ಪುರುಷರಿಗೂ ಸ್ತನ ಕ್ಯಾನ್ಸರ್ ಬರಬಹುದು, ಜಾಗ್ರತೆ ಅತ್ಯಗತ್ಯ! ಪುರುಷರಿಗೂ ಸ್ತನ ಕ್ಯಾನ್ಸರ್ ಬರುತ್ತದೆ. ರಾಜ್ಯದಲ್ಲಿ ವಾರ್ಷಿಕವಾಗಿ ಒಟ್ಟಾರೆಯಾಗಿ ಶೇ. 2 ರಷ್ಟು ಪುರುಷರಲ್ಲಿ ಸ್ತನ ಕ್ಸಾನ್ಯರ್ ಕಾಣಿಸಿಕೊಳ್ಳುತ್ತಿದೆ ಎಂದು ಗಂಥಿಶಾಸ್ತ್ರಜ್ಞರು ಹೇಳುತ್ತಾರೆ. ಬೆಂಗಳೂರು: ಆಂಧ್ರಪ್ರದೇಶದಿಂದ ಬಂದು ಬೆಂಗಳೂರಿನಲ್ಲಿ ಸಾಪ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ 34 ವರ್ಷದ ಪ್ರಮಂತನ್ (ಹೆಸರು ಬದಲಾಯಿಸಲಾಗಿದೆ) ಅವರಿಗೆ ಇತ್ತೀಚಿಗೆ ಎದೆಯ ಎಡಭಾಗದಲ್ಲಿ ಊತ ಕಾಣಿಸಿಕೊಂಡಿದ್ದು, ವೈದ್ಯರ ಬಳಿಗೆ ಹೋದಾಗ ಅಚ್ಚರಿ ಕಾದಿತ್ತು.