ದಾವಣಗೆರೆ: ಮಾಜಿ ಸಚಿವ ಬಿಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ! ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಿಕೆರೆಯ ಶಿವಮೊಗ್ಗ-ಹರಿಹರ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಕಾರು ನಿಲ್ಲಿಸಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ದಾವಣಗೆರೆ: ಮಾಜಿ ಸಚಿವ ಬಿ.ಸಿ ಪಾಟೀಲ್ ಅವರ ಅಳಿಯ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.ಮೃತರನ್ನು 43 ವರ್ಷದ ಕೆ.ಜಿ ಪ್ರತಾಪ್ ಕುಮಾರ್ ಎಂದು ಗುರುತಿಸಲಾಗಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಿಕೆರೆಯ ಶಿವಮೊಗ್ಗ-ಹರಿಹರ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಕಾರು ನಿಲ್ಲಿಸಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.ವಿಷ ಸೇವಿಸಿದ್ದ ಕೆ.ಜಿ ಪ್ರತಾಪ್ ಕುಮಾರ್ ಅವರನ್ನು ಸ್ಥಳೀಯರು ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.ಕೆಜಿ ಪ್ರತಾಪ್ ಕುಮಾರ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೆಜಿ ಪ್ರತಾಪ್ ಕುಮಾರ್ ಅವರು ಬಿ.ಸಿ ಪಾಟೀಲ್ ಹಿರಿಯ ಪುತ್ರಿ ಸೌಮ್ಯಾ ಅವರ ಪತಿ ಎಂದು ತಿಳಿದುಬಂದಿದೆ.