ಸ್ಮಾರ್ಟ್ ಫೋನ್ : ಅಮೆರಿಕ ಹಿಂದಿಕ್ಕಲಿದೆ ಭಾರತ ಸ್ಮಾರ್ಟ್ ಫೋನ್ ಕ್ಷೇತ್ರದಲ್ಲಿ ಮುಂದಿನ ಎರಡು ವರ್ಷಗಳಲ್ಲಿ ಭಾರತ ಅಮೆರಿಕವನ್ನು ಹಿಂದಿಕ್ಕಲಿದೆ ಎಂದು ಸಂಶೋಧನಾ... ನವದೆಹಲಿ: ಸ್ಮಾರ್ಟ್ ಫೋನ್ ಕ್ಷೇತ್ರದಲ್ಲಿ ಮುಂದಿನ ಎರಡು ವರ್ಷಗಳಲ್ಲಿ ಭಾರತ ಅಮೆರಿಕವನ್ನು ಹಿಂದಿಕ್ಕಲಿದೆ ಎಂದು ಸಂಶೋಧನಾ ಸಂಸ್ಥೆ ಐಡಿಸಿ ಹೇಳಿದೆ. ಪ್ರಸಕ್ತ ಸಾಲಿನ ಎರಡನೇ ತ್ರೈಮಾಸಿಕದಲ್ಲಿ ಭಾರತದಲ್ಲಿ ಸ್ಮಾರ್ಟ್ ಫೋನ್ ಖರೀದಿ ಪ್ರಮಾಣ ಶೇ.44ರಷ್ಟು ಏರಿಕೆ ಕಂಡಿದೆ. ಈ ಅವಧಿಯಲ್ಲಿ ಒಟ್ಟಾರೆ 2.65 ಕೋಟಿ ಸ್ಮಾರ್ಟ್ ಫೋನ್ ಗಳನ್ನು ಆಮದು ಮಾಡಿಕೊಳ್ಳಲಾಗಿದೆ. ಜನ ಹೆಚ್ಚು ಹೆಚ್ಚು ಸ್ಮಾರ್ಟ್ ಫೋನ್ ಗಳನ್ನು ಖರೀದಿಸುತ್ತಿರುವುದು ಮತ್ತು 4ಜಿ ಸೇವೆ ಪಡೆಯುವತ್ತ ಮುಂದಾಗಿರುವು ದರಿಂದ ಮುಂದಿನ ವರ್ಷಗಳಲ್ಲಿ ಈ ಬೆಳವಣಿಗೆ ಮತ್ತಷ್ಟು ವೇಗ ಪಡೆಯಲಿದೆ ಎಂದು ಐಡಿಸಿ ಹೇಳಿದೆ.