ಡಬ್ಲ್ಯೂಟಿಸಿ ಫೈನಲ್: 15 ಸದಸ್ಯರ ಭಾರತೀಯ ತಂಡ ಪ್ರಕಟ; ಮಾಯಾಂಕ್, ವಾಷಿಂಗ್ಟನ್ ಸುಂದರ್ ಗೆ ಸ್ಥಾನ ಇಲ್ಲ! ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್‌ ಫೈನಲ್‌ ಗಾಗಿ 15 ಸದಸ್ಯರ ಭಾರತೀಯ ತಂಡವನ್ನು ಬಿಸಿಸಿಐ ಮಂಗಳವಾರ ಪ್ರಕಟಿಸಿದೆ. ನವದೆಹಲಿ: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್‌ ಫೈನಲ್‌ ಗಾಗಿ 15 ಸದಸ್ಯರ ಭಾರತೀಯ ತಂಡವನ್ನು ಬಿಸಿಸಿಐ ಮಂಗಳವಾರ ಪ್ರಕಟಿಸಿದೆ. ಜೂನ್ 18ರಂದು ಇಂಗ್ಲೆಂಡ್‌ ನ ಸೌತಾಂಪ್ಟನ್‌ನಲ್ಲಿ ಪ್ರಾರಂಭವಾಗಲಿರುವ ಈ ಮೆಗಾ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ಆಟಗಾರರ ಹೆಸರುಗಳನ್ನು ಪ್ರಕಟಿಸಿದೆ. ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಶಾರ್ದೂಲ್ ಠಾಕೂರ್ ಸೇರಿದಂತೆ ಮಾಯಾಂಕ್ ಅಗರವಾಲ್ ಮತ್ತು ವಾಷಿಂಗ್ಟನ್ ಸುಂದರ್ ಟೂರ್ನಿಯಲ್ಲಿ ಸ್ಥಾನ ಪಡೆದಿಲ್ಲ. ಈಗಾಗಲೇ ಇಂಗ್ಲೆಂಡ್ ತಲುಪಿರುವ ಟೀಮ್ ಇಂಡಿಯಾ ಡಬ್ಲ್ಯುಟಿಸಿ ಫೈನಲ್ ಪಂದ್ಯಗಳಿಗೆ ಸಂಪೂರ್ಣ ಸಿದ್ಧತೆ ನಡೆಸುತ್ತಿದೆ. ಅಭ್ಯಾಸ ಪಂದ್ಯಗಳನ್ನು ಆಡುವ ಮೂಲಕ ನ್ಯೂಜಿಲೆಂಡ್ ವಿರುದ್ಧ ಹೋರಾಡಲು ಎಲ್ಲಾ ರೀತಿಯ ಸಿದ್ಧತೆ ನಡೆಸುತ್ತಿದೆ.ಟೀಂ ಇಂಡಿಯಾ ತಂಡ ವಿರಾಟ್ ಕೊಹ್ಲಿ(ನಾಯಕ) ಶುಭ್ಮನ್ ಗಿಲ್, ರೋಹಿತ್ ಶರ್ಮಾ, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ರಿಷಭ್ ಪಂತ್(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್ ಸಿರಾಜ್, ವೃದ್ಧಿಮಾನ್ ಸಾಹ(ವಿಕೆಟ್ ಕೀಪರ್), ಉಮೇಶ್ ಯಾದವ್, ಹನುಮ ವಿಹಾರಿ.# 15- #WTC21 ../ts9fK3j89t