2ನೇ ಟೆಸ್ಟ್: 326 ರನ್ ಗಳಿಗೆ ಟೀಂ ಇಂಡಿಯಾ ಆಲೌಟ್, 2ನೇ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ 4/98 ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಹಂಗಾಮಿ ನಾಯಕ ಅಂಜಿಕ್ಯ ರಹಾನೆ ಅವರ ಭರ್ಜರಿ ಶತಕದ ನೆರವಿನಿಂದ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ ನಲ್ಲಿ 326 ರನ್ ಗಳಿಸಿ ಆಲೌಟ್ ಆಗಿದೆ. ಮೆಲ್ಬೋರ್ನ್: ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಹಂಗಾಮಿ ನಾಯಕ ಅಂಜಿಕ್ಯ ರಹಾನೆ ಅವರ ಭರ್ಜರಿ ಶತಕದ ನೆರವಿನಿಂದ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ ನಲ್ಲಿ 326 ರನ್ ಗಳಿಸಿ ಆಲೌಟ್ ಆಗಿದೆ. ಎರಡನೇ ದಿನದಾಟದ ಅಂತ್ಯಕ್ಕೆ ಟೀಂ ಇಂಡಿಯಾ 5 ವಿಕೆಟ್ ನಷ್ಟಕ್ಕೆ 277 ರನ್ ಪೇರಿಸಿತ್ತು. ಇಂದು ಬ್ಯಾಟಿಂಗ್ ಆರಂಭಿಸಿದ ರಹಾನೆ 112 ರನ್ ಗಳಿಗೆ ಔಟಾದರೆ ರವೀಂದ್ರ ಜಡೇಜಾ 57 ರನ್ ಗೆ ಔಟಾದರು. ಇನ್ನುಳಿದಂತೆ ಅಶ್ವಿನ್ 14 ಹಾಗೂ ಉಮೇಶ್ ಯಾದವ್ 9 ರನ್ ಬಾರಿಸಿದ್ದಾರೆ. ಟೀಂ ಇಂಡಿಯಾ 131 ರನ್ ಗಳ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ಪ್ರಮುಖ ನಾಲ್ಕು ವಿಕೆಟ್ ಕಳೆದುಕೊಂಡು 98 ರನ್ ಪೇರಿಸಿದೆ. ಆಸ್ಟ್ರೇಲಿಯಾ ಪರ ಎರಡನೇ ಇನ್ನಿಂಗ್ಸ್ ನಲ್ಲಿ ಮ್ಯಾಥ್ಯೂವ್ ವಾಡೆ 40, ಜೋ ಬರ್ನ್ಸ್ 4, ಮಾರ್ನಸ್ ಲ್ಯಾಬುಸ್ಚಾಗ್ನೆ 28 ಮತ್ತು ಸ್ಟೀವನ್ ಸ್ಮಿತ್ 8 ರನ್ ಪೇರಿಸಿದ್ದಾರೆ. ಇನ್ನುರ ಹೆಡ್ ಅಜೇಯ 17 ರನ್ ಹಾಗೂ ಕ್ಯಾಮೆರೂನ್ ಗ್ರೀನ್ ಅಜೇಯ 0 ಬ್ಯಾಟಿಂಗ್ ಮಾಡುತ್ತಿದ್ದಾರೆ. ಟೀಂ ಇಂಡಿಯಾ ಪರ ಬೌಲಿಂಗ್ ನಲ್ಲಿ ಬುಮ್ರಾ, ಉಮೇಶ್ ಯಾದವ್, ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ತಲಾ 1 ವಿಕೆಟ್ ಪಡೆದಿದ್ದಾರೆ. ಮೊದಲು ಇನ್ನಿಂಗ್ಸ್ ಆರಂಭಿಸಿದ್ದ ಆಸ್ಟ್ರೇಲಿಯಾ 195 ರನ್ ಗಳಿಗೆ ಆಲೌಟ್ ಆಗಿತ್ತು.