ಅಮಿತ್‌ ಶಾ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ: ರಾಜ್ಯದ 5 ನಗರಗಳಲ್ಲಿ 'ಸೇಫ್‌ ಸಿಟಿ ಯೋಜನೆ' ಜಾರಿಗೆ ಒತ್ತಾಯ ಪ್ರಸಕ್ತ ಸಾಲಿನಲ್ಲಿ ಬಾಡಿಗೆ ಕಟ್ಟಡದಲ್ಲಿರುವ/ ಶಿಥಿಲಾವಸ್ಥೆಯಲ್ಲಿರುವ 100 ಪೊಲೀಸ್‌ ಠಾಣೆಗಳಿಗೆ ಹೊಸ ಕಟ್ಟಡವನ್ನು ತಲಾ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ 300 ಕೋಟಿ ರೂ. ಅಗತ್ಯವಿದೆ. ಇದಕ್ಕೆ ನೆರವು ಒದಗಿಸುವಂತೆಯೂ ಗೃಹ ಸಚಿವ ಅಮಿತ್‌ ಶಾ ಅವರನ್ನು ಕೋರಿದರು. ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿದ್ದು, ಭೇಟಿ ವೇಳೆ ರಾಜ್ಯದ ಐದು ನಗರಗಳಿಗೆ ಸೇಫ್ ಸಿಟಿ ಯೋಜನೆಗಳನ್ನು ಮಂಜೂರು ಮಾಡುವಂತೆ ಒತ್ತಾಯಿಸಿದರು.ನಿರ್ಭಯಾ ನಿಧಿಯಡಿ ಬೆಂಗಳೂರು ನಗರದಂತೆಯೇ ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ ಸೇಫ್‌ ಸಿಟಿ ಯೋಜನೆಯನ್ನು ತಲಾ ರೂ.200 ಕೋಟಿ ರೂ. ಗಳಂತೆ ಒಟ್ಟು 1000 ಕೋಟಿ ವೆಚ್ಚದಲ್ಲಿ ಅನುಷ್ಠಾನಕ್ಕೆ ಅನುಮೋದನೆ ನೀಡಬೇಕು ಎಂದು ಮನವಿ ಮಾಡಿದರು. @ @ . , ' . … ../IBPhQOnQKMಹೈಕೋರ್ಟಿನ ಆದೇಶದಂತೆ ಬಂಧಿಸುವ ಅಧಿಕಾರ ಹೊಂದಿರುವ ಸಿಬ್ಬಂದಿಗೆ ಕಡ್ಡಾಯವಾಗಿರುವುದರಿಂದ ರಾಜ್ಯದಲ್ಲಿ ಇನ್ನೂ 175 ಕೋಟಿ ರೂ. ವೆಚ್ಚದಲ್ಲಿ 58,546 ಖರೀದಿಸುವ ಅಗತ್ಯವಿದ್ದು, 100 ಕೋಟಿ ರೂ. ನೆರವು ನೀಡುವಂತೆ ಮನವಿ ಸಲ್ಲಿಸಿದರು.ಪ್ರಸಕ್ತ ಸಾಲಿನಲ್ಲಿ ಬಾಡಿಗೆ ಕಟ್ಟಡದಲ್ಲಿರುವ/ ಶಿಥಿಲಾವಸ್ಥೆಯಲ್ಲಿರುವ 100 ಪೊಲೀಸ್‌ ಠಾಣೆಗಳಿಗೆ ಹೊಸ ಕಟ್ಟಡವನ್ನು ತಲಾ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ 300 ಕೋಟಿ ರೂ. ಅಗತ್ಯವಿದೆ. ಇದಕ್ಕೆ ನೆರವು ಒದಗಿಸುವಂತೆಯೂ ಗೃಹ ಸಚಿವ ಅಮಿತ್‌ ಶಾ ಅವರನ್ನು ಕೋರಿದರು.ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ಅಗತ್ಯವಿರುವ ನೆರವಿನ ಕುರಿತು ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು.ಭಾರತ ಸರ್ಕಾರ 80 ಕೋಟಿ ರೂ. ವೆಚ್ಚದಲ್ಲಿ ಇಂಡಿಯಾ ರಿಸರ್ವ್ ಬೆಟಾಲಿಯನ್ ಸ್ಥಾಪನೆಗೆ ಅನುಮೋದನೆ ನೀಡಿದ್ದು, ಹೆಚ್ಚುವರಿಯಾಗಿ ಬಳ್ಳಾರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಎರಡು ಬೆಟಾಲಿಯನ್‌ ಸ್ಥಾಪನೆಗೆ ಅನುಮೋದನೆ ನೀಡುವಂತೆ ಕೋರಿದರು.