T20 ತಂಡದಿಂದ ಕೆಎಲ್ ರಾಹುಲ್ ಔಟ್? ಶ್ರೀಲಂಕಾ ವಿರುದ್ಧ ಸರಣಿಗೆ ರೋಹಿತ್ ಅಲಭ್ಯ! ಹಾರ್ದಿಕ್ ಎಂಟ್ರಿ ಸಾಧ್ಯತೆ! ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಟಿ20 ಪಂದ್ಯಗಳ ಸರಣಿ ಜನವರಿ 3ರಿಂದ ಆರಂಭವಾಗಲಿದೆ. ಇದಕ್ಕಾಗಿ ಇನ್ನು ಕೆಲವೇ ದಿನಗಳಲ್ಲಿ ಬಿಸಿಸಿಐ ತಂಡವನ್ನು ಘೋಷಿಸಲಿದ್ದು, ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಭಾರತದ ನಾಯಕ ರೋಹಿತ್ ಶರ್ಮಾ ಅಲಭ್ಯರಾಗಲಿದ್ದಾರೆ. ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಟಿ20 ಪಂದ್ಯಗಳ ಸರಣಿ ಜನವರಿ 3ರಿಂದ ಆರಂಭವಾಗಲಿದೆ. ಇದಕ್ಕಾಗಿ ಇನ್ನು ಕೆಲವೇ ದಿನಗಳಲ್ಲಿ ಬಿಸಿಸಿಐ ತಂಡವನ್ನು ಘೋಷಿಸಲಿದ್ದು, ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಭಾರತದ ನಾಯಕ ರೋಹಿತ್ ಶರ್ಮಾ ಅಲಭ್ಯರಾಗಲಿದ್ದಾರೆ.ರೋಹಿತ್ ಶರ್ಮಾ ಬೆರಳಿನ ಗಾಯ ಇನ್ನೂ ವಾಸಿಯಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ತಂಡದ ನಾಯಕತ್ವ ವಹಿಸುವ ಸಾಧ್ಯತೆ ಇದೆ. ಇನ್ನು ಟಿ20 ತಂಡದಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಸ್ಥಾನವೂ ಖಚಿತವಾಗಿಲ್ಲ. ಶ್ರೀಲಂಕಾ ವಿರುದ್ಧದ ಸರಣಿಯಿಂದ ಅವರನ್ನು ಕೈಬಿಡುವ ಸಾಧ್ಯತೆಗಳಿವೆ. ಟಿ20 ಈ ಸ್ವರೂಪದಲ್ಲಿ ರಾಹುಲ್ ಅವರ ಇತ್ತೀಚಿನ ಫಾರ್ಮ್ ತುಂಬಾ ಕಳಪೆಯಾಗಿದೆ. ಕಳೆದ ಆರು ಇನ್ನಿಂಗ್ಸ್‌ಗಳಲ್ಲಿ ಕೆಎಲ್ ರಾಹುಲ್ ಎರಡು ಅರ್ಧ ಶತಕಗಳನ್ನು ಗಳಿಸಿದ್ದಾರೆ. ಆದರೆ ಅದು ಎರಡೂ ದುರ್ಬಲ ತಂಡದ ವಿರುದ್ಧವಾಗಿದೆ. ರಾಹುಲ್ ಪಾಕಿಸ್ತಾನ ವಿರುದ್ಧ 4, ನೆದರ್ಲೆಂಡ್ಸ್ ವಿರುದ್ಧ 9, ದಕ್ಷಿಣ ಆಫ್ರಿಕಾ ವಿರುದ್ಧ 9, ಬಾಂಗ್ಲಾದೇಶ ವಿರುದ್ಧ 50, ಜಿಂಬಾಬ್ವೆ ವಿರುದ್ಧ 51 ಮತ್ತು ಇಂಗ್ಲೆಂಡ್ ವಿರುದ್ಧ 5 ರನ್ ಗಳಿಸಿದರು.ಇದನ್ನೂ ಓದಿ: ಬಾಂಗ್ಲಾ ವಿರುದ್ಧ 2ನೇ ಟೆಸ್ಚ್ ಗೆಲುವು: ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ ಟೀಂ ಇಂಡಿಯಾ 2ನೇ ಸ್ಛಾನ ಮತ್ತಷ್ಟು ಭದ್ರ, ಫೈನಲ್ ಗೆ ಸನಿಹಶ್ರೀಲಂಕಾ ವಿರುದ್ಧದ ಸರಣಿಗೆ ತಂಡವನ್ನು ಚೇತನ್ ಶರ್ಮಾ ನೇತೃತ್ವದ ರಾಷ್ಟ್ರೀಯ ಆಯ್ಕೆ ಸಮಿತಿ ಆಯ್ಕೆ ಮಾಡಲಿದೆ. ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡದ ಕಳಪೆ ಪ್ರದರ್ಶನದಿಂದಾಗಿ ಈ ಆಯ್ಕೆ ಸಮಿತಿಯನ್ನು ವಜಾ ಮಾಡಲಾಗಿತ್ತು. ಆದರೆ ಹೊಸ ಆಯ್ಕೆ ಸಮಿತಿಯನ್ನು ಪ್ರಕಟಿಸಲು ಒಂದು ವಾರ ಬೇಕಾಗಬಹುದು. ಹೀಗಾಗಿ ಚೇತನ್ ಶರ್ಮಾ ಆಯ್ಕೆ ಸಮಿತಿಯ ಆಯ್ಕೆ ಮಾಡಲಿದೆ.ವಿರಾಟ್‌ಗೆ ವಿಶ್ರಾಂತಿ? ವಿರಾಟ್ ಕೊಹ್ಲಿ ಕೂಡ ಟಿ20 ಮಾದರಿಯಿಂದ ಕೆಲ ದಿನಗಳ ಕಾಲ ವಿಶ್ರಾಂತಿ ಪಡೆಯಬಹುದು. ರೋಹಿತ್ ಅನುಪಸ್ಥಿತಿಯಲ್ಲಿ ಹಾರ್ದಿಕ್ ಈಗಾಗಲೇ ಭಾರತ ತಂಡದ ನಾಯಕತ್ವ ವಹಿಸಿದ್ದಾರೆ. ಇತ್ತೀಚೆಗೆ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ತಂಡದ ನಾಯಕತ್ವ ವಹಿಸಿದ್ದರು.ಹಾರ್ದಿಕ್ ಪಾಂಡ್ಯ ಇಂಡಿಯನ್ ಪ್ರೀಮಿಯರ್ ಲೀಗ್ 2022ರಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕರಾಗಿ 15 ಪಂದ್ಯಗಳಲ್ಲಿ 44.27 ರ ಸರಾಸರಿಯಲ್ಲಿ 487 ರನ್ ಗಳಿಸಿದರು. ಇದರಲ್ಲಿ ನಾಲ್ಕು ಅರ್ಧಶತಕಗಳು ಸೇರಿದ್ದವು. ಈ ಟೂರ್ನಿಯಲ್ಲಿ ಎಂಟು ವಿಕೆಟ್‌ಗಳನ್ನೂ ಕಬಳಿಸಿದ್ದರು. ಇದರ ನಂತರ ಜೂನ್ ತಿಂಗಳಲ್ಲಿ ಅವರನ್ನು ಭಾರತೀಯ ತಂಡದ ಉಪನಾಯಕರನ್ನಾಗಿ ಮಾಡಲಾಯಿತು.