ಮಟನ್ ಪೆಪ್ಪರ್ ಫ್ರೈ ರಂಜಾನ್ ಸ್ಪೆಷಲ್ ಮಟನ್ ಪೆಪ್ಪರ್ ಫ್ರೈ ಮಾಡುವ ವಿಧಾನ... ಬೇಕಾಗುವ ಪದಾರ್ಥಗಳು...ಮಟನ್- ಒಂದು ಕೇಜಿ (ಚಿಕ್ಕ ತುಂಡುಗಳಾಗಿಸಿದ್ದು)ಅಚ್ಚ ಖಾರದ ಮೆಣಸಿನಪುಡಿ- ಒಂದು ದೊಡ್ಡ ಚಮಚ (ಕಾಶ್ಮೀರಿ ಚಿಲ್ಲಿ ಆದರೆ ಒಂದೂವರೆ ಚಮಚ)ಗರಂ ಮಸಾಲಾ ಪುಡಿ-ಒಂದು ದೊಡ್ಡ ಚಮಚಕರಿಬೇವಿನ ಎಲೆಗಳು- ಸ್ವಲ್ಪಅರಿಶಿನ ಪುಡಿ- ಸ್ವಲ್ಪಹಸಿಮೆಣಸಿನ ಕಾಯಿ-ನಾಲ್ಕು (ಉದ್ದಕ್ಕೆ ಸೀಳಿದ್ದು)ಕಾಳುಮೆಣಸಿನ ಪುಡಿ- ಮೂರು ದೊಡ್ಡಚಮಚದನಿಯಾ ಪುಡಿ: ಒಂದು ದೊಡ್ಡ ಚಮಚಶುಂಠಿ-ಬೆಳ್ಳುಳ್ಳಿ ಪೇಸ್ಟ್: ಅರ್ಧ ದೊಡ್ಡ ಚಮಚಎಣ್ಣೆ - ಸ್ವಲ್ಪಉಪ್ಪು: ರುಚಿಗೆ ತಕ್ಕಷ್ಟುಮಾಡುವ ವಿಧಾನ...ಮಾಂಸದ ತುಂಡುಗಳನ್ನು ನೀರಿನಲ್ಲಿ ಚೆನ್ನಾಗಿ ತೊಳೆದು ನೀರೆಲ್ಲಾ ಹೊರಹೋಗುವಂತೆ ಬಸಿಯಿರಿ. ಇದಕ್ಕೆ ಅರಿಶಿನದ ಪುಡಿ ಹಚ್ಚಿ ಬದಿಗಿಡಿ.ಸುಮಾರು ಹದಿನೈದು ನಿಮಿಷದ ಬಳಿಕ ಪ್ರೆಶರ್ ಕುಕ್ಕರ್ ನಲ್ಲಿ ಕೊಂಚ ಎಣ್ಣೆ ಹಾಕಿ ಬಿಸಿಮಾಡಿ. ಬಿಸಿಯಾದ ಬಳಿಕ ಶುಂಠಿ ಬೆಳ್ಳುಳ್ಳಿ ಪೇಸ್ಟ್, ಅರಿಶಿನ ಪುಡಿ, ದನಿಯಾ ಪುಡಿ, ಖಾರದ ಪುಡಿ, ಉಪ್ಪು ಹಾಕಿ ಚಿಕ್ಕ ಉರಿಯಲ್ಲಿ ತಿರುವುತ್ತಾ ಹುರಿಯಿರಿ.ಕೊಂಚ ಕಂದು ಬಣ್ಣಕ್ಕೆ ತಿರುಗಿದ ಬಳಿಕ ಮಾಂಸದ ತುಂಡುಗಳನ್ನು ಹಾಕಿ ಕೆಲಕಾಲ ಹುರಿದು ಬಳಿಕ ಮುಚ್ಚಳ ಮುಚ್ಚಿ ಅತಿ ಕಡಿಮೆ ಉರಿಯಲ್ಲಿ ಸುಮಾರು ಹದಿನೈದು ನಿಮಿಷ ಬೇಯಲು ಬಿಡಿ.ಇನ್ನೊಂದು ಪಾತ್ರೆಯಲ್ಲಿ ಒಂದು ಚಮಚ ಎಣ್ಣೆ ಹಾಕಿ ಕರಿಬೇವಿನ ಎಲೆ, ಹಸಿಮೆಣಸಿನಕಾಯಿ ಹಾಕಿ ಕಂದು ಬಣ್ಣವಾಗುವವರೆಗೆ ಹುರಿಯಿರಿ.ಬಳಿಕ ಗರಂ ಮಸಾಲ ಪುಡಿ, ಕಾಳುಮೆಣಸಿನ ಪುಡಿ ಹಾಕಿ ಹುರಿಯಿರಿ. ನಂತರ ಪ್ರೆಶರ್ ಕುಕ್ಕರಿನಲ್ಲಿ ಬೇಯಿಸಿದ್ದ ಮಾಂಸದ ತುಂಡುಗಳನ್ನು ಇದಕ್ಕೆ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ.ಚಿಕ್ಕ ಉರಿಯಲ್ಲಿಯೇ ನಡು ನಡುವೆ ತಿರುವುತ್ತಾ ಮಾಂಸ ಬೇಯಲು ಬಿಡಿ. ಹತ್ತು ನಿಮಿಷದ ಬಳಿಕ ಉರಿಯನ್ನು ನಂದಿಸಿ. ಇದೀಗ ಕೊತ್ತಂಬರಿ ಸೊಪ್ಪಿನೊಂದಿಗೆ ಅಲಂಕರಿಸಿದರೆ ರುಚಿಕರವಾದ ಮಟನ್ ಪೆಪ್ಪರ್ ಫ್ರೈ ಸವಿಯಲು ಸಿದ್ಧ.