಅವರು ಅತ್ಯುತ್ತಮ ಉತ್ಸಾಹದಲ್ಲಿ ಇರಬೇಕೆಂದು ಉನ್ನತ ಅಧಿಕಾರಿಗಳು ಭಾವಿಸಿದ್ದು, ಕೊಹ್ಲಿಯ ಕೆಲಸದ ಹೊರೆ ತಗ್ಗಿಸಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.ಇದನ್ನು ಓದಿ: ಭಾರತ ದ.ಆಫ್ರಿಕಾ: ಟಿ20ಯಲ್ಲಿ 11 ಸಾವಿರ ರನ್ ಗಳಿಸಿದ ಮೊದಲ ಭಾರತದ ಬ್ಯಾಟರ್ ವಿರಾಟ್ ಕೊಹ್ಲಿ!1ನೇ ಮತ್ತು 2ನೇ ಟಿ20ಐನಲ್ಲಿ ಭಾರತವು ದಕ್ಷಿಣ ಆಫ್ರಿಕಾವನ್ನು 8 ವಿಕೆಟ್‌ಗಳಿಂದ ಮತ್ತು 16 ರನ್‌ಗಳಿಂದ ಮಣಿಸಿ ಸರಣಿಯನ್ನು ವಶಪಡಿಸಿಕೊಂಡಿದೆ. ಮಂಗಳವಾರ ಸಂಜೆ ಹೋಳ್ಕರ್ ಕ್ರೀಡಾಂಗಣದಲ್ಲಿ ಅಂತಿಮ ಪಂದ್ಯ ನಡೆಯಲಿದೆ. ಮಂಗಳವಾರ ಗುವಾಹಟಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಐತಿಹಾಸಿಕ ಗೆಲುವು ಸಾಧಿಸಿದ ಸಂದರ್ಭದಲ್ಲಿ ಕೊಹ್ಲಿ 28 ಎಸೆತಗಳಲ್ಲಿ ಅಜೇಯ 49 ರನ್ ಗಳಿಸುವ ಮೂಲಕ ಅಮೋಘ ಪ್ರದರ್ಶನ ನೀಡಿದ್ದರು.ನಾಳಿನ ಪಂದ್ಯದಲ್ಲಿ ಬಹುಪಾಲು ಶ್ರೇಯಸ್ ಅಯ್ಯರ್ 3ನೇ ಸ್ಥಾನವನ್ನು ತುಂಬುವ ಸಾಧ್ಯತೆಯಿದೆ.