ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್ ರೇವಣ್ಣ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್ ರೇವಣ್ಣ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.ಲೈಂಗಿಕ ದೌರ್ಜನ್ಯ ಹಗರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಬಂಧನವಾಗಿ ವಿಚಾರಣೆ ನಡೆಯುತ್ತಿರುವ ನಡುವೆಯೇ ಎಚ್‌.ಡಿ.ರೇವಣ್ಣ ಕುಟುಂಬದ ಮತ್ತೊಬ್ಬರ ಬಂಧನವಾಗಿದ್ದು, ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಜ್ವಲ್‌ ಸಹೋದರ, ವಿಧಾನ ಪರಿಷತ್ ಸದಸ್ಯ ಸೂರಜ್‌ ರೇವಣ್ಣ ಅವರನ್ನು ಸೆನ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ.ಇದೀಗ ಅವರನ್ನು ಪೊಲೀಸರು 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಧೀಶರು ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.ಸೂರಜ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಕೇಸ್‌ ಅನ್ನು ಸಿಐಡಿ ತನಿಖೆ ವಹಿಸಿದ ಮೇಲೆ ಆರೋಪಿಯನ್ನು ಹಾಸನದಿಂದ ಬೆಂಗಳೂರಿಗೆ ಕರೆತರಲಾಗಿತ್ತು. ಬೆಂಗಳೂರಲ್ಲಿ ಸೂರಜ್‌ ರೇವಣ್ಣ ಅವರಿಗೆ ಮೆಡಿಕಲ್ ಚೆಕಪ್ ಮಾಡಿಸಿ, ಕೋರಮಂಗಲದ ಎನ್‌ಜಿವಿಯಲ್ಲಿ ಇರುವ 42 ಎಸಿಎಂಎಂ ‌ನ್ಯಾಯಧೀಶ ಶಿವಕುಮಾರ್ ಅವರ ನಿವಾಸಕ್ಕೆ ಹಾಜರುಪಡಿಸಲಾಗಿತ್ತು.ನಿನ್ನೆ ರಾತ್ರಿ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರವಾಗಿ ಹಾಸನದ ಸೆನ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು. ಪ್ರಕರಣದ ಸಂಬಂಧ ಸೂರಜ್‌ ರೇವಣ್ಣ ಅವರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳ ಪಡಿಸಿದರು.ಶನಿವಾರ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಹಿನ್ನೆಲೆಯಲ್ಲಿ ತಡರಾತ್ರಿವರೆಗೂ ವಿಚಾರಣೆ ನಡೆಯಿತು. ಭಾನುವಾರ ಮುಂಜಾನೆ 4 ಗಂಟೆವರೆಗೂ ಸೂರಜ್‌ನನ್ನು ತನಿಖಾಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. , 14 ... ../U9lI4FwFW3ಸಿಐಡಿಗೆ ಪ್ರಕರಣಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸೆನ್ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ. ಈ ವಿಚಾರ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು.