ಕಾಮಧೇನುವನ್ನೇ ನಂಬಿದ್ದ ರೈತನ ಕರುಳಿಗೆ ಕೊಳ್ಳಿ: ಕೊಬ್ಬಿರುವ ಕಾಂಗ್ರೆಸ್ ಸರ್ಕಾರದಿಂದ ಅನ್ನದಾತನ ಮೇಲೆ ಕಾಕದೃಷ್ಟಿ! ರೈತನ ಜೀವನಾಧಾರವಾಗಿರುವ ಹಾಲಿನ ಮೇಲೆ ಕಾಂಗ್ರೆಸ್ ಆಡಳಿತದ ಕಾಕದೃಷ್ಟಿ ಬಿದ್ದಿದೆ. ಪರಿಣಾಮ ಹಾಲಿನ ಖರೀದಿ ದರಕ್ಕೆ ಕತ್ತರಿ ಪ್ರಯೋಗವಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಬೆಂಗಳೂರು: ರಾಜ್ಯ ಸರ್ಕಾರ ಹಾಲಿನ ಖರೀದಿ ದರದಲ್ಲಿ 1.50 ರೂ. ಕಡಿತ ಮಾಡಿದೆ ಎಂದು ಮಾಜಿ ಸಿಎಂ, ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಹೆಚ್‌ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು,ಅಧಿಕಾರ ದರ್ಪದ ಅಮಲಿನಿಂದ ಕೊಬ್ಬಿರುವ ರಾಜ್ಯ ರಾಜ್ಯ ಕಾಂಗ್ರೆಸ್ ಸರಕಾರ ಅನ್ನದಾತನ ಮೇಲೆ ಬರೆಯ ಬರೆ ಎಳೆಯುತ್ತಿದೆ. ರೈತನ ಜೀವನಾಧಾರವಾಗಿರುವ ಹಾಲಿನ ಮೇಲೆ ಕಾಂಗ್ರೆಸ್ ಆಡಳಿತದ ಕಾಕದೃಷ್ಟಿ ಬಿದ್ದಿದೆ. ಪರಿಣಾಮ ಹಾಲಿನ ಖರೀದಿ ದರಕ್ಕೆ ಕತ್ತರಿ ಪ್ರಯೋಗವಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಲು ಒಕ್ಕೂಟಗಳು ಏಕಪಕ್ಷೀಯವಾಗಿ ಹಾಲಿನ ಖರೀದಿ ದರದಲ್ಲಿ 1.50 ರು. ಕಡಿತ ಮಾಡಿವೆ. (ಹೊಸ ಖರೀದಿ ದರ ₹30.50 ರಿಂದ ₹29ಕ್ಕೆ ಕುಸಿದಿದೆ). ಕಾಮಧೇನುವನ್ನೇ ನಂಬಿದ್ದ ರೈತನ ಕರುಳಿಗೆ ಕೊಳ್ಳಿ ಬಿದ್ದಿದೆ. ನಮ್ಮದು ರೈತಪರ ಸರಕಾರ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತ ಗಮನ ಹರಿಸಬೇಕು. ಅವರಿಗೆ ಅಷ್ಟು ಸಮಯ ಇದೆ ಎಂದು ನಾನಾದರೂ ಪರಿಭಾವಿಸುತ್ತೇನೆ ಎಂದು ಹೇಳಿದ್ದಾರೆ.ಅಧಿಕಾರ ದರ್ಪದ ಅಮಲಿನಿಂದ ಕೊಬ್ಬಿರುವ ರಾಜ್ಯ @ ಸರಕಾರ ಅನ್ನದಾತನ ಮೇಲೆ ಬರೆಯ ಬರೆ ಎಳೆಯುತ್ತಿದೆ. ರೈತನ ಜೀವನಾಧಾರವಾಗಿರುವ ಹಾಲಿನ ಮೇಲೆ ಕಾಂಗ್ರೆಸ್ ಆಡಳಿತದ ಕಾಕದೃಷ್ಟಿ ಬಿದ್ದಿದೆ. ಪರಿಣಾಮ; ಹಾಲಿನ ಖರೀದಿ ದರಕ್ಕೆ ಕತ್ತರಿ ಪ್ರಯೋಗವಾಗಿದೆ. ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಲು ಒಕ್ಕೂಟಗಳು ಏಕಪಕ್ಷೀಯವಾಗಿ ಹಾಲಿನ…