ಪ್ರೇಮದಾಸದಲ್ಲಿ ಮುಂದುವರೆದ ಕೊಹ್ಲಿ ಬ್ಯಾಟಿಂಗ್ ಅಬ್ಬರ: ಸತತ 4 ಶತಕ, ಅಪರೂಪದ ದಾಖಲೆ ಬರೆದ 2ನೇ ಆಟಗಾರ ಶ್ರೀಲಂಕಾದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾರತ ತಂಡದ ರನ್ ಮೆಷಿನ್ ವಿರಾಟ್ ಬ್ಯಾಟಿಂಗ್ ಅಬ್ಬರ ಮುಂದುವರೆದಿದ್ದು, ಈ ಕ್ರೀಡಾಂಗಣದಲ್ಲಿ ಮತ್ತೊಂದು ಶತಕ ಸಿಡಿಸುವ ಮೂಲಕ ಅಪರೂಪದ ದಾಖಲೆಯೊಂದನ್ನು ಕೊಹ್ಲಿ ನಿರ್ಮಿಸಿದ್ದಾರೆ. ಕೊಲಂಬೋ: ಶ್ರೀಲಂಕಾದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾರತ ತಂಡದ ರನ್ ಮೆಷಿನ್ ವಿರಾಟ್ ಬ್ಯಾಟಿಂಗ್ ಅಬ್ಬರ ಮುಂದುವರೆದಿದ್ದು, ಈ ಕ್ರೀಡಾಂಗಣದಲ್ಲಿ ಮತ್ತೊಂದು ಶತಕ ಸಿಡಿಸುವ ಮೂಲಕ ಅಪರೂಪದ ದಾಖಲೆಯೊಂದನ್ನು ಕೊಹ್ಲಿ ನಿರ್ಮಿಸಿದ್ದಾರೆ.ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಭಾರತ ತಂಡದ ರನ್ ಮೆಷಿನ್ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಶ್ರೀಲಂಕಾದ ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ಸತತ 4 ಶತಕ ಸಿಡಿಸಿದ ದಾಖಲೆ ನಿರ್ಮಿಸಿದ್ದಾರೆ.ಇದನ್ನೂ ಓದಿ: ಪಾಕ್ ವಿರುದ್ಧ ದಾಖಲೆಯ ಶತಕ ಸಿಡಿಸಿದ ಕೊಹ್ಲಿ-ರಾಹುಲ್ಪಾಕಿಸ್ತಾನ ಬೌಲರ್ ಗಳನ್ನು ಇನ್ನಿಲ್ಲದಂತೆ ಕಾಡಿದ ವಿರಾಟ್ ಕೊಹ್ಲಿ ಕೇವಲ 94 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 9 ಬೌಂಡರಿಗಳ ನೆರವಿನಿಂದ ಬರೊಬ್ಬರಿ ಅಜೆಯೇ 122ರನ್ ಗಳನ್ನು ಪೇರಿಸಿದರು. ಅಂತೆಯೇ ಏಕದಿನ ಕ್ರಿಕೆಟ್ ವೃತ್ತಿ ಜೀವನದ ತಮ್ಮ 47ನೇ ಶತಕವನ್ನೂ ಪೂರೈಸಿಕೊಂಡರು. ಅಲ್ಲದೆ ಏಕದಿನ ಕ್ರಿಕೆಟ್ ವೃತ್ತಿ ಜೀವನದಲ್ಲಿ 13000 ರನ್ ಪೂರೈಸಿದರು. 4 - 128*(119) , 2012 131(96) , 2017 110*(116) , 2017 122*(94) , 2023# # ../htB7EgyPQ1ಅಂತೆಯೇ ಕೊಹ್ಲಿ ಇದೇ ಪ್ರೇಮದಾಸ ಕ್ರಿಕೆಟ್ ಮೈದಾನದಲ್ಲಿ ಸತತ 4 ಶತಕ ಸಿಡಿಸಿದ ದಾಖಲೆ ನಿರ್ಮಿಸಿದ್ದು, ಈ ಮೂಲಕ ಕೊಹ್ಲಿ ಏಕದಿನ ಇತಿಹಾಸದಲ್ಲಿ ಒಂದೇ ಮೈದಾನದಲ್ಲಿ ಸತತ ನಾಲ್ಕು ಶತಕ ಸಿಡಿಸಿದ ಜಗತ್ತಿನ 2ನೇ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಪ್ರೇಮದಾಸ ಸ್ಟೇಡಿಯಂನಲ್ಲಿ ಕೊಹ್ಲಿ ತಮ್ಮ ಕೊನೆಯ ನಾಲ್ಕು ಪಂದ್ಯಗಳಲ್ಲಿ ತಲಾ ಒಂದು ಶತಕ ಗಳಿಸಿದ್ದಾರೆ. ಈ ಹಿಂದೆ 2017ರಲ್ಲಿ ನಡೆದ ಏಕದಿನ ಸರಣಿಯಲ್ಲಿ ಶ್ರೀಲಂಕಾ ವಿರುದ್ಧ ಕೊಹ್ಲಿ ಎರಡು ಶತಕಗಳನ್ನು ಬಾರಿಸಿದ್ದರು. 2012ರಲ್ಲಿ ಮತ್ತದೇ ಶ್ರೀಲಂಕಾ ವಿರುದ್ಧ ಭರ್ಜರಿ ಶತಕ ಸಿಡಿಸುವ ಮೂಲಕ ಸರಣಿ ಶತಕ ಆರಂಭಗೊಂಡಿತ್ತು. ಇದೀಗ ಏಷ್ಯಾಕಪ್ ನಲ್ಲಿ ಅದೇ ಮೈದಾನದಲ್ಲಿ ಕೊಹ್ಲಿ ಶತಕ ಸಿಡಿಸಿದ್ದು, ಈ ಮೈದಾನದಲ್ಲಿ ಇದು ಅವರ ಸತತ 4 ಶತಕವಾಗಿದೆ. ಆ ಮೂಲಕ ಕೊಹ್ಲಿ ಒಂದೇ ಮೈದಾನದಲ್ಲಿ ಸತತ 4 ಶತಕ ಸಿಡಿಸಿದ 2ನೇ ಆಟಗಾರ ಎನಿಸಿಕೊಂಡಿದ್ದಾರೆ. ವಿದೇಶದಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಕೀರ್ತಿಗೂ ಕೊಹ್ಲಿ ಭಾಜನರಾಗಿದ್ದಾರೆ. , : 10 : 649 : 4 : 129.8 128* 119 2012 131 96 2017 110 116 2017 122* 94 2023## # ../DNUQDBcfndಇದನ್ನೂ ಓದಿ: ಏಷ್ಯಾ ಕಪ್ 2023: ಕೊನೆಗೂ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ವಿರಾಟ್ ಕೊಹ್ಲಿ, ಏಕದಿನದಲ್ಲಿ ಬೃಹತ್ ವಿಶ್ವ ದಾಖಲೆಇದಕ್ಕೂ ಮೊದಲು ದಕ್ಷಿಣ ಆಫ್ರಿಕಾದ ಹಶಿಮ್ ಆಮ್ಲಾ ಈ ಸಾಧನೆ ಮಾಡಿದ್ದರು. ಆಮ್ಲಾ ಈ ಹಿಂದೆ ಸೆಂಚುರಿಯನ್‌ನ ಸೂಪರ್ ಸ್ಪೋರ್ಟ್ ಪಾರ್ಕ್‌ನಲ್ಲಿ ಸತತ 4 ಶತಕ ಸಿಡಿಸಿದ್ದಾರೆ. ವಿರಾಟ್ ಕೊಹ್ಲಿ ಈಗ ಏಷ್ಯಾಕಪ್‌ನಲ್ಲಿ ಶ್ರೀಲಂಕಾದ ಕ್ರಿಕೆಟ್ ದಂತಕಥೆ ಕುಮಾರ ಸಂಗಕ್ಕಾರ ಅವರ ನಾಲ್ಕು ಶತಕಗಳ ದಾಖಲೆಯನ್ನು ಸರಿಗಟ್ಟಿದ್ದು, ಕಾಂಟಿನೆಂಟಲ್ ಈವೆಂಟ್‌ನಲ್ಲಿ ಸನತ್ ಜಯಸೂರ್ಯ (6) ಮಾತ್ರ ಹೆಚ್ಚು ಟನ್‌ಗಳನ್ನು ಹೊಂದಿದ್ದಾರೆ.