ಅತಿ ಭಾರದ ಜಿಸ್ಯಾಟ್ 11 ಉಪಗ್ರಹ ಉಡಾವಣೆಗೆ ಕ್ಷಣಗಣನೆ ಆರಂಭ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಮತ್ತೊಂದು ದಾಖಲೆ ಬರೆಯಲು ಸಜ್ಜಾಗಿದ್ದು, ದೇಶದ ಇತಿಹಾಸದಲ್ಲೇ ಅತ್ಯಂತ ಭಾರದ ಉಪಗ್ರಹ ಎಂದೇ ಕರೆಯಲಾಗುತ್ತಿರುವ ಜಿಸ್ಯಾಟ್ 11 ಉಪಗ್ರಹ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದೆ.