ಹಾಲಿನ ದರ ಹೆಚ್ಚಳ ಮಾಡಿಲ್ಲ: ಸಾರ್ವಜನಿಕರ ಆಕ್ರೋಶಕ್ಕೆ ನೀಡಿದ ಸಿಎಂ ಸಿದ್ದರಾಮಯ್ಯ ಸಮರ್ಥನೆ! ಹೆಚ್ಚುವರಿ ಹಾಲಿಗೆ 2 ರೂಪಾಯಿ ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಃ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರು: ನಂದಿನಿ ಹಾಲಿನ ದರ ಏರಿಕೆಯಾಗುತ್ತಿದ್ದಂತೆ ಪ್ರತಿಪಕ್ಷಗಳು ಹಾಗೂ ಸಾಮಾನ್ಯ ನಾಗರಿಕರಿಂದ ರಾಜ್ಯಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಗ್ಯಾರಂಟಿ ಭಾಗ್ಯಗಳನ್ನು ಒಂದೆಡೆ ಕೊಡುತ್ತಿದ್ದೇವೆ ಎಂದು ಹೇಳುತ್ತಿರುವ ಸರ್ಕಾರ ಇನ್ನೊಂದೆಡೆ ವಿದ್ಯುತ್, ಬಸ್ಸಿನ ದರ, ಆಸ್ತಿ ಮುದ್ರಾಂಕ ಶುಲ್ಕ ನಂತರ ಇದೀಗ ಹಾಲಿನ ದರ ಹೆಚ್ಚಿಸಿ ಸಾಮಾನ್ಯ ಜನರಿಗೆ ಬರೆ ಎಳೆದಿದೆ.ಕರ್ನಾಟಕದಲ್ಲಿ ಹಾಲಿನ ಉತ್ಪಾದನೆ ಹೆಚ್ಚಾಗಿದ್ದರಿಂದ ನಂದಿನಿ ಹಾಲಿನ ಪ್ಯಾಕೆಟ್‌ಗೆ ತಲಾ 50 ಮಿ.ಲೀ. ಹಾಲು ಹೆಚ್ಚಳ ಮಾಡಲಾಗಿದೆ. ಇದಕ್ಕೆ ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ, ಹೆಚ್ಚುವರಿ ಹಾಲಿಗೆ 2 ರೂಪಾಯಿ ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಃ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಹಾಲಿನ ದರ ಏರಿಕೆ ಬೆನ್ನಲ್ಲೇ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರಕಟನೆ ಮೂಲಕ ಸ್ಪಷ್ಟನೆ ನೀಡಿದ್ದಾರೆ.ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?: ಹೆಚ್ಚುವರಿ ಹಾಲಿಗೆ 2 ರೂ ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಃ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ. ಅರ್ಧ ಲೀ. ಹಾಲಿನ ಪ್ಯಾಕೇಟ್‌ ನಲ್ಲಿ ಮುಂದೆ 550 ಹಾಲು ಹಾಗೂ ಒಂದು ಲೀಟರ್‌ ಪ್ಯಾಕೇಟ್‌ ನಲ್ಲಿ 1,050 ಹಾಲು ಸಿಗಲಿದೆ. ಹಾಲು ಸಂಗ್ರಹಣಾ ಕೇಂದ್ರಗಳಲ್ಲಿ ಯಾವುದೇ ಕಾರಣಕ್ಕೂ ರೈತರು ಹೆಚ್ಚುವರಿಯಾಗಿ ತರುತ್ತಿರುವ ಹಾಲನ್ನು ನಿರಾಕರಿಸಬಾರದು ಎಂಬ ಸದುದ್ದೇಶದಿಂದ ಕೆಎಂಎಫ್‌ ಸಂಸ್ಥೆ ಪ್ಯಾಕೆಟ್‌ ಗಳಲ್ಲಿ ಹಾಲಿನ ಪ್ರಮಾಣವನ್ನು ಹೆಚ್ಚಳ ಮಾಡುವ ತೀರ್ಮಾನ ಮಾಡಿದೆ.ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಕರ್ನಾಟಕದಲ್ಲಿ ಈ ಬಾರಿ ಹಾಲಿನ ಉತ್ಪಾದನೆ ಶೇಕಡಾ 15 ಹೆಚ್ಚಳವಾಗಿದೆ. ಹಿಂದಿನ ವರ್ಷಗಳಲ್ಲಿ ಈ ವೇಳೆಗೆ ನಿತ್ಯ ಸರಾಸರಿ 90 ಲಕ್ಷ ಲೀಟರ್‌ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣ ಈ ಬಾರಿ ಸರಾಸರಿ 99 ಲಕ್ಷ ಲೀಟರ್‌ ಗೆ ಏರಿಕೆಯಾಗಿದೆ. ಹೀಗೆ ಹೆಚ್ಚುವರಿಯಾಗಿ ಉತ್ಪಾದನೆಯಾಗುವ ಹಾಲನ್ನು ರೈತರಿಂದ ಖರೀದಿ ಮಾಡಬೇಕು. ಯಾವುದೇ ಕಾರಣಕ್ಕೂ ಅವರಿಂದ ಹಾಲು ಪಡೆಯಲು ನಿರಾಕರಿಸಬಾರದು ಎಂಬ ಸದುದ್ದೇಶದಿಂದ ಒಂದು ಲೀಟರ್‌ ಹಾಲಿನ ಪ್ಯಾಕೇಟಿಗೆ ಹೆಚ್ಚುವರಿಯಾಗಿ 50 ಮಿ.ಲೀ ಹಾಲನ್ನು ಸೇರಿಸಿ ಈ ಹೆಚ್ಚುವರಿ ಹಾಲಿನ ಬೆಲೆ 2 ರೂಪಾಯಿಯನ್ನು ಮಾತ್ರ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆ. ಹಾಲಿನ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗಿರುವುದಿಲ್ಲ ಎಂದು ತಿಳಿಸಿದ್ದಾರೆ.ನಮ್ಮ ಸರ್ಕಾರ ಹಾಲಿನ ದರವನ್ನು ಹೆಚ್ಚಳ ಮಾಡಿಲ್ಲ. ಒಂದು ಲೀಟರ್ ಪ್ಯಾಕೇಟಿನಲ್ಲಿ ಇನ್ನುಮುಂದೆ 1,050 ಮಿಲೀ, ಅರ್ಧ ಲೀಟರ್ ಪ್ಯಾಕೇಟಿನಲ್ಲಿ 550 ಮಿಲೀ ಹಾಲು ದೊರೆಯಲಿದ್ದು, ಈ 50 ಮಿಲೀ ಹೆಚ್ಚುವರಿ ಹಾಲಿಗೆ ಗ್ರಾಹಕರಿಂದ ರೂ.2 ಸಂಗ್ರಹಿಸಲಾಗುತ್ತದೆ. ಹೀಗಾಗಿ ಲೀಟರ್ ಪ್ಯಾಕೇಟ್ ರೂ.44, ಅರ್ಧ ಲೀಟರ್ ಪ್ಯಾಕೇಟ ರೂ.24ಕ್ಕೆ ಹೆಚ್ಚು ಹಾಲಿನ ಜೊತೆ… ../77ti6wjxBaಈ ವರೆಗೆ 1,000 ಮಿ.ಲೀ ಹಾಲಿಗೆ ರೂ.42 ಹಾಗೂ 500 ಮಿ.ಲೀ ಹಾಲಿಗೆ ರೂ.22 ದರವನ್ನು ನಿಗದಿಪಡಿಸಲಾಗಿತ್ತು ಇನ್ನು ಮುಂದೆ 1,050 ಮಿ.ಲೀ ಹಾಗೂ 550 ಮಿ.ಲೀ ಹಾಲಿನ ಪ್ಯಾಕೇಟ್‌ ಗಳನ್ನು ಮಾರಾಟ ಮಾಡಲಾಗುತ್ತಿದ್ದು ಅದಕ್ಕೆ ಕ್ರಮವಾಗಿ ರೂ.44 ಹಾಗೂ ರೂ.24 ದರ ನಿಗದಿಪಡಿಸಲಾಗುತ್ತದೆ. ಇದು ನಾಡಿನ ಲಕ್ಷಾಂತರ ಹೈನುಗಾರರ ಹಿತದೃಷ್ಟಿಯಿಂದ ಕೆ.ಎಂ.ಎಫ್‌ ಸಂಸ್ಥೆಯು ತೆಗೆದುಕೊಂಡ ನಿರ್ಣಯವಾಗಿದ್ದು, ಹೆಚ್ಚುವರಿಯಾಗಿ ಉದ್ಪಾದನೆಯಾಗುತ್ತಿರುವ ಹಾಲನ್ನು ಗ್ರಾಹಕರಿಗೆ ನೇರವಾಗಿ ತಲುಪಿಸುವ ಸದುದ್ದೇಶವನ್ನು ಹೊಂದಿದೆ ಎಂದು ತಿಳಿಸಿದ್ದಾರೆ.ಈ ಹಿಂದೆ ಹಾಲಿನ ಬೆಲೆಯಲ್ಲಿ ರೂ.3 ಹೆಚ್ಚಳ ಮಾಡಿ ಆ ಹೆಚ್ಚುವರಿ ಹಣವನ್ನು ರೈತರಿಗೆ ನೇರವಾಗಿ ವರ್ಗಾಯಿಸುವ ಪ್ರೋತ್ಸಾಹದಾಯಕ ಕ್ರಮ ಕೈಗೊಂಡಿದ್ದರಿಂದ ಹೈನೋದ್ಯಮ ಹಿಂದಿಗಿಂತ ಲಾಭ ತಂದುಕೊಡುವ ಉದ್ಯೋಗವಾಯಿತು ಜೊತೆಗೆ ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ಜಾನುವಾರುಗಳಿಗೆ ಹಸಿರು ಮೇವು ಲಭ್ಯವಾಗುತ್ತಿದೆ.ಈ ಎರಡು ಕಾರಣಗಳಿಂದಾಗಿ ರಾಜ್ಯದಲ್ಲಿ ಹಾಲಿನ ಉತ್ಪಾದನೆ ಇಂದು ನಿತ್ಯ ಸರಿಸುಮಾರು 1 ಕೋಟಿ ಲೀಟರ್‌ ತಲುಪುವ ಹಂತಕ್ಕೆ ಬಂದಿದೆ. ಹೀಗೆ ಹೆಚ್ಚುವರಿಯಾಗಿ ಉತ್ಪಾದನೆಯಾಗುತ್ತಿರುವ ಹಾಲನ್ನು ರೈತರಿಂದ ಖರೀದಿಸಿ ಗ್ರಾಹಕರಿಗೂ ಹೊರೆಯಾಗದ ರೀತಿಯಲ್ಲಿ ಮಾರಾಟ ಮಾಡುವ ಸಲುವಾಗಿ ಕೆ.ಎಂ.ಎಫ್‌ ಸಂಸ್ಥೆ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದ್ದಾರೆ.