, ಕ್ರಮಕ್ಕೆ ಖಂಡನೆ: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ ಇಡಿ ಅಧಿಕಾರಿಗಳು ಕೇಂದ್ರ ಬಿಜೆಪಿ ಸರ್ಕಾರದ ಕೈಗೊಂಬೆಗಳಾಗಿದ್ದಾರೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ನಾಗೇಂದ್ರ ಸೇರಿದಂತೆ ಪ್ರಮುಖರ ಹೆಸರು ಹೇಳುವಂತೆ ಇಡಿ ಅಧಿಕಾರಿಗಳು ನಿಗಮದ ಹೆಚ್ಚುವರಿ ನಿರ್ದೇಶಕ ಕಲ್ಲೇಶಪ್ಪ ಎಂಬುವವರಿಗೆ ಕಿರುಕುಳ ನೀಡುತ್ತಿದ್ದಾರೆ. ಬೆಂಗಳೂರು: ಇಡಿ ಅಧಿಕಾರಿಗಳ ವಿರುದ್ಧ ಕಿರುಕುಳ ಆರೋಪ ಮಾಡಿರುವ ಕಾಂಗ್ರೆಸ್, ಇಡಿ ಅಧಿಕಾರಿಗಳ ಬಂಧಿಸಿವಂತೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ, ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಬೈರತಿ ಸುರೇಶ್, ಎಂಬಿ.ಪಾಟೀಲ್, ಕೆ.ಹೆಚ್.ಮುನಿಯಪ್ಪ, ರಾಮಲಿಂಗಾರೆಡ್ಡಿ ಸೇರಿದಂತೆ ಕಾಂಗೆಸ್ ಸಚಿವರು, ಶಾಸಕರು ಧರಣಿ ನಡೆಸಿದ್ದು, ಇಡಿ, ಸಿಬಿಐ ವಿರುದ್ಧ ಧಿಕ್ಕಾರ ಕೂಗಿದ್ದಾರೆ.# | . ../Wm5IdBodwaಇಡಿ ಅಧಿಕಾರಿಗಳು ಕೇಂದ್ರ ಬಿಜೆಪಿ ಸರ್ಕಾರದ ಕೈಗೊಂಬೆಗಳಾಗಿದ್ದಾರೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ನಾಗೇಂದ್ರ ಸೇರಿದಂತೆ ಪ್ರಮುಖರ ಹೆಸರು ಹೇಳುವಂತೆ ಇಡಿ ಅಧಿಕಾರಿಗಳು ನಿಗಮದ ಹೆಚ್ಚುವರಿ ನಿರ್ದೇಶಕ ಕಲ್ಲೇಶಪ್ಪ ಎಂಬುವವರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಇಡಿ ಅಧಿಕರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಿರುಕುಳ ನೀಡುತ್ತಿರುವ ಇಡಿ ಅಧಿಕಾರಿಗಳನ್ನು ಬಂಧಿಸುವಂತೆ ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ , ನಾಗೇಂದ್ರ ಅವರ ಹೆಸರೇಳುವಂತೆ ನಿಗಮದ ಹಿಂದಿನ ವ್ಯವಸ್ಥಾಪಕರಾದ ನಿರ್ದೇಶಕರಾದ ಕಲ್ಲೇಶಪ್ಪ ಅವರಿಗೆ ಕಿರುಕುಳ ನೀಡಿ ಒತ್ತಡ ಹೇರಿರುವ ಜಾರಿ ನಿರ್ದೇಶನಾಲಯದ ಆಧಿಕಾರಿಗಳ ವರ್ತನೆ ಖಂಡಿಸಿ ನಮ್ಮ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಮುಂಭಾಗ ಮುಖ್ಯಮಂತ್ರಿಗಳಾದ… ../L0WVdz4YfD