ಚಿಕನ್, ಫಿಶ್ ಕಬಾಬ್ ಗೂ ಕುತ್ತು: ಕೃತಕ ಬಣ್ಣ ಬಳಕೆಗೆ ಸರ್ಕಾರ ನಿಷೇಧ; ನಿಯಮ ಉಲ್ಲಂಘಿಸಿದರೆ ಜೀವಾವಧಿ ಶಿಕ್ಷೆ ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣ ಬಳಕೆಗೆ ಬ್ಯಾನ್ ಹೇರಿದ ಬೆನ್ನಲ್ಲೇ ಇದೀಗ ಕಬಾಬ್‌ಗೂ ಕೃತಕ ಬಣ್ಣ ಬಳಸದಂತೆ ರಾಜ್ಯ ಸರ್ಕಾರ ನಿಷೇಧ ಹೇರಿದೆ. ಬೆಂಗಳೂರು: ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣ ಬಳಕೆಗೆ ಬ್ಯಾನ್ ಹೇರಿದ ಬೆನ್ನಲ್ಲೇ ಇದೀಗ ಕಬಾಬ್‌ಗೂ ಕೃತಕ ಬಣ್ಣ ಬಳಸದಂತೆ ರಾಜ್ಯ ಸರ್ಕಾರ ನಿಷೇಧ ಹೇರಿದೆ. ಆಹಾರ ಸುರಕ್ಷತೆ ವಿಚಾರದಲ್ಲಿ ಜನರಲ್ಲಿ ಹೆಚ್ಚು ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.ಫಿಶ್ ಸೇರಿದಂತೆ ಚಿಕನ್ ಕಬಾಬ್ ಆಹಾರದಲ್ಲಿ ಕೃತಕ ಬಣ್ಣ ಬೆರಸುವುದನ್ನ ನಿಷೇಧಿಸಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ. ಕೆಲವು ಆಹಾರಗಳಲ್ಲಿ ಕೃತಕ ಬಣ್ಣದ ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದೆ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಗಳಲ್ಲಿ ಕೃತಕ ಬಣ್ಣಗಳ ಬಳಕೆಯನ್ನ ನಿಷೇಧಿಸಲಾಗಿತ್ತು.ಇದೇ ವೇಳೆ ಚಿಕನ್ ಕಬಾಬ್ ಗಳಲ್ಲೂ ಕೃತಕ ಬಣ್ಣಗಳ ಬೆರಸುವಿಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಪರೀಕ್ಷೆಗೊಳಪಡಿಸಿ ಕ್ರಮ ಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆಹಾರ ಸುರಕ್ಷತಾ ಇಲಾಖೆ ಆಯುಕ್ತರಿಗೆ ಸೂಚನೆ ನೀಡಿದ್ದರು. ಕಳಪೆ ಗುಣಮಟ್ಟದ ಆಹಾರ ಸೇವನೆ ಇತ್ತಿಚೆಗೆ ಜನರ ಆರೋಗ್ಯದ ಮೇಲೆ ತೀವ್ರ ಹಾನಿಯನ್ನುಂಟುಮಾಡುತ್ತಿದೆ. ಜನಸಾಮಾನ್ಯರ ಆರೋಗ್ಯದ ದೃಷ್ಟಿಯಿಂದ ಹಾನಿಕಾರಕ ಆಹಾರದ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಸಚಿವರ ಸೂಚನೆಯ ಮೇರೆಗೆ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‌ಗಳು ಗುಣಮಟ್ಟ ಪರೀಕ್ಷೆಗೆ ಒಳಪಡಿಸಲಾಗಿತ್ತು. ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಚಿಕನ್ ಕಬಾಬ್ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಚಿಕನ್ ಕಬಾಬ್, ಫಿಶ್ ಆಹಾರಗಳಲ್ಲಿ ಕೃತಕ ಬಣ್ಣ ಬೆರಸುವಿಕೆಯನ್ನ ನಿಷೇಧಿಸಿ ಆಹಾರ ಸುರಕ್ಷತಾ ಆಯುಕ್ತರು ಆದೇಶ ಹೊರಡಿಸಿದ್ದಾರೆ.ವೆಜ್/ಚಿಕನ್/ಫಿಶ್ ಕಬಾಬ್ ತಯಾರಿಕೆಯಲ್ಲಿ ಕೃತಕ ಬಣ್ಣಗಳ ಬಳಕೆ ಮಾಡಲಾಗುತ್ತಿರುವುದು ಪ್ರಯೋಗಾಲಯಗಳ ಮೂಲಕ ನಡೆಸಲಾದ ಪರೀಕ್ಷೆಯಿಂದ ದೃಢಪಟ್ಟಿದೆ. ಈ ಕೃತಕ ಬಣ್ಣಗಳು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವೆಜ್/ಚಿಕನ್/ಫಿಶ್ ಕಬಾಬ್ ತಯಾರಿಕೆ ವೇಳೆ ಕೃತಕ ಬಣ್ಣ ಬಳಕೆಯನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರಾಜ್ಯಾದ್ಯಂತ 39 ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ಲ್ಯಾಬ್‌ಗೆ ಕಳಿಸಿದಾಗ, ಅದರಲ್ಲಿ 8 ಕಬಾಬ್‌ನ ಮಾದರಿಗಳು ಕೃತಕ ಬಣ್ಣದಿಂದ (ಸನ್‌ಸೆಟ್ ಯೆಲ್ಲೋ – 7 ಮಾದರಿಗಳು ಹಾಗೂ ಸನ್‌ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್ ಹೊಂದಿರುವ ಮಾದರಿಗಳು ಕೂಡಿರುವುದರಿಂದ ಅಸುರಕ್ಷಿತ ಎಂದು ವರದಿಗಳಲ್ಲಿ ಕಂಡುಬಂದಿದೆ. ಹೀಗಾಗಿ ಯಾವುದೇ ಕೃತಕ ಬಣ್ಣಗಳನ್ನು ಉಪಯೋಗಿಸುವಂತಿರುವುದಿಲ್ಲ ಎಂದು ಸೂಚಿಸಿದೆ.ವೆಜ್/ಚಿಕನ್/ಫಿಶ್ ಕಬಾಬ್ ತಯಾರಿಕೆಯಲ್ಲಿ ಕೃತಕ ಬಣ್ಣಗಳ ಬಳಕೆ ಮಾಡಲಾಗುತ್ತಿರುವುದು ಪ್ರಯೋಗಾಲಯಗಳ ಮೂಲಕ ನಡೆಸಲಾದ ಪರೀಕ್ಷೆಯಿಂದ ದೃಢಪಟ್ಟಿದೆ. ಈ ಕೃತಕ ಬಣ್ಣಗಳು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವೆಜ್/ಚಿಕನ್/ಫಿಶ್ ಕಬಾಬ್ ತಯಾರಿಕೆ ವೇಳೆ ಕೃತಕ ಬಣ್ಣ ಬಳಕೆಯನ್ನು ನಿಷೇಧಿಸಿ ಆದೇಶ… ../lXeT58iPYrThe ( ) , 2011 ರ‌ ಅನ್ವಯ ಯಾವುದೇ ಕೃತಕ ಬಣ್ಣಗಳನ್ನು ಉಪಯೋಗಿಸುವಂತಿರುವುದಿಲ್ಲ. ಕೃತಕ ಬಣ್ಣಗಳು ಬಳಕೆದಾರರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟುಮಾಡಬಹುದಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಕಬಾಬ್‌ನ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದಕ್ಕೆ ಅವಕಾಶವಿಲ್ಲ ಎಂದು ಆದೇಶದಲ್ಲಿ‌ ತಿಳಿಸಲಾಗಿದೆ. ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಅವಧಿಯವರೆಗೆ ಜೈಲು ಶಿಕ್ಷೆಯನ್ನು ಮತ್ತು ರೂ.10.00 ಲಕ್ಷಗಳವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.‌