ದ್ರಾವಿಡ್ ದಾಖಲೆ ಮುರಿದ ರೋಹಿತ್ ಶರ್ಮಾ! ಟೆಸ್ಟ್ ವಿಭಾಗದಲ್ಲಿ ಭಾರತ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಟೆಸ್ಟ್ ವಿಭಾಗದಲ್ಲಿ ಭಾರತ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಭಾರತೀಯ ಕ್ರಿಕೆಟಿಗರೊಬ್ಬರು ಇಂಗ್ಲೆಂಡ್ ನಲ್ಲಿ ಅತಿ ಹೆಚ್ಚು ಅಂತಾರಾಷ್ಟ್ರೀಯ ಶತಕಗಳನ್ನು ಗಳಿಸಿದ ದಾಖಲೆ ಈ ವರೆಗೂ ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿತ್ತು. ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ನ ಸೆ.04 ರ ಪಂದ್ಯದಲ್ಲಿ ರೋಹಿತ್ ಶರ್ಮಾ ಶತಕ ಗಳಿಸುವ ಮೂಲಕ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಕೆನ್ನಿಂಗ್ ಟನ್ ಓವಲ್ ನಲ್ಲಿ ನಡೆದ ಪಂದ್ಯದಲ್ಲಿ ರೋಹಿತ್ ಶರ್ಮಾ ಶತಕ ದಾಖಲಿಸುವ ಮೂಲಕ ಇಂಗ್ಲೆಂಡ್ ನಲ್ಲಿ 9 ನೇ ಶತಕ ದಾಖಲಿಸಿದರು. ರಾಹುಲ್ ದ್ರಾವಿಡ್ ಇಂಗ್ಲೆಂಡ್ ನಲ್ಲಿ 8 ಶತಕ ದಾಖಲಿಸಿದ್ದರು.ಅಚ್ಚರಿಯೆಂದರೆ ರೋಹಿತ್ ಶರ್ಮಾ ಅವರ 9 ಶತಕಗಳ ಪೈಕಿ 8 ಶತಕಗಳು 2018 ರ ಪ್ರಾರಂಭದಿಂದ ದಾಖಲಾಗಿದ್ದವು ಲೆಜೆಂಡರಿ ಬ್ಯಾಟ್ಸ್ ಮನ್ ಡೊನಾಲ್ಡ್ ಬ್ರಾಡ್ ಮ್ಯಾನ್ ಇಂಗ್ಲೆಂಡ್ ನಲ್ಲಿ ಅತಿ ಹೆಚ್ಚು ಶತಕ (11 ಶತಕ) ದಾಖಲಿಸಿದ್ದಾರೆ.