ಪೋಕ್ಸೋ ಪ್ರಕರಣ: ಕೇಸು ರದ್ದು ಕೋರಿ ಮಾಜಿ ಸಿಎಂ ಯಡಿಯೂರಪ್ಪ ಹೈಕೋರ್ಟ್ ಮೊರೆ ತಮ್ಮ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣದ ( ) ರದ್ದು ಕೋರಿ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ( ) ಬುಧವಾರ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣದ ( ) ರದ್ದು ಕೋರಿ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ( ) ಬುಧವಾರ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.ತಾವು ಯಾವುದೇ ಕಾನೂನುಬಾಹಿರ ಕೃತ್ಯ ಎಸಗಿಲ್ಲ. ಫಿರ್ಯಾದಿ ಮಹಿಳೆಗೆ ದೂರು ನೀಡುವುದೇ ಹವ್ಯಾಸವಾಗಿತ್ತು. ಎಫ್ಐಆರ್ ದಾಖಲಾದ ನಂತರ ವಿಚಾರಣೆಗೆ ಹಾಜರಾಗಿದ್ದೆ. ಏಪ್ರಿಲ್ 12ರಂದು ಪೊಲೀಸರ ವಿಚಾರಣೆಗೆ ಹಾಜರಾಗಿದ್ದೆ. ಪೊಲೀಸರು ಹೇಳಿಕೆ ದಾಖಲಿಸಿಕೊಳ್ಳದೇ ಧ್ವನಿ ಮಾದರಿ ಸಂಗ್ರಹಿಸಿದ್ದರು ಎಂದು ಯಡಿಯೂರಪ್ಪ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.ತಮ್ಮ ವಿರುದ್ಧದ ದೂರಿನಲ್ಲಿ ಯಾವುದೇ ಸತ್ಯಾಂಶಗಳಲ್ಲಿದಿರುವುದರಿಂದ ರದ್ದುಪಡಿಸಬೇಕು ಎಂದು ಅವರು ಹೈಕೋರ್ಟ್ಗೆ ಮನವಿ ಮಾಡಿದ್ದಾರೆ. ಪ್ರಕರಣ ಸಂಬಂಧ ಇಂದು ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ಬಂದಿತ್ತು.ಏನಿದು ಪ್ರಕರಣ?: ಸಹಾಯ ಕೋರಿ ಮಾಜಿ ಸಿಎಂ ಯಡಿಯೂರಪ್ಪನವರ ನಿವಾಸಕ್ಕೆ ಹೋಗಿದ್ದ ವೇಳೆ ತಮ್ಮ ಪುತ್ರಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದರು ಎಂದು ಮಹಿಳೆಯೊಬ್ಬರು ಕಳೆದ ಲೋಕಸಭೆ ಚುನಾವಣೆಗೆ ಮೊದಲು ಬಿಎಸ್ ಯಡಿಯೂರಪ್ಪನವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸು ದಾಖಲಿಸಿದ್ದರು.ದೂರು ನೀಡಿದ್ದ ಮಹಿಳೆ ಇತ್ತೀಚೆಗೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಕಳೆದ ಕೆಲವು ವರ್ಷಗಳಿಂದ ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದ ಅವರು, ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಮೇ 27ರಂದು ಮೃತಪಟ್ಟಿದ್ದರು.