ಏಷ್ಯಾಕಪ್ ಗೆ ಟೀಮ್ ಇಂಡಿಯಾ ಪಾಕಿಸ್ತಾನಕ್ಕೆ ಬರದಿದ್ದರೆ, 2023 ವಿಶ್ವಕಪ್ ಗೆ ನಾವೂ ಭಾರತಕ್ಕೆ ಹೋಗುವುದಿಲ್ಲ: ಪಿಸಿಬಿ ಮುಂಬರುವ ಏಷ್ಯಾಕಪ್ ಟೂರ್ನಿಗೆ ಭಾರತ ಪಾಕಿಸ್ತಾನಕ್ಕೆ ಬಾರದಿದ್ದರೇ ನಾವೂ ಕೂಡ ಭಾರತದಲ್ಲಿ ನಡೆಯಲ್ಲಿರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಮುಖ್ಯಸ್ಥ ರಮೀಝ್ ರಾಜಾ ಹೇಳಿದ್ದಾರೆ. ಇಸ್ಲಾಮಾಬಾದ್: ಮುಂಬರುವ ಏಷ್ಯಾಕಪ್ ಟೂರ್ನಿಗೆ ಭಾರತ ಪಾಕಿಸ್ತಾನಕ್ಕೆ ಬಾರದಿದ್ದರೇ ನಾವೂ ಕೂಡ ಭಾರತದಲ್ಲಿ ನಡೆಯಲ್ಲಿರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಮುಖ್ಯಸ್ಥ ರಮೀಝ್ ರಾಜಾ ಹೇಳಿದ್ದಾರೆ.ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧಗಳು ಹದಗೆಟ್ಟಿರುವ ಹಿನ್ನಲೆಯಲ್ಲಿ ಪಾಕಿಸ್ತಾನದಲ್ಲಿ ನಡೆಯಲ್ಲಿರುವ ಏಷ್ಯಾಕಪ್‌ಗೆ ಟೀಂ ಇಂಡಿಯಾ ಹೋಗುವುದಿಲ್ಲ ಎಂದು ಈಗಾಗಲೇ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದು, ಈ ಕುರಿತು ಮಾತನಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾರತ ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಇದೀಗ ಭಾರತದ ನಿಲುವಿಗೆ ವಿರೋಧ ವ್ಯಕ್ತಪಡಿಸಿರುವ ಪಾಕಿಸ್ತಾನ ಕ್ರಿಕೆಟ್ ಸಂಸ್ಥೆ ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯಲಿರುವ ಏಷ್ಯಾಕಪ್ ( ) ಟೂರ್ನಿ ಭಾರತ ಆಗಮಿಸದೇ ಇದ್ದರೇ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ( ) ಪಾಕಿಸ್ತಾನ ಕ್ರಿಕೆಟ್ ತಂಡ ಕೂಡ ಪಾಲ್ಗೊಳ್ಳುವುದಿಲ್ಲ ಎಂದು ಹೇಳಿದೆ.ಇದನ್ನೂ ಓದಿ: ಏಷ್ಯಾ ಕಪ್‌ಗಾಗಿ ಪಾಕಿಸ್ತಾನಕ್ಕೆ ಪ್ರಯಾಣ? ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೊಟ್ಟ ಉತ್ತರ ಇಲ್ಲಿದೆ...ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಪಿಸಿಬಿ ಅಧ್ಯಕ್ಷ ಹಾಗೂ ಮಾಜಿ ಕ್ರಿಕೆಟಿಗ ರಮೀಜ್ ರಾಜಾ ಒಂದು ವೇಳೆ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರದಿದ್ದರೆ, ನಾವು ಕೂಡ ಭಾರತದಲ್ಲಿ ನಡೆಯಲ್ಲಿರುವ ಏಕದಿನ ವಿಶ್ವಕಪ್ನಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.ಕಳೆದ ಬಾರಿಯೂ ಸಹ ಏಷ್ಯಾಕಪ್ ಆತಿಥ್ಯವನ್ನು ಪಾಕಿಸ್ತಾನಕ್ಕೆ ನೀಡಲಾಗಿತ್ತು. ಆದರೆ ಭಾರತ ಬರುವುದಿಲ್ಲ ಎಂಬ ಕಾರಣಕ್ಕಾಗಿ ಈ ಟೂರ್ನಿಯನ್ನು ಯುಎಇಯಲ್ಲಿ ಆಯೋಜಿಸಲಾಗಿತ್ತು. ಆದರೆ, ಈ ಬಾರಿ ಪರಿಸ್ಥಿತಿ ಹಾಗಿಲ್ಲ. ಸರ್ಕಾರದಿಂದ ಅನುಮತಿ ಸಿಗುವವರೆಗೆ ಪಾಕಿಸ್ತಾನ ತಂಡ ಭಾರತ ಪ್ರವಾಸ ಮಾಡುವುದಿಲ್ಲ . ವಿಶ್ವಕಪ್‌ನಲ್ಲಿ ಪಾಕಿಸ್ತಾನ ಭಾಗವಹಿಸದಿದ್ದರೆ ಅದನ್ನು ಯಾರು ನೋಡುತ್ತಾರೆ?. ನಮ್ಮ ಉದ್ದೇಶ ಸ್ಪಷ್ಟವಾಗಿದೆ. ಭಾರತ ತಂಡ ಇಲ್ಲಿಗೆ ಬಂದರೆ ಮಾತ್ರ ಪಾಕಿಸ್ತಾನ ತಂಡ ಭಾರತಕ್ಕೆ ಹೋಗಿ ವಿಶ್ವಕಪ್ ಆಡಲಿದೆ. ಒಂದು ವೇಳೆ ಟೀಂ ಇಂಡಿಯಾ ಬರದಿದ್ದರೆ, ಅವರು ನಾವಿಲ್ಲದೆ (ಪಾಕಿಸ್ತಾನ ತಂಡ) ವಿಶ್ವಕಪ್ ಆಡಬೇಕಾಗುತ್ತದೆ. ನಾವೂ ಕೂಡ ಕಠಿಣ ನಿಲುವು ತೆಗೆದುಕೊಳ್ಳಲು ಬದ್ಧರಿದ್ದೇವೆ. ನಮ್ಮ ತಂಡ ಉತ್ತಮ ಆಟ ಪ್ರದರ್ಶಿಸುತ್ತಿದೆ. ಅಲ್ಲದೆ ನಾವು ನಮ್ಮ ಮಂಡಳಿಯ ಆರ್ಥಿಕ ಸ್ಥಿತಿಯನ್ನು ಸಹ ಸುಧಾರಿಸಬೇಕಾಗಿದೆ. ನಮ್ಮ ತಂಡ ಉತ್ತಮವಾಗಿ ಆಡಿದರೆ ಮಾತ್ರ ಅದು ಸಂಭವಿಸುತ್ತದೆ. ಇದಕ್ಕೆ ಪೂರಕವೆಂಬಂತೆ ನಮ್ಮ ತಂಡ 2021ರ ಟಿ20 ವಿಶ್ವಕಪ್‌ನಲ್ಲಿ ಭಾರತವನ್ನು ಸೋಲಿಸಿದೆ. 2022 ರ ಏಷ್ಯಾಕಪ್‌ನಲ್ಲಿಯೂ ನಾವು ಭಾರತವನ್ನು ಸೋಲಿಸಿದ್ದೇವೆ. ಒಂದು ವರ್ಷದ ಅವಧಿಯಲ್ಲಿ ನಾವು ಬಿಲಿಯನ್ ಡಾಲರ್ ತಂಡವನ್ನು ಎರಡು ಬಾರಿ ಸೋಲಿಸಿದ್ದೇವೆ ಎಂದು ಹೇಳಿದ್ದಾರೆ.ಇದನ್ನೂ ಓದಿ: ಭಾರತ ಏಷ್ಯಾ ಕಪ್‌ಗೆ ತೆರಳದಿದ್ದರೆ ಏಕದಿನ ವಿಶ್ವ ಕಪ್‌ ಟೂರ್ನಿಯಿಂದ ಹಿಂದೆ ಸರಿಯುವುದಾಗಿ ಪಾಕ್ ಬೆದರಿಕೆ2008ರ ನಂತರ ಭಾರತ ತಂಡ ಪಾಕಿಸ್ತಾನಕ್ಕೆ ಹೋಗಿಲ್ಲ ಕಳೆದ ಕೆಲವು ವರ್ಷಗಳಿಂದ ಭಾರತ ಮತ್ತು ಪಾಕಿಸ್ತಾನ ( ) ನಡುವಿನ ಹದಗೆಟ್ಟ ರಾಜಕೀಯ ಸಂಬಂಧದಿಂದಾಗಿ ಕ್ರಿಕೆಟ್ ಸಂಬಂಧವೂ ಹದಗೆಟ್ಟಿದೆ. ಎರಡು ದೇಶಗಳು ಪರಸ್ಪರ ದ್ವಿಪಕ್ಷೀಯ ಸರಣಿಯನ್ನು ಆಡುವುದನ್ನು ಬಿಟ್ಟು ಬಹಳ ವರ್ಷಗಳೇ ಕಳೆದಿವೆ. ಐಸಿಸಿ ಈವೆಂಟ್ಗಳಲ್ಲಿ ಮಾತ್ರ ಈ ಎರಡು ತಂಡಗಳು ಮುಖಾಮುಖಿಯಾಗುವುದನ್ನು ಅಭಿಮಾನಿಗಳು ಕಣ್ತುಂಬಿಕೊಳ್ಳುತ್ತಾರೆ. ಭಾರತ ಕೊನೆಯ ಬಾರಿಗೆ 2008ರಲ್ಲಿ ಏಷ್ಯಾಕಪ್‌ಗಾಗಿ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡಿತ್ತು. ಪಾಕಿಸ್ತಾನಿ ತಂಡ ಕೂಡ 2016 ರಲ್ಲಿ ಐಸಿಸಿ ಟಿ20 ವಿಶ್ವಕಪ್‌ಗಾಗಿ ಕೊನೆಯ ಬಾರಿಗೆ ಭಾರತಕ್ಕೆ ಬಂದಿತ್ತು. ಏಷ್ಯಾಕಪ್ ಹೊರತಾಗಿ 2025ರ ಚಾಂಪಿಯನ್ಸ್ ಟ್ರೋಫಿಗೆ ಪಾಕಿಸ್ತಾನ ಆತಿಥ್ಯ ವಹಿಸುತ್ತಿರುವುದರಿಂದ ಭಾರತಕ್ಕೆ ಇದು ನುಂಗಲಾರದ ಬಿಸಿ ತುಪ್ಪವಾಗಿದೆ. 2008ರ ನಂತರ ಮೊದಲ ಬಾರಿಗೆ ಪಾಕಿಸ್ತಾನ ಐಸಿಸಿ ಟೂರ್ನಿಯನ್ನು ಆಯೋಜಿಸಲಿದೆ.