40 ಪರ್ಸೆಂಟ್ ಕಮಿಷನ್ ಆರೋಪ: ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ರಿಲೀಫ್! ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗೆ ರಿಲೀಫ್ ಸಿಕ್ಕಿದೆ. ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗೆ ರಿಲೀಫ್ ಸಿಕ್ಕಿದೆ.2023ರ ರಾಜ್ಯ ವಿಧಾನಸಭೆ ಚುನಾವಣೆ ವೇಳೆ ಅಂದಿನ ಬಿಜೆಪಿ ಸರ್ಕಾರ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಸಂಬಂಧ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೇಶವ ಪ್ರಸಾದ್ ಅವರು ಕೆಪಿಸಿಸಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಪ್ರರಕಣ ದಾಖಲಿಸಿದ್ದರು. ಈ ಪ್ರಕರಣದ 4ನೇ ಆರೋಪಿ ರಾಹುಲ್ ಗಾಂಧಿ ಇಂದು ವಿಚಾರಣೆಗೆ ಹಾಜರಾಗದ ಹಿನ್ನೆಲೆ ಜಾಮೀನು ರಹಿತ ವಾರಂಟ್ ಜಾರಿ ಮಾಡುವಂತೆ ದೂರುದಾರರ ಪರ ವಕೀಲ ಮನವಿ ಮಾಡಿದ್ದರು.ಆದರೆ, ರಾಹುಲ್ ಗಾಂಧಿ ವಿರುದ್ಧ ವಾರಂಟ್‌ ಹೊರಡಿಸದೆ ಜೂನ್ 7ರಂದು ಖುದ್ದು ಹಾಜರಾಗಲು 42ನೇ ಎಸಿಎಂಎಂ ಕೋರ್ಟ್‌ ಸೂಚನೆ ನೀಡಿದೆ. ಸಿಆರ್‌ಪಿಸಿ 205 ಅಡಿಯಲ್ಲಿ ಸಲ್ಲಿಸಿದ್ದ ಅರ್ಜಿ ಮಾನ್ಯ ಮಾಡಲಾಗಿದ್ದು, ಜೂನ್ 7ರಂದು ಖುದ್ದು ಹಾಜರಾಗಲು ರಾಹುಲ್‌ ಗಾಂಧಿಗೆ ಸೂಚನೆ ನೀಡಲಾಗಿದೆ.ಇದೇ ಪ್ರಕರಣದಲ್ಲಿ 42ನೇ ಎಸಿಎಂಎಂ ಕೋರ್ಟ್‌ ಮುಂದೆ ಇಂದು ಹಾಜರಾದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೆ ಶರತ್ತುಬದ್ಧ ಜಾಮೀನು ನೀಡಲಾಗಿದೆ.