3ನೇ ಏಕದಿನ: ಪಾಕಿಸ್ತಾನದ ಇಮಾಮ್ ಉಲ್ ಹಕ್ ಅಪರೂಪದ ದಾಖಲೆ ಹಿಂದಿಕ್ಕಿದ ಶುಭ್ ಮನ್ ಗಿಲ್ ವೆಸ್ಟ್ ಇಂಡೀಸ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ ಭಾರತದ ಸ್ಫೋಟಕ ಬ್ಯಾಟರ್ ಶುಭ್ ಮನ್ ಗಿಲ್ ಪಾಕಿಸ್ತಾನದ ಇಮಾಮ್ ಉಲ್ ಹಕ್ ಅವರ ಅಪರೂಪದ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಟ್ರಿನಿಡಾಡ್: ವೆಸ್ಟ್ ಇಂಡೀಸ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ ಭಾರತದ ಸ್ಫೋಟಕ ಬ್ಯಾಟರ್ ಶುಭ್ ಮನ್ ಗಿಲ್ ಪಾಕಿಸ್ತಾನದ ಇಮಾಮ್ ಉಲ್ ಹಕ್ ಅವರ ಅಪರೂಪದ ದಾಖಲೆಯನ್ನು ಹಿಂದಿಕ್ಕಿದ್ದಾರೆ.3ನೇ ಏಕದಿನ ಪಂದ್ಯದಲ್ಲಿ ಕೇವಲ 92 ಎಸೆತಗಳಲ್ಲಿ 11 ಬೌಂಡರಿಗಳ ನೆರವಿನಿಂದ 85 ರನ್ ಗಳಿಸಿದರು. ಈ ಮೊತ್ತದೊಂದಿಗೆ ಗಿಲ್ ಪಾಕಿಸ್ತಾನದ ಇಮಾಮ್ ಉಲ್ ಹಕ್ ಅವರ ಅಪರೂಪದ ದಾಖಲೆಯನ್ನು ಮುರಿದಿದ್ದಾರೆ. ಕ್ರಿಕೆಟ್ ಲೋಕದಲ್ಲಿ ಮತ್ತೊಂದು ಮೈಲಿಗಲ್ಲು ನೆಟ್ಟಿದ ಗಿಲ್, 27 ಏಕದಿನ ಇನ್ನಿಂಗ್ಸ್‌ಗಳಲ್ಲಿ ಅಧಿಕ ಏಕದಿನ ರನ್ ದಾಖಲಿಸಿದ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.ಇದನ್ನೂ ಓದಿ: 3ನೇ ಏಕದಿನ ಪಂದ್ಯ: ಸುದೀರ್ಘ ಕಾಲದ ಬಳಿಕ ಟೀಂ ಇಂಡಿಯಾಗೆ ಕಮ್ ಬ್ಯಾಕ್: ದಾಖಲೆ ಬರೆದ ಉನಾದ್ಕತ್27 ಏಕದಿನ ಪಂದ್ಯಗಳಲ್ಲಿ ಗಿಲ್, 62.48 ಸರಾಸರಿಯಲ್ಲಿ 1437 ರನ್ ಗಳಿಸಿದ್ದಾರೆ. ಇದರೊಂದಿಗೆ ಪಾಕಿಸ್ತಾನದ ಬ್ಯಾಟರ್ ಇಮಾನ್-ಉಲ್-ಹಕ್ರ 4 ವರ್ಷಗಳ ಸಾಧನೆಯನ್ನು ಗಿಲ್ ಹಿಂದಿಕ್ಕಿದ್ದಾರೆ. ಇಮಾಮ್ 27 ಏಕದಿನ ಪಂದ್ಯಗಳಲ್ಲಿ 1381 ರನ್ ಗಳಿಸಿದ್ದರು. ಆ ಮೂಲಕ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಇದ್ದರು. ಈಗ ಗಿಲ್, ಅವರನ್ನು ಹಿಂದಕ್ಕೆ ತಳ್ಳಿದ್ದು ಅವರು 2ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. 27 : 1437 : 1381: 1353: 1353: 1342 342: 1330: 1326: 1300: