2ನೇ ಟೆಸ್ಟ್: ಶಮಿ, ಬುಮ್ರಾ ಜೊತೆಯಾಟ, ಇಂಗ್ಲೆಂಡ್ ಗೆ 272 ರನ್ ಗುರಿ; 2 ವಿಕೆಟ್ ಪತನ, ಆಂಗ್ಲರಿಗೆ ಆರಂಭಿಕ ಆಘಾತ! ಕೆಳ ಕ್ರಮಾಂಕದಲ್ಲಿ ಮೊಹಮ್ಮದ್ ಶಮಿ ಹಾಗೂ ಜಸ್ಪ್ರಿತ್ ಬುಮ್ರಾ ಅವರ ಭರ್ಜರಿ ಜೊತೆಯಾಟದ ನೆರವಿನಿಂದ ಟೀಮ್ ಇಂಡಿಯಾ ಇಲ್ಲಿ ನಡೆದಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ತಂಡಕ್ಕೆ 272 ರನ್ ಗಳ ಗುರಿ ನೀಡಿದೆ. ಲಾರ್ಡ್ಸ್: ಕೆಳ ಕ್ರಮಾಂಕದಲ್ಲಿ ಮೊಹಮ್ಮದ್ ಶಮಿ ಹಾಗೂ ಜಸ್ಪ್ರಿತ್ ಬುಮ್ರಾ ಅವರ ಭರ್ಜರಿ ಜೊತೆಯಾಟದ ನೆರವಿನಿಂದ ಟೀಮ್ ಇಂಡಿಯಾ ಇಲ್ಲಿ ನಡೆದಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ತಂಡಕ್ಕೆ 272 ರನ್ ಗಳ ಗುರಿ ನೀಡಿದೆ.ಸೋಮವಾರ ಆರನೇ ವಿಕೆಟ್ ನಷ್ಟಕ್ಕೆ 181 ರನ್ ಗಳಿಂದ ಎರಡನೇ ಇನ್ನಿಂಗ್ಸ್ ಮುಂದುವರಿಸಿದ ಭಾರತ 8 ವಿಕೆಟ್ ಗೆ 298 ರನ್ ಕಲೆ ಹಾಕಿ ಡಿಕ್ಲೇರ್ ಮಾಡಿಕೊಂಡಿತು.ಯುವ ವಿಕೆಟ್ ಕೀಪರ್ ರಿಷಭ್ ಪಂತ್ (22) ದೊಡ್ಡ ಇನ್ನಿಂಗ್ಸ್ ಕಟ್ಟುವಲ್ಲಿ ಎಡವಿದರು. ಇಶಾಂತ್ ಶರ್ಮಾ (16) ಜವಾಬ್ದಾರಿ ಮರೆತರು. 209 ರನ್ ಗಳಿಗೆ 8 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ಬುಮ್ರಾ ಹಾಗೂ ಶಮಿ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ ಇಂಗ್ಲೆಂಡ್ ತಂಡದ ಬೌಲರ್ ಗಳನ್ನು ಕಾಡಿತು. ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ಬೌಲರ್ ಗಳು ತಂಡದ ಮೊತ್ತವನ್ನು ಹಿಗ್ಗಿಸುವಲ್ಲಿ ಶ್ರಮಿಸಿತು.ವೇಗಿ ಶಮಿ 70 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್ ಸಹಾಯದಿಂದ ಅಜೇಯ 56 ರನ್ ಬಾರಿಸಿದರು. ಇನ್ನು ಜಸ್ಪ್ರಿತ್ ಬುಮ್ರಾ ಅಜೇಯ 34 ರನ್ ಬಾರಿಸಿ ಮಿಂಚಿದರು.ಇಂಗ್ಲೆಂಡ್ ಪರ ಮಾರ್ಕ್ ವುಡ್ 3, ಮೋಯಿನ್ ಅಲಿ, ಒಲಿ ರಾಬಿನ್ಸನ್ ತಲಾ ಎರಡು ವಿಕೆಟ್ ಪಡೆದರು.ಸಂಕ್ಷಿಪ್ತ ಸ್ಕೋರ್ ಭಾರತ 364, ಎರಡನೇ ಇನ್ನಿಂಗ್ಸ್ 8 ವಿಕೆಟ್ ಗೆ 298 ಡಿಕ್ಲೇರ್ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ 391