ಏನಿದು ಕೇಂಬ್ರಿಡ್ಜ್ ಅನಲಿಟಿಕಾ ಹಗರಣ?.. ಫೇಸ್ ಬುಕ್ ಗೆ ಏಕೆ ಭಾರತ ಸರ್ಕಾರ ಕಠಿಣ ಕ್ರಮದ ಎಚ್ಚರಿಕೆ ನೀಡಿದೆ? ಫೇಸ್ ಬುಕ್ ಖಾತೆದಾರರ ಮಾಹಿತಿ ಸೋರಿಕೆ ಸಂಬಂಧ ಇಂದು ವಿಶ್ವಾದ್ಯಂತ ಕೇಂಬ್ರಿಡ್ಜ್ ಅನಲಿಟಿಕಾ ಸಂಸ್ಥೆ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ. ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಗೆಲುವಿನಲ್ಲಿ ಈ ಸಂಸ್ಥೆ ನಿರ್ಣಾಯಕ ಪಾತ್ರ ನಿರ್ವಹಿಸಿದೆ ಎಂದು ಹೇಳಲಾಗುತ್ತಿದೆ.