3ನೇ ಏಕದಿನ: ಇಂಗ್ಲೆಂಡ್ ವಿರುದ್ಧ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ. ಮ್ಯಾಂಚೆಸ್ಟರ್: ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ. ಗಾಯದ ಸಮಸ್ಯೆ ಎದುರಿಸುತ್ತಿರುವ ಬಲಗೈ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ ಅವರಿಗೆ ಈ ಪಂದ್ಯದಿಂದ ವಿಶ್ರಾಂತಿ ಸೂಚಿಸಲಾಗಿದೆ. ಇದು ಭಾರತ ತಂಡಕ್ಕೆ ಭಾರಿ ಹಿನ್ನಡೆಯನ್ನುಂಟು ಮಾಡಿದೆ. @ImRo45 . - ://./ # ../zmJ8FNMRSKಬೂಮ್ರಾ ಸ್ಥಾನವನ್ನು ಮೊಹಮ್ಮದ್ ಸಿರಾಜ್ ತುಂಬಲಿದ್ದು, ಮೊದಲ ಪಂದ್ಯದಲ್ಲಿ ಜೀವನಶ್ರೇಷ್ಠ ಬೌಲಿಂಗ್ ಪ್ರದರ್ಶನ ಮಾಡಿದ್ದ ಬೂಮ್ರಾ, ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಅತ್ತ ಇಂಗ್ಲೆಂಡ್ ತಂಡದಲ್ಲಿ ಯಾವುದೇ ಬದಲಾವಣೆ ತರಲಾಗಿಲ್ಲ. ಇನ್ನು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಮತ್ತು ಇಂಗ್ಲೆಂಡ್ ತಲಾ 1 ಪಂದ್ಯ ಗೆದ್ದು ಸಮಬಲ ಸಾಧಿಸಿವೆ. ಈ ಪಂದ್ಯವನ್ನು ಗೆಲ್ಲುವ ತಂಡಕ್ಕೆ ಟ್ರೋಫಿ ಒಲಿಯಲಿದೆ.