3ನೇ ಏಕದಿನ: ಕಿವೀಸ್ ವಿರುದ್ಧ ಮತ್ತೊಂದು ಶತಕ: ಶುಭ್ ಮನ್ ಗಿಲ್ ದಾಖಲೆ, ಜಂಟಿ ಅಗ್ರ ಸ್ಥಾನ ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಶತಕ ಸಿಡಿಸಿದ ಶುಭ್ ಮನ್ ಗಿಲ್ 2 ವಿಶೇಷ ದಾಖಲೆಗಳನ್ನು ನಿರ್ಮಿಸಿದ್ದಾರೆ. ಇಂದೋರ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಶತಕ ಸಿಡಿಸಿದ ಶುಭ್ ಮನ್ ಗಿಲ್ 2 ವಿಶೇಷ ದಾಖಲೆಗಳನ್ನು ನಿರ್ಮಿಸಿದ್ದಾರೆ.ಇಂದೋರ್ ನ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 3ನೇ ಏಕದಿನ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಗೆ ಇಳಿದ ಭಾರತ ತಂಡಕ್ಕೆ ನಾಯಕ ರೋಹಿತ್ ಶರ್ಮಾ ಮತ್ತು ಶುಭ್ ಮನ್ ಗಿಲ್ ಭರ್ಜರಿ ಆರಂಭ ಒದಗಿಸಿದರು. ಮೊದಲ ವಿಕೆಟ್ ಗೆ ಈ ಜೋಡಿ ಬರೊಬ್ಬರಿ 212ರನ್ ಗಳ ಅಮೋಘ ಜೊತೆಯಾಟ ನೀಡಿತು. ಈ ಪೈಕಿ ಇಬ್ಬರೂ ಆರಂಭಿಕರು ಶತಕ ಸಿಡಿಸಿದ್ದು ವಿಶೇಷವಾಗಿತ್ತು. 85 ಎಸೆತಗಳಲ್ಲಿ 6 ಸಿಕ್ಸರ್ ಮತ್ತು 9 ಬೌಂಡರಿಗಳ ಸಮೇತ ರೋಹಿತ್ ಶರ್ಮಾ 101ರನ್ ಗಳಿಸಿದರೆ, 78 ಎಸೆತಗಳಲ್ಲಿ 5 ಸಿಕ್ಸರ್ ಹಾಗೂ 13 ಬೌಂಡರಿಗಳ ನೆರವಿನಿಂದ ಗಿಲ್ 112 ರನ್ ಚಚ್ಚಿದರು.ಇದನ್ನೂ ಓದಿ: 3ನೇ ಏಕದಿನ ಪಂದ್ಯ: ಟಾಸ್ ಗೆದ್ದ ಕಿವೀಸ್ ಬೌಲಿಂಗ್ ಆಯ್ಕೆ, ಟೀಂ ಇಂಡಿಯಾದಲ್ಲಿ 2 ಬದಲಾವಣೆಈ ಮೂಲಕ ಏಕದಿನ ವೃತ್ತಿ ಜೀವನದ 4ನೇ ಶತಕವನ್ನು ಗಿಲ್ ಸಿಡಿಸಿದರು. ಅಂತೆಯೇ ಈ ಶತಕದ ಮೂಲಕ ಗಿಲ್ ಮತ್ತೊಂದು ಸಾಧನೆ ಮಾಡಿದ್ದು, 3 ಪಂದ್ಯಗಳ ದ್ವಿಪಕ್ಷೀಯ ಏಕದಿನ ಸರಣಿಯಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಜಂಟಿ ಮೊದಲ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಈ ಹಿಂದೆ 2016ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಪಾಕಿಸ್ತಾನ ಬಾಬರ್ ಆಜಂ 360 ರನ್ ಸಿಡಿಸಿ 3 ಪಂದ್ಯಗಳ ದ್ವಿಪಕ್ಷೀಯ ಏಕದಿನ ಸರಣಿಯಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದರು. ಇದೀಗ ಗಿಲ್ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲೂ ಅಷ್ಟೇ ರನ್ ಕಲೆಹಾಕಿ ಜಂಟಿ ಅಗ್ರ ಸ್ಥಾನಕ್ಕೇರಿದ್ದಾರೆ.: 3- 360 2016 360 2023 349 2018 342 2013 330 2013