ಸಾಲು ಸಾಲು ಹಬ್ಬ: ರಾಜ್ಯದ ವಿವಿಧ ಭಾಗಗಳಿಗೆ ನೈರುತ್ಯ ರೈಲ್ವೆ ವಿಶೇಷ ರೈಲುಗಳ ವ್ಯವಸ್ಥೆ ಗಣೇಶ ಚತುರ್ಥಿ, ದೀಪಾವಳಿ ಮತ್ತು ದಸರಾ ಹಬ್ಬದ ವೇಳೆ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ನೈಋತ್ಯ ರೈಲ್ವೆಯು ವಿವಿಧ ಸ್ಥಳಗಳ ನಡುವೆ ಇಪ್ಪತ್ತೆರಡು ಹಬ್ಬದ ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ. ಬೆಂಗಳೂರು: ನಾಳೆ ಮತ್ತು ನಾಡಿದ್ದು ಗೌರಿ ಗಣೇಶ ಹಬ್ಬ, ನಂತರ ಮುಂದಿನ ತಿಂಗಳು ದಸರಾ ಹಾಗೂ ದೀಪಾವಳಿ ಹಬ್ಬಗಳು ಬರುತ್ತಿವೆ. ನಾಡಿನಾದ್ಯಂತ ಆಚರಿಸುವ ಈ ಹಬ್ಬಗಳ ರಜೆಗಳು, ಜನರ ಪ್ರಯಾಣ, ಓಡಾಟ ಹೆಚ್ಚಾಗಿರುವ ಕಾರಣ ನೈಋತ್ಯ ರೈಲ್ವೆ ಇಲಾಖೆ ರಾಜ್ಯಾದ್ಯಂತ 22 ವಿಶೇಷ ರೈಲುಗಳನ್ನು ಘೋಷಣೆ ಮಾಡಿದೆ. ವಿಶೇಷ ರೈಲುಗಳ ವೇಳಾಪಟ್ಟಿ, ಪ್ರಯಾಣದ ಸಮಯಗಳನ್ನು ಕೂಡ ಹಂಚಿಕೊಂಡಿದೆ.ಗಣೇಶ ಚತುರ್ಥಿ ವಿಶೇಷ ರೈಲುಗಳ ವಿವರಇಂದು ಸೆಪ್ಟೆಂಬರ್ 5 ರಿಂದ 7 ರವರೆಗೆ ಬೆಂಗಳೂರು ಮತ್ತು ಕಲಬುರಗಿ ನಡುವೆ ವಿಶೇಷ ರೈಲುಗಳ ಸಂಚಾರ ನಡೆಸಲಿದೆ. ಬೆಂಗಳೂರು ಕಲಬುರಗಿ ವಿಶೇಷ ರೈಲು ಎಸ್ಎಂವಿಟಿ ಬೆಂಗಳೂರಿನಿಂದ ರಾತ್ರಿ 9:15 ಕ್ಕೆ ಹೊರಟು ಮರುದಿನ ಬೆಳಿಗ್ಗೆ 7:40 ಕ್ಕೆ ಕಲಬುರಗಿಗೆ ತಲುಪಲಿದೆ. ಅದೇ ರೀತಿ, ಸೆಪ್ಟೆಂಬರ್ 6 ರಿಂದ 8 ರವರೆಗೆ, ಕಲಬುರಗಿಯಿಂದ ಹಿಂತಿರುಗುವ ರೈಲು ಬೆಳಿಗ್ಗೆ 9:35 ಕ್ಕೆ ಹೊರಟು ಅದೇ ದಿನ ರಾತ್ರಿ 8:00 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪುತ್ತದೆ.ಗಣೇಶ ಚತುರ್ಥಿ, ದೀಪಾವಳಿ ಮತ್ತು ದಸರಾ ಹಬ್ಬದ ವೇಳೆ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ನೈಋತ್ಯ ರೈಲ್ವೆಯು ವಿವಿಧ ಸ್ಥಳಗಳ ನಡುವೆ ಇಪ್ಪತ್ತೆರಡು ಹಬ್ಬದ ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ.ದೀಪಾವಳಿ ವಿಶೇಷ ರೈಲುಗಳ ವಿವರಅಕ್ಟೋಬರ್ 30 ಮತ್ತು ನವೆಂಬರ್ 2 ರಂದು ಮೈಸೂರು ಮತ್ತು ವಿಜಯಪುರ ನಡುವೆ ವಿಶೇಷ ರೈಲುಗಳು ಕಾರ್ಯನಿರ್ವಹಿಸಲಿವೆ. ವಿಜಯಪುರದಿಂದ ಮೈಸೂರಿಗೆ ಹಿಂದಿರುಗುವ ರೈಲು ಅಕ್ಟೋಬರ್ 31 ಮತ್ತು ನವೆಂಬರ್ 3 ರಂದು ಸಂಚರಿಸಲಿದೆ. ಜತೆಗೆ, ಅಕ್ಟೋಬರ್ 30 ರಂದು ಯಶವಂತಪುರ ಮತ್ತು ಬೆಳಗಾವಿ ನಡುವೆ ವಿಶೇಷ ರೈಲುಗಳು ಸಂಚರಿಸಲಿವೆ. ನವೆಂಬರ್ 1, ಅಕ್ಟೋಬರ್ 31 ಮತ್ತು ನವೆಂಬರ್ 3 ರಂದು ಹಿಂದಿರುಗಲಿವೆ.ಪ್ರಯಾಣಿಕರ ವಿಶೇಷ ಗಮನಕ್ಕೆ: ಗಣೇಶ ಚತುರ್ಥಿ, ದೀಪಾವಳಿ ಮತ್ತು ದಸರಾ ಹಬ್ಬದ ವೇಳೆ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ನೈಋತ್ಯ ರೈಲ್ವೆಯು ವಿವಿಧ ಸ್ಥಳಗಳ ನಡುವೆ ಇಪ್ಪತ್ತೆರಡು ಹಬ್ಬದ ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ. ಅವುಗಳು ಈ ಕೆಳಗಿನಂತಿವೆ.# ../CMvYHQfpZCದಸರಾ ವಿಶೇಷ ರೈಲುಗಳ ವಿವರದಸರಾ ಹಬ್ಬದ ಪ್ರಯುಕ್ತ ಅಕ್ಟೋಬರ್ 9 ಮತ್ತು 12 ರಂದು ಎಸ್ಎಂವಿಟಿ ಬೆಂಗಳೂರಿನಿಂದ ವಿಜಯಪುರಕ್ಕೆ ವಿಶೇಷ ರೈಲುಗಳು ಇರಲಿವೆ. ಅಕ್ಟೋಬರ್ 10 ಮತ್ತು 13 ರಂದು ರೈಲುಗಳು ಹಿಂತಿರುಗಲಿವೆ. ಅಕ್ಟೋಬರ್ 9 ಮತ್ತು 12 ರಂದು ಯಶವಂತಪುರ ಮತ್ತು ಬೆಳಗಾವಿ ನಡುವೆ ವಿಶೇಷ ರೈಲುಗಳು ಕಾರ್ಯನಿರ್ವಹಿಸಲಿದ್ದು, ಅಕ್ಟೋಬರ್ 10 ಮತ್ತು 13 ರಂದು ಹಿಂದಿರುಗಲಿವೆ. ಇದಲ್ಲದೆ, ಅಕ್ಟೋಬರ್ 9 ರಿಂದ 13 ರವರೆಗೆ ಮೈಸೂರು-ಕೆಎಸ್ಆರ್ ಬೆಂಗಳೂರು ಮಾರ್ಗದಲ್ಲಿ ಮತ್ತು ಅಕ್ಟೋಬರ್ 10 ರಿಂದ 14 ರವರೆಗೆ ಕೆಎಸ್ಆರ್ ಬೆಂಗಳೂರು-ಮೈಸೂರು ವಿಶೇಷ ರೈಲುಗಳು ಚಲಿಸಲಿವೆ.ಇದೇ ಅವಧಿಯಲ್ಲಿ ಚಾಮರಾಜನಗರ ಮತ್ತು ಮೈಸೂರು ನಡುವೆ ಹೆಚ್ಚುವರಿ ಸೇವೆಗಳು ಲಭ್ಯವಿರುತ್ತವೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.