ಐಪಿಎಲ್ 2023: ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆ 7 ರನ್ ಗಳ ರೋಚಕ ಜಯ ಐಪಿಎಲ್ 2023 ಟೂರ್ನಿಯ ಇಂದಿನ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 7 ರನ್ ಗಳ ವಿರೋಚಿತ ಜಯ ಸಾಧಿಸಿದೆ. ಹೈದರಾಬಾದ್‌: ಐಪಿಎಲ್ 2023 ಟೂರ್ನಿಯ ಇಂದಿನ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 7 ರನ್ ಗಳ ವಿರೋಚಿತ ಜಯ ಸಾಧಿಸಿದೆ.ಕಡಿಮೆ ಮೊತ್ತದ ಹೊರತಾಗಿಯೂ ಡೆಲ್ಲಿ ಬೌಲರ್ ಗಳ ಪರಾಕ್ರಮದ ಬೌಲಿಂಗ್ ಪ್ರದರ್ಶನದಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್‌ ( ) ತಂಡ ಹೈದರಾಬಾದ್‌ ಸನ್‌ ರೈಸರ್ಸ್‌ ( ) ವಿರುದ್ಧ 7 ರನ್‌ಗಳ ರೋಚಕ ಜಯ ಸಾಧಿಸಿದೆ. ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಡೆಲ್ಲಿ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 144 ರನ್‌ಗಳಿಸಿತು. ಸುಲಭ ಸವಾಲನ್ನು ಬೆನ್ನಟ್ಟಿದ್ದ ಹೈದರಾಬಾದ್‌ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 137 ರನ್‌ ಗಳಿಸಿ 7 ರನ್ ಗಳ ಅಂತರಗಲ್ಲಿ ಸೋಲೊಪ್ಪಿಕೊಂಡಿತು. ಇದನ್ನೂ ಓದಿ: ಅನುಷ್ಕಾ ಜೊತೆ ಡ್ಯಾನ್ಸ್ ಮಾಡುವಾಗ ಕೊಹ್ಲಿಗೆ ಸ್ನಾಯು ಸೆಳೆತ? ಜೋಪಾನ ಅಂದ್ರು ಫ್ಯಾನ್ಸ್, ವಿಡಿಯೋ!ಕೊನೆಯ 30 ಎಸೆತಗಳಲ್ಲಿ ಹೈದರಾಬಾದ್‌ ತಂಡಕ್ಕೆ 51 ರನ್‌ಗಳ ಅಗತ್ಯವಿತ್ತು. 17ನೇ ಓವರ್‌ನಲ್ಲಿ 13 ರನ್‌ ಬಂದರೆ 18ನೇ ಓವರ್‌ನಲ್ಲಿ 15 ರನ್‌ ಬಂದಿತ್ತು. 19ನೇ ಓವರ್‌ನಲ್ಲಿ10 ರನ್‌ ಬಂದರೂ ಹೆನ್ರಿಕ್ ಕ್ಲಾಸೆನ್ ಔಟಾದ ಪರಿಣಾಮ ಪಂದ್ಯ ರೋಚಕ ಘಟ್ಟಕ್ಕೆ ತಿರುಗಿತು. ಕೊನೆಯ ಓವರ್‌ನಲ್ಲಿ 13 ರನ್‌ಗಳ ಅಗತ್ಯವಿತ್ತು. ಮುಕೇಶ್‌ ಕುಮಾರ್‌ ಅತ್ಯುತ್ತಮ ಬೌಲಿಂಗ್‌ ಪ್ರದರ್ಶನ ನೀಡಿ ಕೇವಲ 5 ರನ್‌ ಬಿಟ್ಟುಕೊಡುವ ಮೂಲಕ ಡೆಲ್ಲಿ ತಂಡಕ್ಕೆ ಜಯವನ್ನು ತಂದುಕೊಟ್ಟರು.ಇದನ್ನೂ ಓದಿ: ಐಪಿಎಲ್ 2023: ಕೋಲ್ಕತಾ ವಿರುದ್ಧ ಚೆನ್ನೈಗೆ 50 ರನ್ ಗಳ ಭರ್ಜರಿ ಜಯಅಕ್ಷರ್‌ ಪಟೇಲ್‌ ಮತ್ತು ಅನ್ರಿಚ್‌ ನೋರ್ಕಿಯ ತಲಾ 2 ವಿಕೆಟ್‌ ಪಡೆದರೆ, ಇಶಾಂತ್‌ ಶರ್ಮಾ, ಕುಲದೀಪ್‌ ಯಾದವ್‌ ತಲಾ ಒಂದು ವಿಕೆಟ್‌ ಪಡೆದರು. ಐಪಿಎಲ್‌ ಅಂಕಪಟ್ಟಿಯಲ್ಲಿ 7 ಪಂದ್ಯ ಆಡಿ 2 ರಲ್ಲಿ ಜಯಗಳಿಸಿರುವ ಡೆಲ್ಲಿ 4 ಅಂಕ ಪಡೆದು 10ನೇ ಸ್ಥಾನದಲ್ಲೇ ಮುಂದುವರೆದರೆ ಹೈದರಾಬಾದ್‌ 2 ಜಯ ಸಾಧಿಸಿ 4 ಅಂಕ ಪಡೆದು 9ನೇ ಸ್ಥಾನದಲ್ಲಿ ಮುಂದುವರೆದಿದೆ.