ಬೆಂಗಳೂರು: ಪತಿಯ ಅಕ್ರಮ ಸಂಬಂಧಕ್ಕೆ ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣು 6 ವರ್ಷದ ಹಿಂದೆ ಪ್ರೀತಿಸಿ ಮಾನಸಾ ಹಾಗೂ ದಿಲೀಪ್ ವಿವಾಹವಾಗಿದ್ದು, ಈ ದಂಪತಿಗೆ 3 ವರ್ಷದ ಹೆಣ್ಣು ಮಗುವಿದೆ. ಪತಿಯ ಅಕ್ರಮ ಸಂಬಂಧ ವಿಚಾರವಾಗಿ ಆಗಾಗ್ಗೆ ದಂಪತಿಗಳ ನಡುವೆ ನಿತ್ಯ ಜಗಳವಾಗುತ್ತಿತ್ತು. ತನ್ನದೇ ತಪ್ಪಿದ್ದರೂ ಮಹಿಳೆಯ ಪತಿ ದಿಲೀಪ್ ಮಾನಸಾಗೆ ಹೊಡೆಯೋದು ಬಡಿಯೋದು ಮಾಡುತ್ತಿದ್ದ. ಬೆಂಗಳೂರು: ಪತಿಯ ಅಕ್ರಮ ಸಂಬಂಧಕ್ಕೆ ಮನನೊಂದ ಪತ್ನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ.ಮಾಗಡಿ ರಸ್ತೆ ಬ್ಯಾಡರಹಳ್ಳಿ ಸಮೀಪದ ವಿದ್ಯಾಮಾನ ನಗರದ ನಿವಾಸಿ ಮಾನಸಾ (25) ಮೃತ ಮಹಿಳೆ. ಮೃತ ಮಹಿಳೆ ಮೊಬೈಲ್ ನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ತಾನೇ ಚಿತ್ರೀಕರಿಸಿಕೊಂಡಿರುವ ವಿಡಿಯೋ ಪತ್ತೆಯಾಗಿದೆ.ಮನೆಯಲ್ಲಿ ಭಾನುವಾಹ ಮಧ್ಯಾಹ್ನ ಮಾನಸಾ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕೆಲ ಹೊತ್ತಿನ ಬಳಿಕ ಪತಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಮೃತ ಮಹಿಳೆ ತಂದೆ ನೀಡಿದ ದೂರಿನ ಮೇರೆಗೆ ಮಾನಸಾ ಪತಿ ದಿಲೀಪ್ ನನ್ನು ಬ್ಯಾಡರಹಳ್ಳಿ ಠಾಣ ಪೊಲೀಸರು ಬಂಧಿಸಿದ್ದಾರೆ.6 ವರ್ಷದ ಹಿಂದೆ ಪ್ರೀತಿಸಿ ಮಾನಸಾ ಹಾಗೂ ದಿಲೀಪ್ ವಿವಾಹವಾಗಿದ್ದು, ಈ ದಂಪತಿಗೆ 3 ವರ್ಷದ ಹೆಣ್ಣು ಮಗುವಿದೆ. ಪತಿಯ ಅಕ್ರಮ ಸಂಬಂಧ ವಿಚಾರವಾಗಿ ಆಗಾಗ್ಗೆ ದಂಪತಿಗಳ ನಡುವೆ ನಿತ್ಯ ಜಗಳವಾಗುತ್ತಿತ್ತು. ತನ್ನದೇ ತಪ್ಪಿದ್ದರೂ ಮಹಿಳೆಯ ಪತಿ ದಿಲೀಪ್ ಮಾನಸಾಗೆ ಹೊಡೆಯೋದು ಬಡಿಯೋದು ಮಾಡುತ್ತಿದ್ದ ಎನ್ನಲಾಗಿದೆ.ಈ ಹಿನ್ನೆಲೆಯಲ್ಲಿ ಕಿರುಕುಳ ಸಹಿಸಲಾರದೆ ಮಾನಸಾ ಆತ್ಮಹತ್ಯೆಗೆ ನಿರ್ಧರಿಸಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಭಾನುವಾರ ಮಧ್ಯಾಹ್ನ 3.30ರ ಸುಮಾರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದೀಗ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದ್ದು, ಬ್ಯಾಡರಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.